ಉಕ್ರೇನ್‌ನಲ್ಲಿ ಹಾವೇರಿ ವಿದ್ಯಾರ್ಥಿ ಸಾವನ್ನಪ್ಪಿದ ಬೆನ್ನಲ್ಲೇ ಪ್ರಧಾನಿ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ನವದೆಹಲಿ, ಮಾರ್ಚ್‌ 1: ರಷ್ಯಾದ ತೀವ್ರವಾದ ಶೆಲ್ ದಾಳಿಗೆ ಪೂರ್ವ ಉಕ್ರೇನಿಯನ್ ನಗರವಾದ ಖಾರ್ಕಿವ್‌ನಲ್ಲಿ ಕರ್ನಾಟಕದ ಹಾವೇರಿಯ ವೈದ್ಯಕೀಯ ವಿದ್ಯಾರ್ಥಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಉಕ್ರೇನ್ ಸಂಘರ್ಷದ ಕುರಿತು ಪ್ರಧಾನಿ ಮೋದಿ ನಾಲ್ಕನೇ ಬಾರಿಗೆ ಉನ್ನತ ಮಟ್ಟ ಸಭೆ ನಡೆಸಿದ್ದಾರೆ.

ಉಕ್ರೇನ್‌ನಲ್ಲಿ ಸಿಲುಕಿರುವ ಇತರೆ ಭಾರತೀಯರನ್ನು ಮರಳಿ ಕರೆತರುವ ಪ್ರಯತ್ನಗಳನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಮತ್ತೊಂದು ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.

ಉಕ್ರೇನ್​ನಲ್ಲಿ ಕರ್ನಾಟಕದ ನವೀನ್ ಶೇಖರಪ್ಪ ಗ್ಯಾನಗೌಡರ್ (21) ರಷ್ಯನ್ನರ ಶೆಲ್ ದಾಳಿಗೆ ಸಾವನ್ನಪ್ಪಿದ್ದಾರೆ. ಅವರು ಖಾರ್ಕಿವ್ ರಾಷ್ಟ್ರೀಯ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ನಾಲ್ಕನೇ ವರ್ಷದ ವೈದ್ಯಕೀಯ ಶಿಕ್ಷಣದ ವಿದ್ಯಾರ್ಥಿಯಾಗಿದ್ದರು.

High-level Meeting Led by Prime Minister Narendra Modi Due To the Death of Haveri Student in Ukraine

ಪ್ರಧಾನಿ ಮೋದಿ ಕರೆದ ಉನ್ನತ ಮಟ್ಟದ ಸಭೆಯಲ್ಲಿ ವಿದೇಶಾಂಗ ಸಚಿವ ಎಸ್. ಜೈಶಂಕರ್, ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್, ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ, ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್ಎಸ್ಎ) ಅಜಿತ್ ದೋವಲ್ ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಉಕ್ರೇನ್ ಉದ್ವಿಗ್ನತೆಯ ನಡುವೆ ಸಿಲುಕಿರುವ ಭಾರತೀಯ ನಾಗರಿಕರನ್ನು ಸ್ಥಳಾಂತರಿಸುವ ಪ್ರಯತ್ನಗಳನ್ನು ಕೇಂದ್ರವು ಚುರುಕುಗೊಳಿಸಿದೆ. ಭಾರತೀಯ ಪ್ರಜೆಗಳ ಸ್ಥಳಾಂತರಿಸುವ ಪ್ರಕ್ರಿಯೆಯನ್ನು ಸಂಘಟಿಸಲು ಮತ್ತು ಮೇಲ್ವಿಚಾರಣೆ ಮಾಡಲು ಉಕ್ರೇನ್ ಗಡಿಯಲ್ಲಿರುವ ನಾಲ್ಕು ನೆರೆಯ ದೇಶಗಳಿಗೆ ಸರ್ಕಾರವು 'ವಿಶೇಷ ರಾಯಭಾರಿಗಳನ್ನು' ನಿಯೋಜಿಸಿದೆ.

ಇಂದು ಮುಂಜಾನೆ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರರು, "ಇಂದು ಬೆಳಿಗ್ಗೆ ಖಾರ್ಕಿವ್‌ನಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬರು ರಷ್ಯನ್ನರ ಶೆಲ್ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ನಾವು ಖಚಿತಪಡಿಸುತ್ತಿದ್ದೇವೆ. ಸಚಿವಾಲಯವು ಅವರ ಕುಟುಂಬದೊಂದಿಗೆ ಸಂಪರ್ಕದಲ್ಲಿದೆ. ಕುಟುಂಬಕ್ಕೆ ನಾವು ನಮ್ಮ ತೀವ್ರ ಸಂತಾಪವನ್ನು ತಿಳಿಸುತ್ತೇವೆ," ಎಂದು ಟ್ವೀಟ್ ಮಾಡಿತ್ತು.

ಕರ್ನಾಟಕದ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ್ ಶೇಖರಪ್ಪ ಜ್ಞಾನಗೌಡರ್ (21) ಕಳೆದ ನಾಲ್ಕು ವರ್ಷಗಳಿಂದ ಉಕ್ರೇನ್​ನಲ್ಲಿರುವ ಖಾರ್ಕಿವ್ ರಾಷ್ಟ್ರೀಯ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದರು.

High-level Meeting Led by Prime Minister Narendra Modi Due To the Death of Haveri Student in Ukraine

ಮಂಗಳವಾರ ಬೆಳಗ್ಗೆ ಅರ್ಖಿಟೆಕ್ಟೋರಾ ಬೆಕೆಟೋವಾ ಮೆಟ್ರೋ ನಿಲ್ದಾಣದ ಬಂಕರ್‌ನಿಂದ ದಿನಸಿ ವಸ್ತುಗಳನ್ನು ತರಲು ಹೊರಟ ನವೀನ್ ಮೇಲೆ ಖಾರ್ಕಿವ್‌ನ ಬೀದಿಯಲ್ಲಿ ಶೆಲ್ ದಾಳಿ ನಡೆಸಲಾಗಿದೆ. ಇದರಿಂದ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಪ್ರಥಮ ವರ್ಷದ ವೈದ್ಯಕೀಯ ವ್ಯಾಸಂಗ ಮಾಡುತ್ತಿರುವ ರಾಣೇಬೆನ್ನೂರಿನ ಪ್ರವೀಣ್ ಅವರ ಸ್ನೇಹಿತರೊಬ್ಬರು ನವೀನ್​ನ ಕುಟುಂಬದ ಸದಸ್ಯರಿಗೆ ಈ ವಿಷಯ ತಿಳಿಸಿದ್ದಾರೆ.

ಸೋಮವಾರ ಉಕ್ರೇನ್ ಪರಿಸ್ಥಿತಿ ಕುರಿತು ಪ್ರಧಾನಿ ಮೋದಿ 3ನೇ ಬಾರಿಗೆ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಸಚಿವರಾದ ಹರ್ದೀಪ್ ಪುರಿ, ಜ್ಯೋತಿರಾದಿತ್ಯ ಸಿಂಧಿಯಾ, ಕಿರಣ್ ರಿಜಿಜು ಮತ್ತು ಜ. ವಿ.ಕೆ. ಸಿಂಗ್, ವಿದೇಶಾಂಗ ಸಚಿವ ಎಸ್. ಜೈಶಂಕರ್, ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಮತ್ತು ಇತರ ಉನ್ನತ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

"ಆಪರೇಷನ್ ಗಂಗಾ' ಅಡಿಯಲ್ಲಿ ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಸ್ಥಳಾಂತರಿಸುವ ಪ್ರಗತಿ ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಮಹತ್ವದ ಸಭೆ ನಡೆಸಿದ್ದರು. 2 ದಿನಗಳಲ್ಲಿ ಇಂದು 4ನೇ ಬಾರಿಗೆ ಮೋದಿ ಉನ್ನತ ಅಧಿಕಾರಿಗಳು ಮತ್ತು ಸಚಿವರೊಂದಿಗೆ ಸಭೆ ನಡೆಸಿದ್ದಾರೆ.

ಉಕ್ರೇನ್‌ನಲ್ಲಿ ಸಾವನ್ನಪ್ಪಿದ ನವೀನ್ ಕುಟುಂಬಕ್ಕೆ ಕರೆ ಮಾಡಿದ ಮೋದಿ
ಉಕ್ರೇನ್​​ನಲ್ಲಿ ರಷ್ಯಾ ಮಿಲಿಟರಿ ಪಡೆಯ ದಾಳಿಗೆ ಮೃತರಾದ ಕರ್ನಾಟಕದ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲ್ಲೂಕಿನ ಚಳಗೇರಿ ಗ್ರಾಮದ ವೈದ್ಯಕೀಯ ವಿದ್ಯಾರ್ಥಿ ನವೀನ್ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಸಾಂತ್ವನ ಹೇಳಿದ್ದಾರೆ.

ಉಕ್ರೇನ್‌ನ ಖಾರ್ಕೀವ್‌ನಲ್ಲಿನ ಸೂಪರ್ ಮಾರ್ಕೆಟ್ ಬಳಿಯಲ್ಲಿ ಬೆಳಿಗ್ಗೆ ತಿಂಡಿ ತರುವುದಕ್ಕೆ ತೆರಳುತ್ತಿದ್ದಂತೆ ಕರ್ನಾಟಕದ ವೈದ್ಯಕೀಯ ವಿದ್ಯಾರ್ಥಿ ನವೀನ್, ರಷ್ಯಾ ಸೇನೆಯಿಂದ ನಡೆಸಿದ ಶೆಲ್ ದಾಳಿಯಲ್ಲಿ ಸಾವನ್ನಪ್ಪಿದರು.

ನವೀನ್​ ಸಾವನ್ನಪ್ಪಿರುವ ವಿಷಯವನ್ನು ಭಾರತೀಯ ವಿದೇಶಾಂಗ ಸಚಿವಾಲಯ ತಿಳಿಸುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಮೂಲಕ ನವೀನ್ ತಂದೆ ಶೇಖರಪ್ಪ ಗೌಡಗೆ ಕರೆ ಮಾಡಿ ಕೆಲ ನಿಮಿಷಗಳ ಕಾಲ ಮಾತನಾಡಿದ್ದು, ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ.

ದೇಶವೇ ನಿಮ್ಮೊಂದಿಗಿದೆ, ಮಗನ ಸಾವನ್ನು ಅರಗಿಸಿಕೊಳ್ಳುವಂತ ಶಕ್ತಿಯನ್ನು ಆ ದೇವರು ನೀಡಲಿ. ಭಗವಂತ ನಿಮ್ಮ ಕುಟುಂಬಕ್ಕೆ ಮಗನ ಸಾವಿನ ದುಖ ಭರಿಸುವ ಶಕ್ತಿ ನೀಡಲಿ ಎಂಬುದಾಗಿ ಸಾಂತ್ವನ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+