ಕೇರಳಕ್ಕೆ ಮತ್ತೆ ಅಪ್ಪಳಿಸಲಿದೆ ಧಾರಾಕಾರ ಮಳೆ: yellow alert ಘೋಷಣೆ
Recommended Video

ತಿರುವನಂತಪುರಂ, ಸೆಪ್ಟೆಂಬರ್ 24: ಆಗಸ್ಟ್ ತಿಂಗಳಾರಂಭದಿಂದ ಕೇರಳವನ್ನು ಕಾಡಿದ್ದ ಧಾರಾಕಾರ ಮಳೆ ಮತ್ತೆ ಕೇರಳಕ್ಕೆ ಅಪ್ಪಳಿಸಲಿದೆ. ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಈಗಾಗಲೇ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಅಂತೆಯೇ ಕೇರಳದಲ್ಲೂ ಸೆ.25 ಮತ್ತು 26 ರಂದು ಧಾರಾಕಾರ ಮಳೆ ಸುರಿಯಲಿದ್ದು, ರಾಜ್ಯದ ಪಠಾನ್ತಿಟ್ಟ, ಇಡುಕ್ಕಿ, ಪಲಕ್ಕಾಡ್, ತ್ರಿಶೂರ್ ಮತ್ತು ವಯ್ನಾಡ್ ಜಿಲ್ಲೆಯ ಜನರಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಕೋರಲಾಗಿದೆ.

ಈ ಕುರಿತು ಸ್ವತಃ ರಾಜ್ಯದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಟ್ವೀಟ್ ಮಾಡಿದ್ದು, "ಪಠಾನ್ತಿಟ್ಟ, ಇಡುಕ್ಕಿ, ಪಲಕ್ಕಾಡ್, ತ್ರಿಶೂರ್ ಮತ್ತು ವಯ್ನಾಡ್ ಜಿಲ್ಲೆಗಳಲ್ಲಿ Yellow alert ಘೋಷಣೆ ಮಾಡಲಾಗಿದ್ದು, ಸುಮಾರು 64.4 ರಿಂದ 124.4 ಮಿ.ಮೀ. ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ" ಎಂದಿದ್ದಾರೆ.
Yellow alert for Pathanamthitta, Idukki & Wayanad districts for 25th. In addition, yellow alert has been issued for Palakkad, Idukki, Thrissur and Wayanad districts for 26th. Met Centre has predicted heavy rainfall (64.4mm to 124.4mm) in these districts.
— CMO Kerala (@CMOKerala) September 23, 2018
ಜೊತೆಗೆ ಈಗಾಗಲೇ ರಾಹ್ಯ ವಿಪತ್ತು ನಿರ್ವಹಣಾ ದಳ ಕ್ಕೆ ಮಳೆ ಮುನ್ಸೂಚನೆ ಇರುವ ಎಲ್ಲಾ ಜಿಲ್ಲೆಗಳಲ್ಲೂ ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳುವಂತೆ ಆದೇಶಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕೇರಳದಲ್ಲಿ ಆಗಸ್ಟ್ ತಿಂಗಳ ಮೊದಲೆರಡು ವಾರ ಸುರಿದ ನಿರಂತರ ಮಳೆಗೆ ಸುಮಾರು 350 ಕ್ಕೂ ಹೆಚ್ಚು ಜನರು ಮೃತರಾಗಿದ್ದು, ಇದುವರೆಗೂ 19512 ನಷ್ಟ ಸಂಭವಿಸಿತ್ತು. ಲಕ್ಷಕ್ಕೂ ಹೆಚ್ಚು ಜನ ನಿರಾಶ್ರಿತರಾಗಿದ್ದು, ದೇಶದಾದ್ಯಂತ ಹರಿದುಬಂದ ದೇಣಿಗೆಯ ನೆರವಿನಿಂದ ಕೇರಳವನ್ನು ಮತ್ತೆ ಕಟ್ಟುವ ಕೆಲಸ ನಡೆಯುತ್ತಿದೆ. ಆದರೆ ಈ ನಡುವೆ ಮತ್ತೊಮ್ಮೆ ಮಳೆಯ ಮುನ್ಸೂಚನೆ ದೊರೆತಿದ್ದು ದೇವರ ನಾಡಿನ ಜನರ ನಿದ್ದೆ ಕೆಡಿಸಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications