Heavy Rain: ಈ ಭಾಗಗಳಲ್ಲಿ ಧಾರಾಕಾರ ಮಳೆ: ಐಎಂಡಿ ಮುನ್ಸೂಚನೆ!
Heavy Rain: ಕರ್ನಾಟಕವೂ ಸೇರಿದಂತೆ ಭಾರತದ ವಿವಿಧ ರಾಜ್ಯಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಬದಲಾದ ಹವಾಮಾನ ಪರಿಸ್ಥಿತಿಯಲ್ಲಿ ದೇಶದ ವಿವಿಧ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದರೆ, ಇನ್ನೂ ಕೆಲವು ಭಾಗದಲ್ಲಿ ಶಾಖದ ಅಲೆ ಹೆಚ್ಚಾಗಿದೆ. ಉತ್ತರ ಭಾರತ ಹಾಗೂ ದಕ್ಷಿಣ ಭಾರತದ ವಿವಿಧ ಭಾಗದಲ್ಲಿ ವೈವಿಧ್ಯಮಯ ವಾತಾವರಣ ಇದೆ. ಭಾರತದ ಪಶ್ಚಿಮ ಹಾಗೂ ಉತ್ತರ ಭಾರತದ ಕೆಲವು ಭಾಗಗಳಲ್ಲಿ ತೀವ್ರ ಶಾಖವು ಮುಂದುವರೆದಿದ್ದರೆ, ಕರ್ನಾಟಕ ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ದೇಶದ ಯಾವ ಭಾಗದಲ್ಲಿ ಮಳೆ ಹಾಗೂ ಹವಾಮಾನ ಪರಿಸ್ಥಿತಿ ಹೇಗಿದೆ. ಇದು ಕರ್ನಾಟಕದ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.
ಭಾರತದ ಪಶ್ಚಿಮ ಹಾಗೂ ಉತ್ತರದ ಜಿಲ್ಲೆಗಳಲ್ಲಿ ಬಿಸಿಲ ಝಳವು ತೀವ್ರವಾಗಿದೆ. ರಾಜಸ್ಥಾನ ಸೇರಿದಂತೆ ವಿವಿಧ ಭಾಗದಲ್ಲಿ ಶಾಖದ ಅಲೆಯು ಮಿತಿ ಮೀರಿದೆ. ಈ ಜಿಲ್ಲೆಯಲ್ಲಿ ತಾಪಮಾನವು ಬರೋಬ್ಬರಿ 46 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಾಗಿದೆ. ನೆರೆಯ ಗುಜರಾತ್‌ನಲ್ಲೂ ಶಾಖದ ಅಲೆ ಹೆಚ್ಚಾಗಿದೆ. ಗುಜರಾತ್ ಜಿಲ್ಲೆಯ ವಿವಿಧ ಭಾಗದಲ್ಲಿ ತಾಪಮಾನವು ಬರೋಬ್ಬರಿ 40 ಡಿಗ್ರಿ ಸೆಲ್ಸಿಯಸ್ ತಲುಪಿದೆ. ಇನ್ನು ಹರಿಯಾಣ, ದೆಹಲಿ ಹಾಗೂ ಪಶ್ಚಿಮ ಉತ್ತರ ಪ್ರದೇಶದಲ್ಲಿ ಬಿಸಿಲ ಝಳವು ನೆತ್ತಿಸುಡುವಂತೆ ಇದೆ.

ಇನ್ನು ದೆಹಲಿಯಲ್ಲಿ ತಾಪಮಾನವು ಪ್ರತಿ ಆರು ತಿಂಗಳಿಗೊಮ್ಮೆ ಬದಲಾಗುತ್ತಿರುತ್ತದೆ. ಇದೀಗ ದೆಹಲಿಯಲ್ಲಿ ಬಿಸಿಲ ಝಳವು ತೀವ್ರವಾಗಿದೆ. ಬಿಸಿಲ ತಾಪಮಾನವು ನಿರಂತರವಾಗಿ ಹೆಚ್ಚಳವಾಗುತ್ತಿದೆ. ದೆಹಲಿಯಲ್ಲಿ ಈ ವಾರ ತಾಪಮಾನವೂ ಭಾರೀ ಏರಿಕೆ ಕಂಡಿದೆ. ದೆಹಲಿಯಲ್ಲಿ ಈ ವಾರ 41 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ತಾಪಮಾನ ಹೆಚ್ಚಳವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ಇಂದಿನಿಂದ ಬಿಹಾರ, ಪಶ್ಚಿಮ ಬಂಗಾಳ, ಒಡಿಶಾ ಹಾಗೂ ಈಶಾನ್ಯ ರಾಜ್ಯಗಳ ಭಾಗದಲ್ಲಿ ಮಿಂಚು ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಭಾರತ ಹವಾಮಾನ ಇಲಾಖೆ (IMD) ವರದಿ ಮಾಡಿದೆ. ಇನ್ನು ಒಡಿಶಾದಲ್ಲಿ ತಾಪಮಾನವು ಈಚೆಗೆ 42ರಿಂದ 43 ಡಿಗ್ರಿ ಸೆಲ್ಸಿಯಸ್ ತಲುಪಿತ್ತು. ಇದೀಗ ಈ ಭಾಗದಲ್ಲಿ ಮಳೆ ಬೀಳುತ್ತಿದೆ. ಇನ್ನು ಮೇಘಾಲಯ, ಅಸ್ಸಾಂ, ಸಿಕ್ಕಿಂ, ಬಿಹಾರ, ಪಶ್ಚಿಮ ಬಂಗಾಳ ಹಾಗೂ ಒಡಿಶಾ ಸೇರಿದಂತೆ ಸುತ್ತಮುತ್ತಲಿನ ರಾಜ್ಯಗಳಲ್ಲಿ ಮಳೆ ತೀವ್ರತೆ ಜೋರಾಗಿ ಇರಲಿದೆ ಎಂದು ಐಎಂಡಿ ರಿಪೋರ್ಟ್ ಹೇಳಿದೆ.
ಶಾಖದ ಅಲೆ ತೀವ್ರ: ಉತ್ತರ ಹಾಗೂ ಈಶಾನ್ಯ ಭಾಗದಲ್ಲಿ ಮಳೆಯಾಗುತ್ತಿದ್ದರೆ, ಇನ್ನುಳಿದ ಭಾಗದಲ್ಲಿ ಶಾಖದ ಅಲೆಯು ತೀವ್ರವಾಗಿದೆ. ದೆಹಲಿ, ರಾಜಸ್ಥಾನ ಹಾಗೂ ಗುಜರಾತ್ ಭಾಗದಲ್ಲಿ ತೀವ್ರ ಶಾಖದ ಅಲೆ ಇದೆ.
ದಕ್ಷಿಣ ಭಾರತದಲ್ಲಿ ಹೇಗಿದೆ ?
ಇನ್ನು ದಕ್ಷಿಣ ಭಾರತದ ಕರ್ನಾಟಕ ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಉತ್ತರ ಕರ್ನಾಟಕದ ವಿವಿಧ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ತೆಲಂಗಾಣ, ರಾಯಲಸೀಮಾ ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಬೆಂಗಳೂರು ಸೇರಿದಂತೆ ವಿವಿಧ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ.












Click it and Unblock the Notifications