ಈ ಭಾಗಗಳಲ್ಲಿ 5 ದಿನ ಧಾರಾಕಾರ ಮಳೆ: IMD ಯೆಲ್ಲೋ ಅಲರ್ಟ್ !

ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ರಾಜ್ಯದಲ್ಲೂ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 12ರ ವರೆಗೆ ದೇಶದಾದ್ಯಂತ ಧಾರಾಕಾರ ಮಳೆ ಮುಂದುವರಿಯಲಿದೆ. ಮುಂಬೈ ಹಾಗೂ ದೆಹಲಿ ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದ್ದು ಈ ಭಾಗಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದೇಶದ ವಿವಿಧ ಭಾಗಗಳಲ್ಲಿ ಮಳೆ ಅಬ್ಬರ ಜೋರಾಗಿದೆ.

ಮಾನ್ಸೂನ್ ಪ್ರಭಾವ ಹಾಗೂ ಚಂಡಮಾರುತ ಪರಿಣಾಮದಿಂದಾಗಿ ಕರ್ನಾಟಕವೂ ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಭಾರತದಾದ್ಯಂತ ಇನ್ನೂ 5 ದಿನಗಳ ಕಾಲ ಭಾರೀ ಮಳೆ ಮುಂದುವರಿಯಲಿದೆ ಎಂದು ಹೇಳಲಾಗಿದೆ. ಮುಂಬೈನಲ್ಲಿ ಮಾನ್ಸೂನ್ ತೀವ್ರವಾಗಿದ್ದು ಭಾರೀ ಮಳೆ ಆಗುತ್ತಿದೆ. ಭಾರೀ ಬಿರುಗಾಳಿ ಮುಂದುವರಿದಿದೆ. ಇನ್ನು ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಧಾರಾಕಾರ ಮಳೆ ಮುಂದುವರಿದಿದೆ. ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ವಿವಿಧ ಭಾಗದಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ದೆಹಲಿಯಲ್ಲಿ ಇಂದೂ ಸಹ ಮಳೆಯ ಅಬ್ಬರ ಜೋರಾಗಿದೆ.

Heavy rains in these parts for 5 days IMD Yellow Alert

ದೆಹಲಿಯಲ್ಲಿ ಭಾರೀ ಮುನ್ಚೆಚ್ಚರಿಕೆ: ದೆಹಲಿ ಸೇರಿದಂತೆ ದೆಹಲಿಯ ಸುತ್ತಮುತ್ತಲಿನ ಪ್ರದೇಶದಲ್ಲಿ ಧಾರಾಕಾರ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ತಗ್ಗು ಪ್ರದೇಶಗಳಲ್ಲಿ ನೆಲಸಿರುವವರಿಗೆ ಮುನ್ನೆಚ್ಚರಿಕೆ ಕೊಡಲಾಗಿದೆ. ಅಲ್ಲದೇ ರೈಲು ನಿಲ್ದಾಣ ಸೇರಿದಂತೆ ಜನ ಹೆಚ್ಚಾಗಿ ಸೇರುವ ಪ್ರದೇಶಗಳಲ್ಲಿ ಮುಂಜಾಗ್ರತೆ ವಹಿಸಬೇಕು ಎಂದು ಸೂಚನೆ ನೀಡಲಾಗಿದೆ.

ಜುಲೈ 6 ರಿಂದ 12 ರವರೆಗೆ ದೇಶದ ವಿವಿಧ ಭಾಗಗಳಲ್ಲಿ ವ್ಯಾಪಕ ಮಳೆ ಆಗಲಿದೆ ಎಂದು ನಿರೀಕ್ಷಿಸಲಾಗಿದೆ. ಈ ಅವಧಿಯಲ್ಲಿ ಒಡಿಶಾ ರಾಜ್ಯದಲ್ಲಿ ಭಾರೀ ಮಳೆ ಆಗಲಿದೆ. ಇನ್ನು ಛತ್ತೀಸ್‌ಗಢದಲ್ಲಿಯೂ ರಣಭೀಕರ ಮಳೆ ಆಗುತ್ತಿದ್ದು, ಜುಲೈ 9 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಪಶ್ಚಿಮ ಬಂಗಾಳ ಹಾಗೂ ಸಿಕ್ಕಿಂ ರಾಜ್ಯಗಳಲ್ಲಿ ಜುಲೈ 7 ರಿಂದ 10 ರವರೆಗೆ ಭಾರೀ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪಶ್ಚಿಮ ಬಂಗಾಳ ಹಾಗೂ ಜಾರ್ಖಂಡ್‌ನಲ್ಲಿ ಜುಲೈ 6 ಮತ್ತು 7 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜುಲೈ 8 ಹಾಗೂ 9ರಂದು ಮಧ್ಯಪ್ರದೇಶದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಆರ್ಭಟ ಇರಲಿದೆ ಎಂದು ಐಎಂಡಿ ವರದಿ ತಿಳಿಸಿದೆ. ವಾಯುವ್ಯ ಭಾರತದ ಉತ್ತರಾಖಂಡ ಮತ್ತು ರಾಜಸ್ಥಾನ ರಾಜ್ಯಗಳಲ್ಲೂ ಮಳೆ ಅಬ್ಬರ ಮುಂದುವರಿದಿದೆ. ಈ ಭಾಗದಲ್ಲಿ ಜುಲೈ 12 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಪಂಜಾಬ್, ಹರಿಯಾಣ, ಚಂಡೀಗಢ ಹಾಗೂ ಉತ್ತರ ಪ್ರದೇಶಗಳ ಧಾರಾಕಾರ ಮಳೆ ಮುಂದುವರಿದಿದೆ.

ದಕ್ಷಿಣ ಭಾರತದಲ್ಲಿ ಭಾರೀ ಮಳೆ: ಇನ್ನು ದಕ್ಷಿಣ ಭಾರತದ ರಾಜ್ಯಗಳಲ್ಲೂ ಮಳೆ ಅಬ್ಬರ ಜೋರಾಗಿದೆ. ದಕ್ಷಿಣ ಭಾರತದ ಕರ್ನಾಟಕ ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಕೇರಳದಲ್ಲಿ ಚಂಡಮಾರುತ ಪ್ರಭಾವ ತೀವ್ರವಾಗಿದ್ದು ಕೇರಳದ ಹಲವು ರಾಜ್ಯಗಳಲ್ಲಿ ರಣಭೀಕರ ಮಳೆ ಮುಂದುವರಿದಿದೆ. ಇದರ ಪ್ರಭಾವವಾಗಿ ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರೀ ಮಳೆ ಆಗುತ್ತಿದೆ. ಆಂಧ್ರಪ್ರದೇಶದ ಕರಾವಳಿ ಭಾಗದಲ್ಲೂ ಮಳೆ ನಿರೀಕ್ಷೆ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+