Heavy Rain: ಈ ಭಾಗಗಳಲ್ಲಿ 3 ದಿನ ಧಾರಾಕಾರ ಮಳೆ: ಐಎಂಡಿ ಆರೆಂಜ್ ಅಲರ್ಟ್!
Heavy Rain: ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ಭಾಗದಲ್ಲಿ ಮಳೆಯಾರ್ಭಟ ಜೋರಾಗಿದೆ. ಜೂನ್ 30ರ ವರೆಗೆ ದೇಶದಲ್ಲಿ ಮಳೆ ಆರ್ಭಟ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ದೇಶದ ವಿವಿಧ ಭಾಗದಲ್ಲಿ ವ್ಯಾಪಕ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ನೆರೆಯ ಕೇರಳ ಹಾಗೂ ಮಹಾರಾಷ್ಟ್ರದಲ್ಲೂ ಮಳೆ ಆರ್ಭಟ ಮುಂದುವರಿದಿದ್ದು ವಿವಿಧ ರಾಜ್ಯಗಳಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ. ಎಲ್ಲೆಲ್ಲಿ ಮಳೆ ಆಗುತ್ತಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ಭಾಗದಲ್ಲಿ ಮಳೆ ಅಬ್ಬರ ಜೋರಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಳೆ ಅಬ್ಬರ ಜೋರಾಗಿದ್ದು ಇಂದು ಈ ಭಾಗದಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇನ್ನು ಎರಡರಿಂದ ಮೂರು ದಿನಗಳ ಕಾಲ ದೆಹಲಿ ಹಾಗೂ ದೆಹಲಿ ಸುತ್ತಮುತ್ತಲಿನ ಪ್ರದೇಶದಲ್ಲಿ ಮಿಂಚು - ಗುಡುಗು ಸಹಿತ ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ದೇಶದಾದ್ಯಂತ ನೈಋತ್ಯ ಮಾನ್ಸೂನ್ ಪ್ರಭಾವ ಜೋರಾಗಿದೆ. ಉತ್ತರ ಭಾರತದ ದೆಹಲಿ ಹಾಗೂ ದಕ್ಷಿಣ ಭಾರತದ ಕೇರಳ ರಾಜ್ಯದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಈ ರಾಜ್ಯಗಳಲ್ಲಿ ಗಾಳಿಯ ವೇಗವು ಪ್ರತಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ರಾಜ್ಯಗಳಲ್ಲಿ ರಣಭೀಕರ ಮಳೆ: ಕರ್ನಾಟಕದ ಕರಾವಳಿ, ಗುಜರಾತ್, ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಗುಜರಾತ್‌ನ ಸೂರತ್‌ನಲ್ಲಿ ತೀವ್ರ ಜಲಾವೃತ ವರದಿಯಾಗಿದ್ದು, ಶಾಲೆಗಳು ಮುಚ್ಚಲ್ಪಟ್ಟಿವೆ. ಮಹಾರಾಷ್ಟ್ರದಲ್ಲಿ, ಗೋದಾವರಿ ನದಿಯಿಂದ ಉಕ್ಕಿ ಹರಿಯುವ ನೀರು ನಾಸಿಕ್‌ನ ಕೆಲವು ಭಾಗಗಳನ್ನು ಮುಳುಗಿಸಿದೆ. ಕೇರಳದ ಹಲವಾರು ಜಿಲ್ಲೆಗಳಲ್ಲಿಯೂ ಮಳೆಯಾಗಿದೆ.
ದೇಶದಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು ಜೂನ್ 30ರ ವರೆಗೆ ಮಳೆ ಮುಂದುವರಿಯಲಿದೆ ಎಂದು ಹೇಳಲಾಗಿದೆ. ಪಂಜಾಬ್, ಹರಿಯಾಣ, ಹಿಮಾಚಲ ಪ್ರದೇಶ, ಉತ್ತರಾಖಂಡ, ಉತ್ತರ ಪ್ರದೇಶ ಹಾಗೂ ರಾಜಸ್ಥಾನ ರಾಜ್ಯಗಳಲ್ಲಿಯೂ ಮಳೆ ಆರ್ಭಟ ಜೋರಾಗಿದೆ. ಬಿಹಾರ, ಜಾರ್ಖಂಡ್, ಒಡಿಶಾ ಮತ್ತು ಛತ್ತೀಸ್‌ಗಢದಲ್ಲಿ ಮಳೆ ಮುಂದುವರಿದಿದೆ. ಈಶಾನ್ಯ ಭಾರತದ ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಹಾಗೂ ತ್ರಿಪುರದಲ್ಲಿ ಇನ್ನೊಂದು ವಾರ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಮೀನುಗಾರರಿಗೆ ಎಚ್ಚರಿಕೆ: ದೇಶದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿರುವುದರಿಂದ ಮೀನುಗಾರರಿಗೆ ವಿಶೇಷ ಎಚ್ಚರಿಕೆಯನ್ನು ನೀಡಲಾಗಿದೆ. ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿ ಭಾಗದ ಸಮುದ್ರ ಪ್ರದೇಶಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಅರಬ್ಬಿ ಸಮುದ್ರ ಭಾಗದಲ್ಲಿ ಗುಜರಾತ್, ಕೊಂಕಣ, ಕರ್ನಾಟಕ ಹಾಗೂ ಕೇರಳ ಕರಾವಳಿ ಭಾಗದಲ್ಲಿ ಭಾರೀ ಮಳೆ ಆಗುತ್ತಿದೆ ಹೀಗಾಗಿ, ಈ ಭಾಗದಲ್ಲಿ ಮೀನುಗಾರರು ಎಚ್ಚರಿಕೆ ವಹಿಸಬೇಕು ಹಾಗೂ ಸಮುದ್ರಕ್ಕೆ ಇಳಿಯಬಾರದು ಎಂದು ಸೂಚನೆ ನೀಡಲಾಗಿದೆ.
ಅಲ್ಲದೇ ಬಂಗಾಳಕೊಲ್ಲಿ ಸಮುದ್ರ ಭಾಗದ ಒಡಿಶಾ, ಪಶ್ಚಿಮ ಬಂಗಾಳ ಹಾಗೂ ಆಂಧ್ರ ಕರಾವಳಿ ಪ್ರದೇಶ ಮತ್ತು ಅಂಡಮಾನ್ ಸಮುದ್ರ ವ್ಯಾಪ್ತಿಯಲ್ಲೂ ಮುನ್ನೆಚ್ಚರಿಕೆ ನೀಡಲಾಗಿದೆ. ಈ ಭಾಗದಲ್ಲೂ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.












Click it and Unblock the Notifications