ಸಿಹಿಸುದ್ದಿ: ದೇಶದಲ್ಲಿ ಅತಿಹೆಚ್ಚು ಕೊವಿಡ್ ಸೋಂಕಿತರು ಗುಣಮುಖ
ನವದೆಹಲಿ, ಜುಲೈ.26: ಕೊರೊನಾವೈರಸ್ ಸೋಂಕಿತರ ಸಂಖ್ಯೆಯಲ್ಲಿ ಪ್ರತಿನಿತ್ಯ ದಾಖಲೆಯ ಏರಿಕೆ ಕಂಡು ಬರುತ್ತಿರುವುದು ಸಹಜ ಎನ್ನುವಂತಾ ಪರಿಸ್ಥಿತಿ ನಿರ್ಮಾಣವಾಗಿ ಬಿಟ್ಟಿದೆ. ಭಾರತದಲ್ಲಿ ಕೊವಿಡ್-19 ಸೋಂಕಿನಿಂದ ಗುಣಮುಖರಾದವರ ಸಂಖ್ಯೆಯಲ್ಲಿ ಹೊಸ ದಾಖಲೆ ನಿರ್ಮಾಣವಾಗಿದೆ.
ಕಳೆದ 24 ಗಂಟೆಗಳಲ್ಲೇ ಭಾರತದಲ್ಲಿ ಅತಿಹೆಚ್ಚು ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಂಕಿ-ಅಂಶಗಳು ಸ್ಪಷ್ಟವಾಗಿ ಹೇಳುತ್ತಿವೆ.
, ದೇಶದಲ್ಲಿ ಇದುವರೆಗೂ ಸೋಂಕಿನಿಂದ ಗುಣಮುಕ್ತರಾದವರ ಸಂಖ್ಯೆ 8,85,577ಕ್ಕೆ ಏರಿಕೆಯಾಗಿದೆ. ಒಟ್ಟು ಗುಣಮುಖರ ಶೇಕಡಾವಾರು ಪ್ರಮಾಣವು ಶೇ.63.92ಕ್ಕೆ ಏರಿಕೆಯಾಗಿದೆ.

24 ಗಂಟೆಗಳಲ್ಲೇ 48,661 ಮಂದಿಗೆ ಸೋಂಕು:
ದೇಶದಲ್ಲಿ ಒಂದೇ ದಿನ 48661 ಜನರಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 1385522ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಮಹಾಮಾರಿಗೆ 705 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆಯು 32,063ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತರ ಪೈಕಿ 8,85,577 ಸೋಂಕಿತರು ಗುಣಮುಖರಾಗಿದ್ದರೆ, 4,67,882 ಮಂದಿ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 362152 ಜನರನ್ನು ಸರ್ಕಾರಿ ಪ್ರಯೋಗಾಲಯಗಳಲ್ಲಿ ಕೊರೊನಾವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ. ಇನ್ನು, ಖಾಸಗಿ ಪ್ರಯೋಗಾಲಯಗಳಲ್ಲಿಯೂ ಒಂದೇ ದಿನ 79878 ಜನರಿಗೆ ಕೊವಿಡ್-19 ಸೋಂಕು ತಪಾಸಣೆ ನಡೆಸಲಾಗಿದೆ.












Click it and Unblock the Notifications