Rain: ಈ ಭಾಗಗಳಲ್ಲಿ ಧಾರಾಕಾರ ಮಳೆ: ರೆಡ್ & ಆರೆಂಜ್ ಅಲರ್ಟ್ ಘೋಷಿಸಿದ ಐಎಂಡಿ!

ಕರ್ನಾಟಕ ಸೇರಿದಂತೆ ದೇಶದಾದ್ಯಂತ ಭಾರೀ ಮಳೆ ಮುಂದುವರಿದಿದೆ. ವಿವಿಧ ರಾಜ್ಯಗಳಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆಯು ಯೆಲ್ಲೋ ಹಾಗೂ ರೆಡ್ ಅಲರ್ಟ್ ಘೋಷಿಸಿದೆ. ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ದಕ್ಷಿಣ ಭಾರತದಲ್ಲಿ ಕರ್ನಾಟಕವೂ ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ದೇಶದಲ್ಲಿ ಎಲ್ಲೆಲ್ಲಿ ಮಳೆ ಆಗುತ್ತಿದೆ ಎನ್ನುವುದರ ಸಂಪೂರ್ಣ ವಿವರ ಇಲ್ಲಿದೆ.

ವಾಯುಭಾರ ಕುಸಿತ ಹಾಗೂ ಚಂಡಮಾರುತದ ಪ್ರಭಾವದಿಂದಾಗಿ ದೇಶದ ವಿವಿಧ ರಾಜ್ಯಗಳಲ್ಲಿ ಮಳೆ ಆರ್ಭಟ ಜೋರಾಗಿದೆ. ಮಂಗಳವಾರ ದೆಹಲಿ - ಎನ್‌ಸಿಆರ್ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಮಿಂಚು - ಗುಡುಗು ಸಹಿತ ಧಾರಾಕಾರ ಮಳೆ ಮುಂದುವರಿದಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಳೆ ಅಬ್ಬರ ಮುಂದುವರಿದಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ. ಇಲ್ಲಿನ ಹಲವು ಪ್ರದೇಶಗಳು ಜಲಾವೃತವಾಗಿದ್ದು ಜನ ಓಡಾಡುವುದಕ್ಕೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನೂ ಎರಡರಿಂದ ಮೂರು ದಿನ ಈ ಭಾಗದಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Heavy rains in parts of India IMD issues red and orange alert

ದೆಹಲಿ, ನೋಯ್ಡಾ, ಗಾಜಿಯಾಬಾದ್, ಗುರುಗ್ರಾಮ್ ಮತ್ತು ಫರಿದಾಬಾದ್ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಭಾರೀ ಮಳೆ ಆಗುತ್ತಿದ್ದು. ಈ ಭಾಗದ ಪ್ರಮುಖ ಹೆದ್ದಾರಿಗಳಲ್ಲಿ ಭಾರೀ ಮಳೆಯಿಂದಾಗಿ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆಗಸ್ಟ್ 17 ರವರೆಗೆ ದೆಹಲಿ ಹಾಗೂ ಎನ್‌ಸಿಆರ್ ಭಾಗದಲ್ಲಿ ಮಳೆ ಆರ್ಭಟ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮುನ್ಸೂಚನೆ ನೀಡಿದೆ. ಉತ್ತರ ಭಾರತ ಹಾಗೂ ಈಶಾನ್ಯ ರಾಜ್ಯಗಳು ಸೇರಿದಂತೆ ವಿವಿಧ ಭಾಗದಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಈ ಭಾಗದಲ್ಲಿ ರೆಡ್ ಹಾಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ ಐದು ದಿನಗಳ ಅವಧಿಯಲ್ಲಿ ಉತ್ತರಾಖಂಡದಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಕೇದಾರನಾಥ ಯಾತ್ರೆ ಸ್ಥಗಿತ: ಭಾರೀ ಮಳೆ ಹಿನ್ನೆಲೆಯಲ್ಲಿ ಕೇದಾರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ರುದ್ರಪ್ರಯಾಗ ಸೇರಿದಂತೆ ಉತ್ತರಾಖಂಡದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿದಿದೆ. ಧಾರಾಕಾರ ಮಳೆ ಹಿನ್ನೆಲಯಲ್ಲಿ ಕೇದಾರನಾಥ ಯಾತ್ರೆಯನ್ನು ಮುಂದಿನ ಮೂರು ದಿನಗಳವರೆಗೆ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ.

ದಕ್ಷಿಣ ಭಾರತದಲ್ಲಿ ಮಳೆ ಆರ್ಭಟ: ಇನ್ನು ಕರ್ನಾಟಕ ಮತ್ತು ಕೇರಳ ರಾಜ್ಯದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಉಳಿದಂತೆ ಆಂಧ್ರಪ್ರದೇಶ ಹಾಗೂ ತೆಲಂಗಾಣ ಮತ್ತು ತಮಿಳುನಾಡಿನಲ್ಲಿ ಸಾಧಾರಣ ಮಳೆ ಮುಂದುವರಿದಿದ್ದು. ಮೋಡ ಕವಿದ ವಾತಾವರಣ ಇದೆ. ಇನ್ನು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತು ಕೇರಳದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಕೇರಳದಲ್ಲಿ ಮುಂದಿನ ದಿನಗಳಲ್ಲಿ ಮಳೆ ಆರ್ಭಟ ಇನ್ನಷ್ಟು ಜೋರಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಕರ್ನಾಟಕದಲ್ಲೂ ಆಗಸ್ಟ್‌ 13 ಅಥವಾ 15ರ ನಂತರ ಮಳೆ ಆರ್ಭಟ ಜೋರಾಗಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ವರದಿ ಉಲ್ಲೇಖಿಸಿದೆ.

ಸಾಮಾನ್ಯ ಮಳೆ: ದೇಶದಲ್ಲಿ ಈ ಬಾರಿ ಮುಂಗಾರು ಅವಧಿಯಲ್ಲಿ ಸಾಧಾರಣ ಮಳೆ ಆಗಿದೆ ಎಂದು ಐಎಂಡಿ ವರದಿ ಹೇಳಿದೆ. ಭಾರತದಲ್ಲಿ ಮುಂಗಾರು ಋತುವಿನಲ್ಲಿ ಇದುವರೆಗೆ ಸಾಮಾನ್ಯ ಪ್ರಮಾಣದ ಮಳೆಯಾಗಿದೆ. ಆದರೆ ರಾಜ್ಯಗಳಲ್ಲಿ ಆ ಮಳೆಯ ಪ್ರಮಾಣ ತೀವ್ರವಾಗಿ ವ್ಯತಿರಿಕ್ತವಾಗಿದೆ ಎಂದು ಹೇಳಲಾಗಿದೆ. ಜೂನ್ 1 ರಿಂದ ಆಗಸ್ಟ್ 10 ರವರೆಗೆ ದೇಶದಲ್ಲಿ 539 ಮಿ.ಮೀ ಮಳೆ ಆಗಿದೆ. ಇದು ದೀರ್ಘಾವಧಿಯ ಸರಾಸರಿ 535.6 ಮಿ. ಮೀಗಿಂತ 1% ಹೆಚ್ಚು ಎಂದು ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+