ಕರಾವಳಿ ಕರ್ನಾಟಕ, ಗುಜರಾತ್, ರಾಜಸ್ಥಾನದಲ್ಲಿ ವ್ಯಾಪಕ ಮಳೆ ಮುನ್ಸೂಚನೆ- ಕೇರಳದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
ನವದೆಹಲಿ, ಸೆಪ್ಟೆಂಬರ್ 18: ಮುಂದಿನ ಕೆಲ ಗಂಟೆಗಳ ಕಾಲ ಗುಜರಾತ್‌ನಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜಸ್ಥಾನ, ಉತ್ತರಾಖಂಡ, ಪಶ್ಚಿಮ ಮಧ್ಯಪ್ರದೇಶ, ಕೊಂಕಣ-ಗೋವಾ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ ಮತ್ತು ಒಡಿಶಾದಲ್ಲಿ ಭಾರೀ ಮಳೆ ಮುಂದುವರಿಯಬಹುದು ಎಂಬ ಮನ್ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ.
ಅಂಡಮಾನ್- ನಿಕೋಬಾರ್ ದ್ವೀಪಗಳು ಮತ್ತು ಕರಾವಳಿ ಕರ್ನಾಟಕದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಗಂಗಾನದಿ ತೀರದ ಪಶ್ಚಿಮ ಬಂಗಾಳ, ದಕ್ಷಿಣ ಒಳ ಕರ್ನಾಟಕ, ಕೇರಳ-ಮಾಹೆ ಮತ್ತು ಲಕ್ಷದ್ವೀಪದಲ್ಲಿ ಸಾಕಷ್ಟು ವ್ಯಾಪಕ ಮಳೆ ಬೀಳಬಹುದು ಎಂದು ವರದಿಯಾಗಿದೆ.
ಅರುಣಾಚಲ ಪ್ರದೇಶ, ಜಾರ್ಖಂಡ್, ಹಿಮಾಚಲ ಪ್ರದೇಶ, ಮಧ್ಯಪ್ರದೇಶ, ಸೌರಾಷ್ಟ್ರ-ಕಚ್, ಮಧ್ಯ ಮಹಾರಾಷ್ಟ್ರ, ವಿದರ್ಭ, ಛತ್ತೀಸ್‌ಗಢ, ಕರಾವಳಿ ಆಂಧ್ರಪ್ರದೇಶ, ಯಾನಂ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಗುಡುಗು ಸಹಿತ ಚದುರಿದ ಮಳೆಯಾಗುವ ಸಾಧ್ಯತೆಯಿದೆ.
ಉಪ- ಹಿಮಾಲಯದ ಪಶ್ಚಿಮ ಬಂಗಾಳ, ಸಿಕ್ಕಿಂ, ಬಿಹಾರ, ಉತ್ತರ ಪ್ರದೇಶ, ಹರಿಯಾಣ, ಚಂಡೀಗಢ, ದೆಹಲಿ, ಪಂಜಾಬ್, ಜಮ್ಮು- ಕಾಶ್ಮೀರ, ಲಡಾಖ್, ಮರಾಠವಾಡ, ತೆಲಂಗಾಣ, ರಾಯಲಸೀಮಾ ಮತ್ತು ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಪ್ರತ್ಯೇಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಕರ್ನಾಟಕದಲ್ಲಿ ಮಳೆ ಮನ್ಸೂಚನೆ
ಕರಾವಳಿ ಕರ್ನಾಟಕದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ. ದಕ್ಷಿಣ ಕರ್ನಾಟಕದ ( ಬೆಂಗಳೂರು ನಗರ ಸೇರಿದಂತೆ ) ಕೆಲ ಪ್ರತ್ಯೇಕವಾಗಿ ಮಳೆ ಬೀಳುವ ಮನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಕರ್ನಾಟಕದಲ್ಲಿ ನಿನ್ನೆ ಬಿದ್ದ ಮಳೆ ಪ್ರಮಾಣ
ಉಡುಪಿ: 91.5 ಮಿ.ಮೀ
ದಕ್ಷಿಣ ಕನ್ನಡ: 74.5 ಮಿ.ಮೀ
ಕೋಲಾರ: 62 ಮಿ.ಮೀ
ಬಾಗಲಕೋಟೆ: 52 ಮಿ.ಮೀ
ಚಿಕ್ಕಮಗಳೂರು: 48 ಮಿ.ಮೀ
ಉತ್ತರ ಕನ್ನಡ: 34 ಮಿ.ಮೀ
ಬೆಂಗಳೂರು ಗ್ರಾಮಾಂತರ: 32 ಮಿ.ಮೀ
ರಾಮನಗರ: 31.5 ಮಿ.ಮೀ
ರಾಯಚೂರು: 29 ಮಿ.ಮೀ
ಚಿಕ್ಕಬಳ್ಳಾಪುರ: 28 ಮಿ.ಮೀ
ಹಾಸನ: 27.5 ಮಿ.ಮೀ
ಬೆಂಗಳೂರು ನಗರ: 23 ಮಿ.ಮೀ
ಹೆಚ್ಚು ಮಳೆಯಾದ ಸ್ಥಳಗಳು
ಹಾರಾಡಿ, ಉಡುಪಿ: 91.5 ಮಿ.ಮೀ
ಸೋಮೇಶ್ವರ, ದಕ್ಷಿಣ ಕನ್ನಡ: 74.5 ಮಿ.ಮೀ
ವಾರಂಬಳ್ಳಿ, ಉಡುಪಿ: 71 ಮಿ.ಮೀ
ಬಿಲ್ಲಾಡಿ, ಉಡುಪಿ: 70 ಮಿ.ಮೀ

ಕೇರಳದಲ್ಲಿ ಯೆಲ್ಲೋ ಅಲರ್ಟ್
ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಸೋಮವಾರ ಎರ್ನಾಕುಲಂ ಮತ್ತು ಇಡುಕ್ಕಿ ಜಿಲ್ಲೆಗಳಿಗೆ ಯೆಲ್ಲೋ ಎಚ್ಚರಿಕೆ ನೀಡಿದೆ. ಇತರೆ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಹೇಳಿದೆ.
ಕಳೆದ ವಾರ ಅಲಪ್ಪುಳ, ಕಣ್ಣೂರು, ಎರ್ನಾಕುಲಂ, ಕಾಸರಗೋಡು, ಕೊಲ್ಲಂ, ಕೋಝಿಕ್ಕೋಡ್, ಮಲಪ್ಪುರಂ, ಪಾಲಕ್ಕಾಡ್, ಪತ್ತನಂತಿಟ್ಟ ಮತ್ತು ತಿರುವನಂತಪುರ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.












Click it and Unblock the Notifications