ಮುಂಗಾರು ಪ್ರಭಾವ, ಪ್ರವಾಹ: ಉತ್ತರ ಕನ್ನಡ, ಮಲೆನಾಡಿನಲ್ಲಿ ಭಾರಿ ಮಳೆ
ಬೆಂಗಳೂರು, ಜುಲೈ 16: ದೇಶಾದ್ಯಂತ ಮುಂಗಾರು ಚುರುಕಾಗಿದ್ದು ಸಾಕಷ್ಟು ಕಡೆ ಪ್ರವಾಹ ಸೃಷ್ಟಿಯಾಗಿದೆ. ಇನ್ನೂ ಕೆಲವೆಡೆ ಮುಂದಿನ 24 ಗಂಟೆಗಳಲ್ಲಿ ಮುಂಗಾರು ಚುರುಕುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈಗಾಗಲೇ ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು 40 ಲಕ್ಷ ಮಂದಿ ಅಪಾಯದಲ್ಲಿದ್ದಾರೆ. ಕೆಲವೇ ಗಂಟೆಗಳಲ್ಲಿ ದೆಹಲಿ, ಹೈದರಾಬಾದ್ ಸೇರಿದಂತೆ ಹಲವು ಕಡೆಗಳಲ್ಲಿ ಮುಂಗಾರು ಚುರುಕುಗೊಳ್ಳಲಿದೆ.
ತೆಲಂಗಾಣದಲ್ಲ ಒಣಹವೆ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 10 ಮಿ.ಮೀನಷ್ಟು ಮಳೆ ದಾಖಲಾಗಿದೆ. ನಿಜಾಮಾಬಾದ್‌ನಲ್ಲಿ ಕಳೆದ ನಾಲ್ಕೈದು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಜುಲೈ 18ರಿಂದ 22ರವರೆಗೆ ತೆಲಂಗಾಣದಲ್ಲಿ ಉತ್ತಮ ಮಳೆ ನಿರೀಕ್ಷೆ ಇದೆ ಎಂದು ಸ್ಕೈಮೆಟ್ ವೆದರ್ ತಿಳಿಸಿದೆ.

ಇನ್ನು ಉತ್ತರ ಕನ್ನಡ, ಶಿವಮೊಗ್ಗ, ದಕ್ಷಿಣ ಕನ್ನಡದಲ್ಲಿ ಉತ್ತಮ ಮಳೆಯಾಗುತ್ತಿದೆ. ಗೋಕರ್ಣದಲ್ಲಿ 14 ಸೆಂ.ಮೀ, ಹೊನ್ನಾವರ, ಕಾರವಾರದಲ್ಲಿ 13 ಸೆಂ.ಮೀ ಮಳೆಯಾಗಿದೆ.
ಅಂಕೋಲಾದಲ್ಲಿ 11 ಸೆಂ.ಮೀ, ಕುಮಟಾದಲ್ಲಿ 10 ಸೆಂ.ಮೀನಷ್ಟು ಮಳೆಯಾಗಿದೆ. ಗೇರುಸೊಪ್ಪ, ಪುತ್ತೂರು, ಕುಂದಾಪುರ, ಕಿರವತ್ತಿ, ಬಂಟವಾಳ, ಆಗುಂಬೆ, ಮಾಣಿ, ಪಣಂಬೂರ್, ಮಂಗಳೂರು, ದಾವಣಗೆರೆ, ಹರಪನಹಳ್ಳಿ, ಕಲಘಟಗಿ, ಹಿರೆಕೆರೂರಿನಲ್ಲಿ ಮಳೆಯಾಗುತ್ತಿದೆ. ಪಂಜಾಬ್, ಹರಿಯಾಣ, ಚಂಡೀಗಢ, ಕೊಂಕಣ, ಗೋವಾ, ಕರ್ನಾಟಕದಲ್ಲಿ ಮುಂದಿನ ಐದು ದಿನ ಭಾರಿ ಮಳೆಯಾಗಲಿದೆ.
ಬೆಂಗಳೂರು ಕೇಂದ್ರ ಭಾಗದಲ್ಲಿ ಗರಿಷ್ಠ 30.4 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್, ಕೈಎಎಲ್‌ನಲ್ಲಿ ಗರಿಷ್ಠ 31.8 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್, ಎಚ್‌ಎಎಲ್‌ನಲ್ಲಿ ಗರಿಷ್ಠ 31.2 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20.2 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.












Click it and Unblock the Notifications