ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಂಗಾರು ಪ್ರಭಾವ, ಪ್ರವಾಹ: ಉತ್ತರ ಕನ್ನಡ, ಮಲೆನಾಡಿನಲ್ಲಿ ಭಾರಿ ಮಳೆ

|
Google Oneindia Kannada News

ಬೆಂಗಳೂರು, ಜುಲೈ 16: ದೇಶಾದ್ಯಂತ ಮುಂಗಾರು ಚುರುಕಾಗಿದ್ದು ಸಾಕಷ್ಟು ಕಡೆ ಪ್ರವಾಹ ಸೃಷ್ಟಿಯಾಗಿದೆ. ಇನ್ನೂ ಕೆಲವೆಡೆ ಮುಂದಿನ 24 ಗಂಟೆಗಳಲ್ಲಿ ಮುಂಗಾರು ಚುರುಕುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈಗಾಗಲೇ ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು 40 ಲಕ್ಷ ಮಂದಿ ಅಪಾಯದಲ್ಲಿದ್ದಾರೆ. ಕೆಲವೇ ಗಂಟೆಗಳಲ್ಲಿ ದೆಹಲಿ, ಹೈದರಾಬಾದ್ ಸೇರಿದಂತೆ ಹಲವು ಕಡೆಗಳಲ್ಲಿ ಮುಂಗಾರು ಚುರುಕುಗೊಳ್ಳಲಿದೆ.

ಮುಂಗಾರು ಆಗಮನದ ಸಂತಸದ ಜೊತೆಗೆ ರೋಗಗಳ ಬಗ್ಗೆಯೂ ಎಚ್ಚರವಿರಲಿ ಮುಂಗಾರು ಆಗಮನದ ಸಂತಸದ ಜೊತೆಗೆ ರೋಗಗಳ ಬಗ್ಗೆಯೂ ಎಚ್ಚರವಿರಲಿ

ತೆಲಂಗಾಣದಲ್ಲ ಒಣಹವೆ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 10 ಮಿ.ಮೀನಷ್ಟು ಮಳೆ ದಾಖಲಾಗಿದೆ. ನಿಜಾಮಾಬಾದ್‌ನಲ್ಲಿ ಕಳೆದ ನಾಲ್ಕೈದು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಜುಲೈ 18ರಿಂದ 22ರವರೆಗೆ ತೆಲಂಗಾಣದಲ್ಲಿ ಉತ್ತಮ ಮಳೆ ನಿರೀಕ್ಷೆ ಇದೆ ಎಂದು ಸ್ಕೈಮೆಟ್ ವೆದರ್ ತಿಳಿಸಿದೆ.

Heavy to very heavy falls also likely over Punjab and Haryana

ಇನ್ನು ಉತ್ತರ ಕನ್ನಡ, ಶಿವಮೊಗ್ಗ, ದಕ್ಷಿಣ ಕನ್ನಡದಲ್ಲಿ ಉತ್ತಮ ಮಳೆಯಾಗುತ್ತಿದೆ. ಗೋಕರ್ಣದಲ್ಲಿ 14 ಸೆಂ.ಮೀ, ಹೊನ್ನಾವರ, ಕಾರವಾರದಲ್ಲಿ 13 ಸೆಂ.ಮೀ ಮಳೆಯಾಗಿದೆ.

ಅಂಕೋಲಾದಲ್ಲಿ 11 ಸೆಂ.ಮೀ, ಕುಮಟಾದಲ್ಲಿ 10 ಸೆಂ.ಮೀನಷ್ಟು ಮಳೆಯಾಗಿದೆ. ಗೇರುಸೊಪ್ಪ, ಪುತ್ತೂರು, ಕುಂದಾಪುರ, ಕಿರವತ್ತಿ, ಬಂಟವಾಳ, ಆಗುಂಬೆ, ಮಾಣಿ, ಪಣಂಬೂರ್, ಮಂಗಳೂರು, ದಾವಣಗೆರೆ, ಹರಪನಹಳ್ಳಿ, ಕಲಘಟಗಿ, ಹಿರೆಕೆರೂರಿನಲ್ಲಿ ಮಳೆಯಾಗುತ್ತಿದೆ. ಪಂಜಾಬ್, ಹರಿಯಾಣ, ಚಂಡೀಗಢ, ಕೊಂಕಣ, ಗೋವಾ, ಕರ್ನಾಟಕದಲ್ಲಿ ಮುಂದಿನ ಐದು ದಿನ ಭಾರಿ ಮಳೆಯಾಗಲಿದೆ.

ಪ್ರವಾಹಕ್ಕೆ ತತ್ತರಿಸಿದ ಬಿಹಾರ: 31 ಮಂದಿ ಸಾವು, 40 ಲಕ್ಷ ಜನರ ಸ್ಥಳಾಂತರ ಪ್ರವಾಹಕ್ಕೆ ತತ್ತರಿಸಿದ ಬಿಹಾರ: 31 ಮಂದಿ ಸಾವು, 40 ಲಕ್ಷ ಜನರ ಸ್ಥಳಾಂತರ

ಬೆಂಗಳೂರು ಕೇಂದ್ರ ಭಾಗದಲ್ಲಿ ಗರಿಷ್ಠ 30.4 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್, ಕೈಎಎಲ್‌ನಲ್ಲಿ ಗರಿಷ್ಠ 31.8 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್, ಎಚ್‌ಎಎಲ್‌ನಲ್ಲಿ ಗರಿಷ್ಠ 31.2 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20.2 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

English summary
Widespread rainfall with isolated heavy to very heavy falls also likely over Punjab and Haryana & Chandigarh during next 2 days, Konkan & Goa and Coastal Karnataka during next 5 days and over Kerala from 17th onward.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X