Heavy Rain: ಈ ಭಾಗಗಳಲ್ಲಿ ಮುಂದಿನ 48 ಗಂಟೆ ಭರ್ಜರಿ ಮಳೆ, ಐಎಂಡಿ ರಿಪೋರ್ಟ್

ದೇಶದ ವಿವಿಧ ಭಾಗದಲ್ಲಿ ಮುಂದಿನ 48 ಗಂಟೆಯ ಅವಧಿಯಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯವೂ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮುಂದಿನ 5 ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ ಎಂದು ಮುನ್ಸೂಚನೆ ಕೊಡಲಾಗಿದೆ. ದೇಶದ ಎಲ್ಲೆಲ್ಲಿ ಮಳೆಯಾಗಲಿದೆ. ಮಳೆಯಾಗುತ್ತಿರುವುದಕ್ಕೆ ಕಾರಣ ಏನು ಹಾಗೂ ಇನ್ನೆಷ್ಟು ದಿನ ಮಳೆ ಇರಲಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

Heavy Rains to Hit South Indian states in next 48 hours IMD report

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ತಮಿಳುನಾಡಿನ ಚೆಂಗಲ್ಪಟ್ಟು, ವಿಲ್ಲುಪುರಂ ಮತ್ತು ಕಡಲೂರು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ ಎಂದು ಹೇಳಲಾಗಿದೆ. ತಮಿಳುನಾಡಿನಲ್ಲಿ ಕಳೆದ ಮೂರು ತಿಂಗಳಿನಿಂದಲೂ ಚಂಡಮಾರುತ (ಸೈಕ್ಲೋನ್‌) ಪ್ರಭಾವದಿಂದ ಬಿಟ್ಟು ಬಿಡದಂತೆ ಮಳೆಯಾಗುತ್ತಿದ್ದು, ತಮಿಳುನಾಡಿನ ರಾಜಧಾನಿ ಚೆನ್ನೈ ಸೇರಿದಂತೆ ಹಲವು ಜಿಲ್ಲೆಗಳು ಮಳೆ ಆಘಾತದಿಂದ ಸುಧಾರಿಸಿಕೊಂಡಿಲ್ಲ. ಪರಿಸ್ಥಿತಿ ಈ ರೀತಿ ಇರುವಾಗಲೇ ಈ ರಾಜ್ಯದ ಹಲವು ಭಾಗದಲ್ಲಿ ಜೋರು ಮಳೆಯಾಗಲಿದೆ ಎಂದು ಚೆನ್ನೈ ಹವಾಮಾನ ಇಲಾಖೆಯು ಮುನ್ಸೂಚನೆ ಕೊಟ್ಟಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದು ಕರ್ನಾಟಕ ಸೇರಿದಂತೆ ತಮಿಳುನಾಡು, ಪುದುಚೇರಿ ಹಾಗೂ ಆಂಧ್ರಪ್ರದೇಶದ ಕರಾವಳಿ ಭಾಗ ಸೇರಿದಂತೆ ವಿವಿಧ ಭಾಗದಲ್ಲಿ ಜೋರು ಮಳೆಯಾಗಲಿದೆ ಎಂದು ಹೇಳಲಾಗಿದೆ.

Heavy Rains to Hit South Indian states in next 48 hours IMD report

ಮೀನುಗಾರರಿಗೆ ಎಚ್ಚರಿಕೆ: ದೇಶದ ವಿವಿಧ ರಾಜ್ಯಗಳಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಮುದ್ರ ಭಾಗಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ತಮಿಳುನಾಡು ಹಾಗೂ ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹಾಗಾಗಿ, ಈ ರಾಜ್ಯಗಳಲ್ಲಿನ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಕರ್ನಾಟಕದಲ್ಲಿ ಮೀನುಗಾರರಿಗೆ ಯಾವುದೇ ಮುನ್ಸೂಚನೆ ಕೊಟ್ಟಿಲ್ಲ. ತಮಿಳುನಾಡು ಹಾಗೂ ಆಂಧ್ರಸೇರಿದಂತೆ ವಿವಿಧ ರಾಜ್ಯಗಳಲ್ಲಿ ಡಿಸೆಂಬರ್ 25 ರವರೆಗೆ ಚಂಡಮಾರುತಗಳು ಬೀಸುವ ಸಾಧ್ಯತೆ ಇರುವುದರಿಂದ ಎಚ್ಚರಿಕೆ ನೀಡಲಾಗಿದೆ. ಈ ಸಮಯದಲ್ಲಿ ಸಮುದ್ರದ ಅಲೆಗಳು ತೀವ್ರವಾಗಿ ಬೀಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಚೆನ್ನೈನಲ್ಲಿ ಮುನ್ನೆಚ್ಚರಿಕೆ: ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಚೆನ್ನೈ ನಗರ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಈ ಭಾಗದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಭಾಗದಲ್ಲಿ ಧಾರಾಕಾರ ಮಳೆಯಾಗಲಿದೆ. ಇನ್ನು ಡಿಸೆಂಬರ್ 25ಕ್ಕೆ ಪುದುಚೇರಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

ತಮಿಳುನಾಡಿನ ವಿವಿಧ ಜಿಲ್ಲೆಗಳಲ್ಲಿ ಭಾನುವಾರದಿಂದಲೇ ಭರ್ಜರಿ ಮಳೆಯಾಗುತ್ತಿದೆ. ಕೆಲವು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಲಾಗುತ್ತಿದೆ. ಕರ್ನಾಟಕದಲ್ಲೂ ಡಿಸೆಂಬರ್‌ 27ರ ವರೆಗೆ ವಿವಿಧ ಭಾಗದಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಬೆಂಗಳೂರು ಸೇರಿದಂತೆ ವಿವಿಧ ಭಾಗದಲ್ಲಿ ಮಳೆ ಆಗಲಿದೆ ಎಂದು ಮುನ್ನೆಚ್ಚರಿಕೆ ಕೊಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+