ಚಂಡಮಾರುತ ಪ್ರಸರಣ: ದೇಶದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ: ಈ ಭಾಗದಲ್ಲಿ ಪ್ರವಾಹ ಪರಿಸ್ಥಿತಿ!
ಚಂಡಮಾರುತ ಪ್ರಸರಣದಿಂದ ಕರ್ನಾಟಕವು ಸೇರಿದಂತೆ ದೇಶದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಮೇಘ ಸ್ಫೋಟದಿಂದಾಗಿ ಜಮ್ಮು ಮತ್ತು ಕಾಶ್ಮೀರ ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಮೇಘಸ್ಫೋಟದಿಂದ ಸಾವಿರಾರು ಜನ ಮನೆಗಳನ್ನು ಕಳೆದುಕೊಂಡಿದ್ದಾರೆ. ಇನ್ನು ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವುದರಿಂದ ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ.
ಆಗಸ್ಟ್ 27ರಿಂದ ಸೆಪ್ಟೆಂಬರ್ 1ರ ವರೆಗೆ ದೇಶದಾದ್ಯಂತ ಮಳೆ ಆರ್ಭಟ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಆಗಸ್ಟ್ 27ರಂದು ದೇಶದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆರ್ಭಟ ಮುಂದುವರಿದಿದೆ. ಜಮ್ಮು, ಆರ್‌ಎಸ್ ಪುರ, ಸಾಂಬಾ, ಅಖ್ನೂರ್, ನಾಗ್ರೋಟಾ, ಕೋಟ್ ಬಲ್ವಾಲ್, ಬಿಷ್ಣಾ, ವಿಜಯಪುರ, ಪುರ್ಮಂಡಲ, ಕಥುವಾ ಹಾಗೂ ಉಧಂಪುರ್‌ನ ಕೆಲವು ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಜಮ್ಮುವಿನಲ್ಲಿ ಮೋಘಸ್ಫೋಟ ಹಾಗೂ ಭೂಕುಸಿತದಿಂದಾಗಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಇಂದು ಸಹ ಮಳೆ ಆರ್ಭಟ ಮುಂದುವರಿದಿದ್ದು. ಕೆಲವು ಭಾಗಗಳಲ್ಲಿ ಭಾರೀ ಮಳೆ, ಗುಡುಗು ಸಹಿತ ಮತ್ತು ಆಲಿಕಲ್ಲು ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಭಾರೀ ಮಳೆಯಿಂದಾಗಿ ಉತ್ತರ ಭಾರತದ ಹಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ದೆಹಲಿ ಹಾಗೂ ಮುಂಬೈ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಭಾರೀ ಮಳೆಯಿಂದ ಕಳೆದ ವಾರ ಅನಾಹುತ ಸಂಭವಿಸಿತ್ತು. ಇದೀಗ ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಉತ್ತರ ಭಾರತದ ಗುಜರಾತ್ ಹಾಗೂ ರಾಜಸ್ಥಾನ, ದಕ್ಷಿಣ ಭಾರತದಾದ್ಯಂತ ಮಳೆ ಆರ್ಭಟ ಮುಂದುವರಿದಿದೆ.
ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಪಂಜಾಬ್, ಹರಿಯಾಣ, ಚಂಡೀಗಢ ಹಾಗೂ ರಾಜಸ್ಥಾನ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಉತ್ತರಾಖಂಡ, ಒಡಿಶಾ ಹಾಗೂ ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮುನ್ಸೂಚನೆ ನೀಡಿದೆ.
ವಿವಿಧ ಭಾಗದಲ್ಲಿ ಮಳೆ ಆರ್ಭಟ: ದೇಶದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಪಂಜಾಬ್, ಹರಿಯಾಣ, ಹಿಮಾಚಲ ಪ್ರದೇಶ ಹಾಗೂ ರಾಜಸ್ಥಾನದ ಭಾಗದಲ್ಲಿ ಕಳೆದ 24 ಗಂಟೆಯ ಅವಧಿಯಲ್ಲಿ ಭಾರೀ ಮಳೆ ಆಗಿದೆ. ಅಲ್ಲದೇ ಜಮ್ಮು ಮತ್ತು ಕಾಶ್ಮೀರ, ಉತ್ತರ ಪ್ರದೇಶ, ಮಧ್ಯಪ್ರದೇಶ, ಗುಜರಾತ್, ನಿಕೋಬಾರ್ ದ್ವೀಪಗಳು, ಒಡಿಶಾ, ಬಿಹಾರ, ಅರುಣಾಚಲ ಪ್ರದೇಶ ಹಾಗೂ ಅಸ್ಸಾಂನಲ್ಲೂ ಧಾರಾಕಾರ ಮಳೆ ಆಗಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಚಂಡಮಾರುತದ ಪ್ರಸರಣದಿಂದಾಗಿ ಧಾರಾಕಾರ ಮಳೆ ಆಗುತ್ತಿದೆ.
ದಕ್ಷಿಣ ಭಾರತದಲ್ಲಿ ಮಳೆ: ಇನ್ನು ದಕ್ಷಿಣ ಭಾರತದ ಕರ್ನಾಟಕ ಹಾಗೂ ಆಂಧ್ರಪ್ರದೇಶ ಸೇರಿದಂತೆ ವಿವಿಧ ಭಾಗದಲ್ಲಿ ಮಳೆ ಮುಂದುವರಿದಿದೆ. ಕಳೆದ 15 ದಿನಗಳ ಹಿಂದೆ ಕರ್ನಾಟಕ ಹಾಗೂ ತೆಲಂಗಾಣ ಭಾಗದಲ್ಲಿ ಭಾರೀ ಮಳೆ ಆಗಿತ್ತು. ಭಾರೀ ಮಳೆಯಿಂದಾಗಿ ಎರಡೂ ರಾಜ್ಯಗಳ ಪ್ರಮುಖ ನಗರಗಳಲ್ಲಿ ಮಳೆ ಹಾನಿ ಸಂಭವಿಸಿತ್ತು. ಇದೀಗ ಮತ್ತೆ ವರುಣಾರ್ಭಟ ಶುರುವಾಗಿದ್ದು, ಸೆಪ್ಟೆಂಬರ್ 1ರ ವರೆಗೆ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.












Click it and Unblock the Notifications