Heavy Rain: ಈ ಭಾಗಗಳಲ್ಲಿ ಧಾರಾಕಾರ ಮಳೆ: ಜುಲೈನಲ್ಲಿ ಅತ್ಯಧಿಕ ಮಳೆ, ವಿವಿಧ ರಾಜ್ಯಗಳಲ್ಲಿ ಪ್ರವಾಹ ಭೀತಿ, ಐಎಂಡಿ ವರದಿ!

Heavy Rain: ದಕ್ಷಿಣ ಭಾರತವೂ ಸೇರಿದಂತೆ ದೇಶದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಪ್ರಮುಖ ರಾಜ್ಯಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಅಲ್ಲದೇ ಜುಲೈನಲ್ಲಿ ಭಾರತದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಒಂದು ವಾರದ ಅವಧಿಗೆ ದೇಶದಾದ್ಯಂತ ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಕಳೆದ ಒಂದು ವಾರದಿಂದಲೂ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಇನ್ನೊಂದು ವಾರ ಇದೇ ವಾತಾವರಣ ಇರಲಿದೆ ಎಂದು ಹೇಳಲಾಗಿದೆ. ನೆರೆಯ ಕೇರಳ ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ.

ಈ ವಾರ ಪೂರ್ತಿ ವಾಯುವ್ಯ, ಮಧ್ಯ ಮತ್ತು ಪೂರ್ವ ಭಾರತದ ಪ್ರದೇಶಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ದೇಶದಾದ್ಯಂತ ಮಾನ್ಸೂನ್ ಚುರುಕು ಪಡೆದುಕೊಂಡಿದ್ದು ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಹಿಮಾಚಲ ಪ್ರದೇಶ, ಉತ್ತರಾಖಂಡ, ಉತ್ತರ ಪ್ರದೇಶ, ಪಂಜಾಬ್, ಹರಿಯಾಣ ಮತ್ತು ರಾಜಸ್ಥಾನ ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದ್ದು ಪ್ರವಾಹ ಭೀತಿ ಎದುರಾಗಿದೆ. ಬಿಹಾರ, ಪಶ್ಚಿಮ ಬಂಗಾಳ, ಸಿಕ್ಕಿಂ ಹಾಗೂ ಜಾರ್ಖಂಡ್‌ನಲ್ಲೂ ಮಳೆ ಅಬ್ಬರ ಜೋರಾಗಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Heavy rains in these parts Highest rainfall in July flood threat in various states IMD report

ರಾಜಸ್ಥಾನದಲ್ಲಿ ಪ್ರವಾಹ: ಇನ್ನು ರಾಜಸ್ಥಾನದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗುತ್ತಿದ್ದು ಪ್ರವಾಹ ಎದುರಾಗಿದೆ. ಪ್ರವಾಹದಿಂದ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ದೇಶದ ಹಲವು ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿರುವುದರಿಂದ ಕೆಲವು ಪ್ರದೇಶಗಳಲ್ಲಿ ಶಾಲಾ - ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಇನ್ನು ದಕ್ಷಿಣ ಭಾರತದ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲೂ ಮಳೆ ಅಬ್ಬರ ಜೋರಾಗಿದೆ. ಕೊಂಕಣ ಕರಾವಳಿ, ಗೋವಾ, ಮಹಾರಾಷ್ಟ್ರ ಹಾಗೂ ಗುಜರಾತ್‌ ರಾಜ್ಯದಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು ಜನಜೀವನ ಅಸ್ತವ್ಯಸ್ತವಾಗಿದೆ.

ದಕ್ಷಿಣ ಭಾರತದಲ್ಲಿ ಮಳೆ ಅಬ್ಬರ ಜೋರು: ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಳೆ ಅಬ್ಬರ ಜೋರಾಗಿದೆ. ಇನ್ನೊಂದು ವಾರ ಮಳೆ ಆರ್ಭಟ ಇರಲಿದೆ ಎಂದು ಹೇಳಲಾಗಿದೆ. ಆಂಧ್ರಪ್ರದೇಶ, ತೆಲಂಗಾಣ, ಕೇರಳ ಮತ್ತು ಕರ್ನಾಟಕದಲ್ಲಿ ಇನ್ನೊಂದು ವಾರ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಕೇರಳದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗುತ್ತಿದ್ದು ಮಳೆಯಿಂದ ಪ್ರವಾಹ ಎದುರಾಗುವ ಭೀತಿಯೂ ಇದೆ.

ಜುಲೈನಲ್ಲಿ ಅತ್ಯಧಿಕ ಮಳೆ: ಇನ್ನು ಜುಲೈನಲ್ಲಿ ದೇಶದಾದ್ಯಂತ ಧಾರಾಕಾರ ಮಳೆ ಆಗಲಿದೆ. ಅಲ್ಲದೇ ಮಳೆಯ ಪ್ರಮಾಣವೂ ತೀವ್ರವಾಗಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಇನ್ನು ದೇಶದಾದ್ಯಂತ ಅವಧಿ ಪೂರ್ವ ಮಾನ್ಸೂನ್ ಪ್ರವೇಶವಾಗಿದ್ದು ಬೇಗ ಮುಕ್ತಾಯವಾಗಬಹುದು ಎಂದು ನಿರೀಕ್ಷೆ ಮಾಡಲಾಗಿತ್ತು. ಆದರೆ, ಈ ಬಾರಿ ಅವಧಿ ಪೂರ್ವ ಮಾನ್ಸೂನ್‌ ಪ್ರವೇಶವಾಗಿರುವುದರ ಜೊತೆಗೆ ಸಾಮಾನ್ಯವಾಗಿ ಜೂನ್‌ನಿಂದ ಸೆಪ್ಪೆಂಬರ್ ವರೆಗೆ ಆಗುತ್ತಿದ್ದ ಮಳೆಗಿಂತಲೂ ಹೆಚ್ಚು ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+