ಮುಂಗಾರು ಅಬ್ಬರ; ಮುಂದಿನ ಆರೇಳು ದಿನ ಈ ಪ್ರದೇಶಗಳಲ್ಲಿ ಮಳೆ

ನವದೆಹಲಿ, ಜುಲೈ 16: ದೇಶದಲ್ಲಿ ಮುಂಗಾರು ಪುನರಾರಂಭವಾಗಿದ್ದು, ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮುಂದಿನ ಆರೇಳು ದಿನಗಳ ಕಾಲವೂ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜುಲೈ 17ರಿಂದ 20ರವರೆಗೆ ಹಿಮಾಲಯದ ಪ್ರದೇಶಗಳು ಹಾಗೂ ಉತ್ತರ ಪ್ರದೇಶದಲ್ಲಿ ಅಧಿಕ ಮಟ್ಟದಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.

ಪಂಜಾಬ್, ಹರಿಯಾಣ, ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಜುಲೈ 18ರಿಂದ 20ರವರೆಗೆ ಮಳೆಯಾಗಲಿದೆ. ದೆಹಲಿಯಲ್ಲಿ ಜುಲೈ 18ರಂದು ಹೆಚ್ಚಿನ ಮಳೆಯಾಗಲಿದೆ. ಉತ್ತರ ಪ್ರದೇಶದಲ್ಲಿ ಜುಲೈ 18ರಂದು, ಜಮ್ಮುವಿನಲ್ಲಿ ಜುಲೈ 19ರಂದು, ಉತ್ತರಾಖಂಡದಲ್ಲಿ ಜುಲೈ 18 ಹಾಗೂ 19ರಂದು ಅಧಿಕ ಮಳೆಯಾಗುವುದಾಗಿ ತಿಳಿಸಿದೆ. ಗುಜರಾತ್, ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಮುಂದಿನ 24 ಗಂಟೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ತಿಳಿಸಿದೆ.

Heavy Rainfall Over North India In 6-7 Days IMD

ಪಶ್ಚಿಮ ಕರಾವಳಿಯಲ್ಲಿಯೂ ಮುಂದಿನ ಆರರಿಂದ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಅಂದಾಜಿಸಲಾಗಿದೆ.

ಕೊಂಕಣ, ಗೋವಾ, ಮಹಾರಾಷ್ಟ್ರ, ಕರ್ನಾಟಕ, ಕೇರಳದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎನ್ನಲಾಗಿದೆ. ಈಶಾನ್ಯ ಭಾಗವು ಈ ಅವಧಿಯಲ್ಲಿ ಹೆಚ್ಚಿನ ಮಳೆ ಪಡೆಯುವುದಾಗಿ ತಿಳಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+