ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

|
Google Oneindia Kannada News

ನವದೆಹಲಿ, ಜೂನ್ 27: ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಸೋಮವಾರದಿಂದ ಮುಂಗಾರು ಚುರುಕುಗೊಳ್ಳಲಿದೆ ಎಂದು ಮುನ್ಸೂಚನೆ ನೀಡಿದೆ. ಹಲವಾರು ರಾಜ್ಯಗಳಲ್ಲಿ ಭಾರೀ ಮಳೆ, ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ ಎಂದು ಎಚ್ಚರಿಕೆ ನೀಡಿದೆ.

ಭಾರತೀಯ ಹವಾಮಾನ ಇಲಾಖೆ ಕೊಂಕಣ ಮತ್ತು ಗೋವಾದ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಹಲವಾರು ಉತ್ತರ ಮತ್ತು ಪೂರ್ವ ರಾಜ್ಯಗಳು ಉತ್ತರಾಖಂಡ, ಮಧ್ಯಪ್ರದೇಶ, ವಿದರ್ಭ, ಛತ್ತೀಸ್‌ಗಢ, ಬಿಹಾರ, ಪಶ್ಚಿಮ ಬಂಗಾಳ (ಉಪ-ಹಿಮಾಲಯ), ಸಿಕ್ಕಿಂ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಗುಜರಾತ್, ಮಹಾರಾಷ್ಟ್ರ (ಮಧ್ಯ), ಕರ್ನಾಟಕ (ಕರಾವಳಿ), ಕೇರಳ - ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆ ಬೀಳುವ ನಿರೀಕ್ಷೆಯಿದೆ.

ಬಿಹಾರದಲ್ಲಿ ಗುಡುಗು ಸಹಿತ ಮಿಂಚು ಮತ್ತು ಬಿರುಗಾಳಿ ಸಹಿತ ಹಲವು ಸ್ಥಳಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಮಧ್ಯಪ್ರದೇಶ, ಛತ್ತೀಸ್‌ಗಢ, ಜಾರ್ಖಂಡ್, ಪಶ್ಚಿಮ ಬಂಗಾಳ, ಒಡಿಶಾ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ತಮಿಳುನಾಡು, ಪುದುಚೇರಿ, ಕೇರಳ ಮತ್ತು ಲಕ್ಷದ್ವೀಪ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಪ್ರತ್ಯೇಕವಾದ ಗುಡುಗು-ಮಿಂಚು ಸಹಿತ ಮಳೆಯಾಗಲಿದೆ ಎಂದು ಹೇಳಿದೆ.

ಕರ್ನಾಟಕ ರಾಜ್ಯದಲ್ಲಿ ಕೂಡ ಭಾರಿ ಆಗಲಿದೆ ಎಂದಿರುವ ಹವಾಮಾನ ಇಲಾಖೆ ಕರಾವಳಿ ಭಾಗಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿಯಲ್ಲಿ ಅಲೆಗಳ ರಭಸ ಹೆಚ್ಚಿರುವ ಕಾರಣ ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರಿನಲ್ಲೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

Heavy Rainfall Thunderstorm Is Expected In Several States: IMD

60 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ

ಪೂರ್ವ ಮಧ್ಯ ಮತ್ತು ಈಶಾನ್ಯ ಅರೇಬಿಯನ್ ಸಮುದ್ರ, ದಕ್ಷಿಣ ಗುಜರಾತ್, ಮಹಾರಾಷ್ಟ್ರ, ಗೋವಾ, ಕರ್ನಾಟಕ ಕರಾವಳಿಯ ಉದ್ದಕ್ಕೂ ಮತ್ತು ಅದರ ಹೊರಭಾಗದಲ್ಲಿ ಗಾಳಿಯ ವೇಗ ಗಂಟೆಗೆ 40 ರಿಂದ 50 ಕಿ.ಮೀ. ಮತ್ತು ಗಂಟೆಗೆ 60 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.

Heavy Rainfall Thunderstorm Is Expected In Several States: IMD

ಭಾರತೀಯ ಹವಾಮಾನ ಇಲಾಖೆ ಸೋಮವಾರ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಿದೆ, ನೈಋತ್ಯ ಮತ್ತು ಪಶ್ಚಿಮ ಮಧ್ಯ ಅರೇಬಿಯನ್ ಸಮುದ್ರದಲ್ಲಿ ಗಂಟೆಗೆ 50-60 ಕಿಮೀ ವೇಗದಲ್ಲಿ ಮತ್ತು 70 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಮುನ್ಸೂಚನೆ ನೀಡಿದೆ.

English summary
The India Meteorological Department Said heavy rainfall, thunderstorm and squally weather is expected in several states.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X