• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಏ.28ರಿಂದ ದಕ್ಷಿಣ ಒಳನಾಡು ಹಾಗೂ ಉತ್ತರ ಕೇರಳದಲ್ಲಿ ಮಳೆ

|

ಭಾರತೀಯ ಹವಾಮಾನ ಇಲಾಖೆ (ಐಎಂಡಿ)ಯ ರಾಷ್ಟ್ರೀಯ ಹವಾಮಾನ ಮುನ್ಸೂಚನಾ ಕೇಂದ್ರದ ವರದಿಯಂತೆ ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಉತ್ತರ ಕೇರಳದಲ್ಲಿ ಏಪ್ರಿಲ್ 28 ರಿಂದ ಮೂರು ದಿನ ಭಾರಿ ಮಳೆಯಾಗಲಿದೆ.

ಏಪ್ರಿಲ್ 26ರಂದು ತೆಲಂಗಾಣ, ಕೇರಳ, ಮಾಹೆ ಒಳನಾಡು ಪ್ರದೇಶಗಳಲ್ಲಿ ಮಿಂಚು, ಗಾಳಿ ಸಹಿತ (ಗಾಳಿಯ ವೇಗ ಗಂಟೆಗೆ 30-40 ಕಿ.ಮೀ) ಚಂಡಮಾರುತ ಬೀಸಿದೆ. ಮತ್ತು ಪಶ್ಚಿಮ ಬಂಗಾಳ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪ, ಮಧ್ಯ ಮಹಾರಾಷ್ಟ್ರ, ಮಾರಾಠವಾಡ, ರಾಯಲಸೀಮಾ, ಕರ್ನಾಟಕದ ದಕ್ಷಿಣ ಒಳನಾಡು, ತಮಿಳುನಾಡು, ಪುದುಚೆರಿ ಮತ್ತು ಕರೈಕಲ್ ನ ಒಳನಾಡು ಪ್ರದೇಶಗಳಲ್ಲಿ ಮಿಂಚು ಬಿರುಗಾಳಿ ಬೀಸಿದೆ.

ಮುಂದಿನ 3 ದಿನ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುಂದಿನ 3 ದಿನ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ

ಸ್ಥಳ ನಿರ್ದಿಷ್ಟ ಮುನ್ನೆಚ್ಚರಿಕೆ ಮತ್ತು ಹವಾಮಾನ ಮುನ್ಸೂಚನೆಗಳಿಗಾಗಿ ಮೌಸಮ್ ಆಪ್ MAUSAM APP ಕೃಷಿ ಸಂಬಂಧಿತ ಮುನ್ಸೂಚನೆಗಳಿಗೆ ಮೇಘದೂತ್ ಆಪ್ MEGHDOOT APP ಮತ್ತು ಮಿಂಚು, ಸಿಡಿಲಿನ ಮುನ್ನೆಚ್ಚರಿಕೆಗಾಗಿ ದಾಮಿನಿ ಆಪ್ DAMINI APP ಡೌನ್ ಲೋಡ್ ಮಾಡಿಕೊಳ್ಳಿ. ಜಿಲ್ಲಾವಾರು ಹವಾಮಾನ ಮುನ್ಸೂಚನೆಗಳಿಗಾಗಿ ಎಂ.ಸಿ /ಆರ್.ಎಂ.ಸಿ. ಅಂತರ್ಜಾಲ ತಾಣಕ್ಕೆ ಭೇಟಿ ನೀಡಿ.

ಏಪ್ರಿಲ್ 27ರಂದು ದೇಶದ ವಿವಿಧೆಡೆ ಮಳೆ

ಏಪ್ರಿಲ್ 27ರಂದು ದೇಶದ ವಿವಿಧೆಡೆ ಮಳೆ

ಏಪ್ರಿಲ್ 27ರಂದು ಉತ್ತರಾಖಂಡ, ಅಸ್ಸಾಂ ಮತ್ತು ಮೇಘಾಲಯ, ಮಧ್ಯಪ್ರದೇಶ, ಮಹಾರಾಷ್ಟ್ರ, ಮರಾಠವಾಡ, ತೆಲಂಗಾಣ ಮತ್ತು ಕೇರಳ ಹಾಗೂ ಮಾಹೆಯ ಒಳನಾಡು ಪ್ರದೇಶಗಳಲ್ಲಿ ಮಿಂಚು ಮತ್ತು ಬಿರುಗಾಳಿ ಸಹಿತ(ಪ್ರತಿ ಗಂಟೆಗೆ 30 ರಿಂದ 40 ಕಿ.ಮೀ. ವೇಗ) ಚಂಡಮಾರುತ ಸಾಧ್ಯತೆ ಇದೆ. ಅಲ್ಲದೆ ಜಮ್ಮುಕಾಶ್ಮೀರ, ಲಡಾಖ್, ಗಿಲ್ಗಿತ್-ಬಾಲ್ಟಿಸ್ತಾನ್, ಮುಜಫರಾಬಾದ್, ಹಿಮಾಚಲಪ್ರದೇಶ, ಪಶ್ಚಿಮ ಬಂಗಾಳದ ಗ್ಯಾಂಗ್ ಟಕ್ ಪ್ರದೇಶ, ಒಡಿಶಾ, ಅರುಣಾಚಲಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಮಿಝೋರಾಂ ಮತ್ತು ತ್ರಿಪುರಾ, ಕೊಂಕಣ ಮತ್ತು ಗೋವಾ, ಆಂಧ್ರಪ್ರದೇಶದ ಕರಾವಳಿ ಮತ್ತು ಯಾಣಂ, ರಾಯಲಸೀಮಾ, ಕರ್ನಾಟಕದ ದಕ್ಷಿಣ ಒಳನಾಡು ಮತ್ತು ತಮಿಳುನಾಡು, ಪುದುಚೆರಿ ಮತ್ತು ಕರೈಕಲ್ ನ ಪ್ರದೇಶದಲ್ಲಿ ಬಿರುಗಾಳಿ ಸಾಧ್ಯತೆ ಇದೆ.

ಭಾರೀ ಮಳೆಯಾಗುವ ಸಾಧ್ಯತೆ

ಭಾರೀ ಮಳೆಯಾಗುವ ಸಾಧ್ಯತೆ

ಏಪ್ರಿಲ್ 28ರಂದು ಉತ್ತರಾಖಂಡ, ಛತ್ತೀಸ್ ಗಢ, ವಿದರ್ಭಾ, ಪಶ್ಚಿಮ ಬಂಗಾಳದ ಉಪ ಹಿಮಾಲಯ ಮತ್ತು ಸಿಕ್ಕಿಂ ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯ, ಮಧ್ಯ ಮಹಾರಾಷ್ಟ್ರ ಮರಾಠವಾಡ, ತೆಲಂಗಾಣ ಮತ್ತು ಕೇರಳ ಹಾಗೂ ಮಾಹೆಯ ಒಳನಾಡು ಪ್ರದೇಶಗಳಲ್ಲಿ ಮಿಂಚು ಮತ್ತು ಬಿರುಗಾಳಿ ಸಹಿತ(ಪ್ರತಿ ಗಂಟೆಗೆ 30 ರಿಂದ 40 ಕಿ.ಮೀ. ವೇಗ) ಚಂಡಮಾರುತ ಸಾಧ್ಯತೆ ಇದೆ. ಅಲ್ಲದೆ ಜಮ್ಮುಕಾಶ್ಮೀರ, ಲಡಾಖ್, ಗಿಲ್ಗಿತ್-ಬಾಲ್ಟಿಸ್ತಾನ್, ಮುಜಫರಾಬಾದ್, ಹಿಮಾಚಲಪ್ರದೇಶ, ಪಶ್ಚಿಮ ಬಂಗಾಳದ ಗ್ಯಾಂಗ್ ಟೆಕ್ ಪ್ರದೇಶ, ಒಡಿಶಾ, ನಾಗಾಲ್ಯಾಂಡ್, ಮಣಿಪುರ, ಮಿಝೋರಾಂ ಮತ್ತು ತ್ರಿಪುರಾ, ಕೊಂಕಣ ಮತ್ತು ಗೋವಾ, ಆಂಧ್ರಪ್ರದೇಶದ ಕರಾವಳಿ ಮತ್ತು ಯಾಣಂ, ರಾಯಲಸೀಮಾ, ಕರ್ನಾಟಕದ ದಕ್ಷಿಣ ಒಳನಾಡು ಮತ್ತು ತಮಿಳುನಾಡು, ಪುದುಚೆರಿ ಮತ್ತು ಕರೈಕಲ್ ನ ಪ್ರದೇಶದಲ್ಲಿ ಬಿರುಗಾಳಿ ಸಾಧ್ಯತೆ ಇದೆ.

·ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಉತ್ತರ ಕೇರಳದ ಒಳನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

 ಬಿರುಗಾಳಿ ಸಹಿತ ಮಳೆ

ಬಿರುಗಾಳಿ ಸಹಿತ ಮಳೆ

ಏಪ್ರಿಲ್ 29(ನಾಲ್ಕನೇ ದಿನ): ಉತ್ತರಾಖಂಡ, ವಿದರ್ಭ, ಛತ್ತೀಸ್ ಗಢ, ಪಶ್ಚಿಮಬಂಗಾಳ, ಸಿಕ್ಕಿಂ, ಒಡಿಶಾ, ಅರುಣಾಚಲಪ್ರದೇಶ ಅಸ್ಸಾಂ ಮತ್ತು ಮೇಘಾಲಯ, ಆಂಧ್ರಪ್ರದೇಶದ ಕರಾವಳಿ ಮತ್ತು ಯಾಣಂ, ತೆಲಂಗಾಣ ಮತ್ತು ಕೇರಳ ಹಾಗೂ ಮಾಹೆಯ ಒಳನಾಡು ಪ್ರದೇಶಗಳಲ್ಲಿ ಮಿಂಚು ಮತ್ತು ಬಿರುಗಾಳಿ ಸಹಿತ(ಪ್ರತಿ ಗಂಟೆಗೆ 30 ರಿಂದ 40 ಕಿ.ಮೀ. ವೇಗ) ಚಂಡಮಾರುತ ಬೀಸುವ ಸಾಧ್ಯತೆ ಇದೆ. ಅಲ್ಲದೆ ಜಮ್ಮುಕಾಶ್ಮೀರ, ಲಡಾಖ್, ಗಿಲ್ಗಿತ್-ಬಾಲ್ಟಿಸ್ತಾನ್, ಮುಜಫರಾಬಾದ್, ಹಿಮಾಚಲಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಮಿಝೋರಾಂ ಮತ್ತು ತ್ರಿಪುರಾ, ರಾಯಲಸೀಮಾ, ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡು, ಲಕ್ಷದ್ವೀಪ ಮತ್ತು ತಮಿಳುನಾಡು, ಪುದುಚೆರಿ ಮತ್ತು ಕರೈಕಲ್ ನ ಒಳನಾಡು ಪ್ರದೇಶದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ.

· ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಉತ್ತರ ಕೇರಳದ ಒಳನಾಡು ಪ್ರದೇಶಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ.

ಮಿಂಚು ಮತ್ತು ಬಿರುಗಾಳಿ ಸಹಿತ ಮಳೆ

ಮಿಂಚು ಮತ್ತು ಬಿರುಗಾಳಿ ಸಹಿತ ಮಳೆ

ಏಪ್ರಿಲ್ 30(ಐದನೇ ದಿನ): ಉತ್ತರಾಖಂಡ, ವಿದರ್ಭ, ಛತ್ತೀಸ್ ಗಢ, ಪಶ್ಚಿಮಬಂಗಾಳ ಮತ್ತು ಸಿಕ್ಕಿಂ, ಒಡಿಶಾ, ಅರುಣಾಚಲಪ್ರದೇಶ ಅಸ್ಸಾಂ ಮತ್ತು ಮೇಘಾಲಯ, ಆಂಧ್ರಪ್ರದೇಶದ ಕರಾವಳಿ ಮತ್ತು ಯಾಣಂ, ತೆಲಂಗಾಣ ಮತ್ತು ಕೇರಳ ಹಾಗೂ ಮಾಹೆಯ ಒಳನಾಡು ಪ್ರದೇಶಗಳಲ್ಲಿ ಮಿಂಚು ಮತ್ತು ಬಿರುಗಾಳಿ ಸಹಿತ(ಪ್ರತಿ ಗಂಟೆಗೆ 30 ರಿಂದ 40 ಕಿ.ಮೀ. ವೇಗ) ಚಂಡಮಾರುತ ಬೀಸುವ ಸಾಧ್ಯತೆ ಇದೆ. ಅಲ್ಲದೆ ಜಮ್ಮುಕಾಶ್ಮೀರ, ಲಡಾಖ್, ಗಿಲ್ಗಿತ್-ಬಾಲ್ಟಿಸ್ತಾನ್, ಮುಜಫರಾಬಾದ್, ಹಿಮಾಚಲಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಮಿಝೋರಾಂ ಮತ್ತು ತ್ರಿಪುರಾ, ರಾಯಲಸೀಮಾ, ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡು, ತಮಿಳುನಾಡು, ಪುದುಚೆರಿ ಮತ್ತು ಕರೈಕಲ್‌ನ ಒಳನಾಡು ಪ್ರದೇಶದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ.

·ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಉತ್ತರ ಕೇರಳದ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

English summary
According to the National Weather Forecasting Centre of the India Meteorological Department (IMD) Heavy rainfall likely at isolated places over South Interior Karnataka and north Kerala on 28th, 29th & 30th April.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X