PM Modi: ಅಮಿತ್ ಶಾ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದು ಏನು ಗೊತ್ತಾ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಪ್ರಧಾನಿ ಮೋದಿ ಗುಜರಾತ್ ರಾಜಕೀಯದಿಂದ ಕೂಡ ಸ್ನೇಹಿತರು. ಹಾಗೇ ಕೇಂದ್ರ ಸರ್ಕಾರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು, ನರೇಂದ್ರ ಮೋದಿ ಅವರಿಗೆ ಪ್ರಧಾನಿ ಪಟ್ಟ ಸಿಕ್ಕ ನಂತರ ಅಮಿತ್ ಶಾ ಮತ್ತಷ್ಟು ಪವರ್ ಪಡೆದರು. ಹೀಗೆ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹುಟ್ಟುಹಬ್ಬ ಇದ್ದು, ಬರ್ತ್ ಡೇ ವಿಶ್ ಮಾಡಿದ್ದಾರೆ ಪ್ರಧಾನಿ ಮೋದಿ.

ಕೇಂದ್ರ ಎನ್‌ಡಿಎ ಸರ್ಕಾರದಲ್ಲಿ ಪವರ್ ಫುಲ್ ಸಚಿವರ ಪೈಕಿ ಅಮಿತ್ ಶಾ ಅವರು ಕೂಡ ಒಬ್ಬರು. ಅದರಲ್ಲೂ ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿ, ಸರ್ಕಾರದ ಪರವಾಗಿ ಮಾತನಾಡುವಲ್ಲಿ ಅಮಿತ್ ಶಾ ಪ್ರಬಲರು. ಹಾಗೇ ಬಿಜೆಪಿ ಅಧ್ಯಕ್ಷ ಸ್ಥಾನವನ್ನು ನಿರ್ವಹಿಸಿ ಬಂದಿದ್ದಾರೆ. ರಾಜಕೀಯ ಅಖಾಡದಲ್ಲಿ ಇಷ್ಟೆಲ್ಲಾ ಪರಿಣಿತಿ ಹೊಂದಿದ ಅಮಿತ್ ಶಾ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಇಂದು ಮುಕ್ತವಾಗಿ ಮಾತನಾಡಿದ್ದಾರೆ. ಹಾಗಾದ್ರೆ ಅಮಿತ್ ಶಾ ಹುಟ್ಟುಹಬ್ಬದ ದಿನ, ಅಮಿತ್ ಶಾ ಅವರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

Here is how PM Modi wished to Amit Shah on his Birthday

ಉತ್ತಮ ಆಡಳಿತಗಾರರಾಗಿ ಅಮಿತ್ ಶಾ...

ಅಂದಹಾಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ 59ನೇ ಹುಟ್ಟುಹಬ್ಬವನ್ನ ಆಚರಿಸಿಕೊಳ್ಳುತ್ತಿದ್ದು ಪ್ರಧಾನಿ ಮೋದಿ ಅವರು ಶುಭಾಶಯ ಕೋರಿದ್ದಾರೆ. ಸರ್ಕಾರ ಮತ್ತು ಆಡಳಿತಾರೂಢ ಬಿಜೆಪಿಗೆ ಅಮಿತ್ ಶಾ ನೀಡಿರುವ ಕೊಡುಗೆಗಳನ್ನು ಕೂಡ, ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಅಲ್ಲದೆ ಭಾರತದ ಪ್ರಗತಿ & ಬಡವರಿಗೆ ಉತ್ತಮ ಗುಣಮಟ್ಟದ ಜೀವನವನ್ನು ಖಾತ್ರಿಪಡಿಸಲು ಶಾ ಅವರು ಉತ್ಸುಕರಾಗಿದ್ದಾರೆ. ಉತ್ತಮ ಆಡಳಿತಗಾರರಾಗಿ ಛಾಪು ಮೂಡಿಸಿದ್ದಾರೆ ಅಂತಾ ಇದೇ ವೇಳೆ ಪ್ರಧಾನಿ ಮೋದಿ ಹೇಳಿದ್ದಾರೆ.

ದೀರ್ಘಾಯುಷ್ಯ & ಉತ್ತಮ ಆರೋಗ್ಯ ನೀಡಲಿ

ಹಾಗೇ ತಮ್ಮ ವಿಶೇಷ ಟ್ವೀಟ್‌ನಲ್ಲಿ ಪ್ರಧಾನಿ ಮೋದಿ ಅಮಿತ್ ಶಾ ಅವರ ಬಗ್ಗೆ, ಭಾರತದ ಭದ್ರತಾ ಸಾಮರ್ಥ್ಯ ಹೆಚ್ಚಿಸಲು ಗಮನಾರ್ಹ ಕೊಡುಗೆ ನೀಡಿದ್ದಾರೆ ಎಂದಿದ್ದಾರೆ. ಸಹಕಾರಿ ಕ್ಷೇತ್ರದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ ಎನ್ನುವ ಮೂಲಕ ಮೋದಿ ಅವರು, ಅಮಿತ್ ಶಾ ಅವರಿಗೆ ದೇವರು ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯವನ್ನ ನೀಡಲಿ ಎಂದು ಹಾರೈಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ರೀತಿ ಕೇಂದ್ರ ಸಚಿವ ರಾಜನಾಥ್ ಸಿಂಗ್ ಮತ್ತು ನಿತಿನ್ ಗಡ್ಕರಿ ಸೇರಿದಂತೆ ಕೇಂದ್ರದ ಹಲವು ಸಚಿವರು ಶಾ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.

ಒಟ್ನಲ್ಲಿ ಅಮಿತ್ ಶಾ ಹುಟ್ಟುಹಬ್ಬ ಹಿನ್ನೆಲೆ ಪ್ರಧಾನಿ ಮೋದಿ ವಿಶೇಷ ಸಂದೇಶ ತಿಳಿಸುವ ಮೂಲಕ ಶುಭ ಕೋರಿದ್ದಾರೆ. ಹಾಗೇ ಅಮಿತ್ ಶಾ ಬಿಜೆಪಿ ಮತ್ತು ಎನ್‌ಡಿಎ ಸರ್ಕಾರದಲ್ಲಿ ಮಾಡುತ್ತಿರುವ ಕೆಲಸದ ಬಗ್ಗೆ ಕೂಡ ಹೆಮ್ಮೆ ವ್ಯಕ್ತಪಡಿಸಿದ್ದು, ಈ ಮೂಲಕ ಅಮಿತ್ ಶಾ ಅವರ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಹಾಗೇ ದೇಶದ ವಿವಿಧ ರಾಜ್ಯಗಳ ಗಣ್ಯರಿಂದ ಕೂಡ ಅಮಿತ್ ಶಾ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+