Kedarnath Helicopter Crash: ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕ್ಯಾಪ್ಟರ್ ಪತನ: ಪೈಲಟ್ ಸೇರಿ ಪ್ರಯಾಣಿಕರೆಲ್ಲಾ ಸಾವು
ಗುಜರಾತ್‌ನ ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಪತನದಿಂದ ಇದುವರೆಗೂ 274 ಜನ ಸಾವನಪ್ಪಿದ್ದಾರೆ. ಈ ದುರಂತ ಮಾಸುವ ಮುನ್ನವೇ ಉತ್ತರಾಖಂಡ್‌ನಲ್ಲಿ ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕ್ಯಾಪ್ಟರ್‌ವೊಂದು ಪತನವಾಗಿದೆ. ಘಟನೆಯಲ್ಲಿ ಎಲ್ಲಾ ಪ್ರಯಾಣಿಕರು ದುರ್ಮರಣ ಹೊಂದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಉತ್ತರಾಖಾಂಡನ ಕೇದಾರನಾಥದ ಬಳಿ ಗೌರಿ ಕೊಂಡ ಅರಣ್ಯದಲ್ಲಿ ಹೆಲಿಕ್ಯಾಪ್ಟರ್ ಪತನವಾಗಿದೆ. ಹೆಲಿಕ್ಯಾಪ್ಟರ್‌ನಲ್ಲಿ ಪೈಲಟ್ ಓರ್ವ ಮಗು ಸೇರಿದಂತೆ 7 ಮಂದಿ ಪ್ರಯಾಣ ಮಾಡುತ್ತಿದ್ದರು. ಘಟನೆಯಲ್ಲಿ ಎಲ್ಲರೂ ದುರ್ಮರಣ ಹೊಂದಿದ್ದಾರೆ ಎಂದು ತಿಳಿದುಬಂದಿದೆ.

ಗೌರಿ ಕುಂಡ್‌ನಲ್ಲಿ ಕಾಣೆಯಾಗಿದ್ದ ಪತನಗೊಂಡ ಹೆಲಿಕಾಪ್ಟರ್‌ನಲ್ಲಿ ಆರು ಜನ ಪ್ರಯಾಣಿಕರಿದ್ದರು. ಹೆಚ್ಚಿನ ವಿವರಗಳಿಗಾಗಿ ಕಾಯಲಾಗುತ್ತಿದೆ ಎಂದು ಉತ್ತರಾಖಂಡ ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿ, ಡಾ.ವಿ.ಮುರುಗೇಶನ್ ಅವರು ಮಾಹಿತಿ ನೀಡಿದ್ದಾರೆ. ಈ ಘಟನೆ ಇಂದು (ಜೂನ್ 15) ಬೆಳಗ್ಗೆ 5:20ರ ಸುಮಾರಿಗೆ ಕೇದಾರನಾಥ ಧಾಮದಿಂದ ಗುಪ್ತಕಾಶಿಗೆ ಹೋಗುತ್ತಿದ್ದ ವೇಳೆ ನಡೆದಿದೆ. ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಮುಂದುವರೆಸಿವೆ ಎಂದು ತಿಳಿದುಬಂದಿದೆ.
ಈ ದುರಂತ ಹವಾಮಾನ ವೈಪರೀತ್ಯದದಿಂದ ಸಂಭವಿಸಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ರುದ್ರಪ್ರಯಾಗ್ ಜಿಲ್ಲೆಯಲ್ಲಿ ಬೆಳಗಿನ ಜಾವ ಈ ಘಟನೆ ಸಂಭವಿಸಿದ್ದು, ಹೆಲಿಕಾಪ್ಟರ್ ಹೊತ್ತಿ ಉರಿದಿದೆ. ಘಟನೆ ಕುರಿತು ಕಮೀಷನರ್ ವಿನಯ್ ಶಂಕರ್ ಪಾಂಡೆ ಪ್ರತಿಕ್ರಿಯಿಸಿ, ಹೆಲಿಕ್ಯಾಪ್ಟರ್ ದುರಂತದಲ್ಲಿ ಯಾರೊಬ್ಬರೂ ಬದುಕುಳಿದಿಲ್ಲ. ಪೈಲಟ್ ಚೌಹನ್, ಒಂದು ಮಗು ಸೇರಿ 6 ಮಂದಿ ಮೃತಪಟ್ಟಿದ್ದಾರೆ. ಕೇದಾರನಾಥ್ ದೇವಸ್ಥಾನ ಸಮಿತಿಯ ಸದಸ್ಯರೊಬ್ಬರು ಸಹ ಇದೇ ಹೆಲಿಕಾಪ್ಟರ್‌ನಲ್ಲಿದ್ದರು. ಈ ಹೆಲಿಕಾಪ್ಟರ್ ಆರ್ಯನ್ ಕಂಪನಿಗೆ ಸೇರಿದೆ ಎಂದು ತಿಳಿಸಿದ್ದಾರೆ.
ಹೆಲಿಕಾಪ್ಟರ್ ದುರಂತದ ಬಗ್ಗೆ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ತಮ್ಮ ಟ್ವೀಟ್ ಖಾತೆ ಮೂಲಕ ಪ್ರತಿಕ್ರಿಯಿಸಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಘಟನೆಯಿಂದ ಮನಸಿಗೆ ತುಂಬಾ ನೋವಾಗಿದೆ. ಸ್ಥಳೀಯ ರಕ್ಷಣಾ ತಂಡಗಳು ಹಾಗೂ ಆಡಳಿತಗಳಿಂದ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಅಂತಲೂ ಬರೆದುಕೊಂಡಿದ್ದಾರೆ.
ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಷ: ಜೂನ್ 13ರಂದು ಮತ್ತೊಂದು ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಷ ಮಾಡಿದ ಘಟನೆ ಥಾಯ್ಲೆಂಡ್‌ನಲ್ಲಿ ನಡೆದಿದೆ. ಹಾಗಾದ್ರೆ ಇದಕ್ಕೆ ಕಾರಣ ಏನೆಂದು ಇಲ್ಲಿ ತಿಳಿಯಿರಿ.
ಥಾಯ್ಲೆಂಡ್‌ನ ಫುಕೆಟ್ ದ್ವೀಪದಿಂದ ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದೆ. ಆದ್ದರಿಂದ ಥೈಲ್ಯಾಂಡ್‌ನಲ್ಲಿ ತುರ್ತು ಭೂಸ್ಪರ್ಶಕ್ಕೆ ಮನವಿ ಮಾಡಲಾಗಿತ್ತು ಎಂದು ಫುಕೆಟ್ ವಿಮಾನ ನಿಲ್ದಾಣದ ಅಧಿಕಾರಿಗಳನ್ನು ತಿಳಿಸಿದ್ದರು.
AI 379 ಏರ್ ಇಂಡಿಯಾ ವಿಮಾನ ಹಾರಾಟ ಮಾಡುತ್ತಿದ್ದ ವೇಳೆ ಈ ಬೆದರಿಕೆ ಬಂದಿದೆ. ಆದ್ದರಿಂದ ತಕ್ಷಣವೇ ಭೂಸ್ಪರ್ಶಕ್ಕೆ ಮನವಿ ಮಾಡಲಾಗಿದೆ. ಈ ವೇಳೆ ಇದರಲ್ಲಿ 156 ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು ರಂದು ತಿಳಿದುಬಂದಿದೆ. ಅಹಮದಾಬಾದ್ ವಿಮಾನ ಭೀಕರ ದುರಂತ ಮಾಸಿಲ್ಲ. ಈ ಸಮಯದಲ್ಲೇ ವಿಮಾನಕ್ಕೆ ಬೆದರಿಕೆ ಕರೆ ಬಂದಿದೆ.
ಗುಜ್‌ರಾತ್‌ನ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಗುರುವಾರ ಏರ್ ಇಂಡಿಯಾ ವಿಮಾನ ಪತನ ಆಗಿತ್ತು. ಈ ದುರಂತದ ಬೆನ್ನಲ್ಲೇ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದ್ದು, ಇದೀಗ ಈ ವಿಚಾರ ಸಾರ್ವಜನಿಕರು ಹಾಗೂ ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಸಿತ್ತು.
ಬಾಂಬ್ ಬೆದರಿಕೆ ಬಳಿಕ ಏರ್ ಇಂಡಿಯಾ ವಿಮಾನ ಸಿಬ್ಬಂದಿ ವಿಮಾನ AI 379ನಿಂದ ಪ್ರಯಾಣಿಕರನ್ನು ಹೊರಕ್ಕೆ ಕರದುಕೊಂಡು ಬಂದಿದ್ದಾರೆ ಎಂದು ಥೈಲ್ಯಾಂಡ್ ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದರು.
ಆದರೆ, ಪ್ರಾಥಮಿಕ ಶೋಧಕಾರ್ಯಚರಣೆ ಬಳಿಕ ಆ ವಿಮಾನದೊಳಗೆ ಯಾವುದೇ ಬಾಂಬ್ ಪತ್ತೆಯಾಗಿಲ್ಲ. ವಿಮಾನದಲ್ಲಿ 156 ಪ್ರಯಾಣಿಕರಿದ್ದು, ಈ ವೇಳೆ ಯಾರು ಭಯಪಡಬೇಡಿ, ಪ್ರಯಾಣಿಕರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದರು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ









Click it and Unblock the Notifications