ನಾವು ಶತಕ ಬಾರಿಸುತ್ತಿರುವಾಗ, ನೀವು ನೋ-ಬಾಲ್ ಎಸೆಯುತ್ತಿದ್ದೀರಿ: ವಿಪಕ್ಷಗಳಿಗೆ ಪ್ರಧಾನಿ ಮೋದಿ ಕಿಂಡಲ್
ನವದೆಹಲಿ, ಆಗಸ್ಟ್ 10: ಅವಿಶ್ವಾಸ ನಿರ್ಣಯ ಮಂಡನೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡಿದರು. ಈ ವೇಳೆ, ವಿರೋಧ ಪಕ್ಷಗಳನ್ನು ಮತ್ತೊಮ್ಮೆ ತರಾಟೆಗೆ ತೆಗೆದುಕೊಂಡರು. 'ನಮ್ಮ ಸರ್ಕಾರದ ಮೇಲೆ ನಂಬಿಕೆ ಇರಿಸಿರುವ ಜನರಿಗೆ ಧನ್ಯವಾದ ಹೇಳಲು ನಾನು ಇಲ್ಲಿದ್ದೇನೆ. ದೇವರು ಕರುಣಾಮಯಿ. ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯವನ್ನು ಮಂಡನೆ ಮಾಡಿದ್ದಕ್ಕಾಗಿ ನಾನು ದೇವರಿಗೆ ಧನ್ಯವಾದಗಳನ್ನು ಹೇಳಲು ಬಯಸುತ್ತೇನೆ' ಎಂದು ಪ್ರಧಾನಿ ಮೋದಿ ಹೇಳಿದರು.
ಜುಲೈ 26 ರಂದು ಪ್ರತಿಪಕ್ಷಗಳಿಂದ ಅವಿಶ್ವಾಸ ನಿರ್ಣಯ ಮಂಡನೆ
ಪ್ರತಿಪಕ್ಷಗಳು ಜುಲೈ 26 ರಂದು ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯವನ್ನು ಮಂಡಿಸಿವೆ. ಅದನ್ನು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಅಂಗೀಕರಿಸಿದರು.

ಎರಡನೇ ಬಾರಿಗೆ ಮೋದಿಯವರು ಅವಿಶ್ವಾಸ ನಿರ್ಣಯವನ್ನು ಎದುರಿಸುತ್ತಿದ್ದಾರೆ.
ಮಂಗಳವಾರ ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಅವರು ಈ ಮಸೂದೆಯ ಮೇಲಿನ ಚರ್ಚೆಯನ್ನು ಪ್ರಾರಂಭಿಸಿದರು. ಇದು ಪ್ರತಿಪಕ್ಷಗಳು ಮತ್ತು ಕೇಂದ್ರದ ನಡುವೆ ತೀವ್ರ ವಾಗ್ವಾದಕ್ಕೆ ಕಾರಣವಾಗಿದೆ.
ಜುಲೈ 20ರಂದು ಮುಂಗಾರು ಅಧಿವೇಶನ ಆರಂಭವಾದಾಗಿನಿಂದ ಮಣಿಪುರದಲ್ಲಿ ನಡೆದ ಹಿಂಸಾಚಾರ ಸೇರಿದಂತೆ ಹಲವು ವಿಷಯಗಳ ಕುರಿತು ಸಂಸತ್ತಿನಲ್ಲಿ ಗದ್ದಲ ನಡೆಯುತ್ತಿದೆ.
ದೇಶವು ನಿಮ್ಮ ಮಾತನ್ನು ಬಹಳ ಎಚ್ಚರಿಕೆಯಿಂದ ಕೇಳುತ್ತಿದೆ. ನೀವು ಯಾವಾಗಲೂ ನಿರಾಶೆಯಿಂದ ದೇಶದ ಜನರನ್ನು ದೂರ ಮಾಡಿದ್ದೀರಿ ಎಂದು ವಿರೋಧ ಪಕ್ಷಗಳಿಗೆ ಪ್ರಧಾನಿ ಮೋದಿ ಹೇಳಿದರು.
ನಮ್ಮ ಹಲವಾರು ಮಸೂದೆಗಳು ಬಡವರು, ಹಿಂದುಳಿದವರು, ದಲಿತರಿಗೆ ಸಂಬಂಧಿಸಿವೆ. ಆದರೆ ವಿಪಕ್ಷಗಳಿಗೆ ಅದರಲ್ಲಿ ಆಸಕ್ತಿ ಇಲ್ಲ. ಪ್ರತಿಪಕ್ಷಗಳು ಜನರಿಗೆ ದ್ರೋಹ ಬಗೆಯುತ್ತಿವೆ.
ನಿರಾಶೆಯಿಂದ ದೇಶದ ಜನರನ್ನು ದೂರ ಮಾಡಿದ್ದೀರಿ ಎಂದು ವಿರೋಧ ಪಕ್ಷಗಳಿಗೆ ಪ್ರಧಾನಿ ಮೋದಿ ಹೇಳಿದರು.
ನಮ್ಮ ಹಲವಾರು ಮಸೂದೆಗಳು ಬಡವರು, ಹಿಂದುಳಿದವರು, ದಲಿತರಿಗೆ ಸಂಬಂಧಿಸಿವೆ. ಆದರೆ ವಿಪಕ್ಷಗಳಿಗೆ ಅದರಲ್ಲಿ ಆಸಕ್ತಿ ಇಲ್ಲ. ಪ್ರತಿಪಕ್ಷಗಳು ಜನರಿಗೆ ದ್ರೋಹ ಬಗೆಯುತ್ತಿವೆ ಎಂದು ಅವರು ಹೇಳಿದರು.
'ನಾವು ಜಾಗತಿಕ ವೇದಿಕೆಯಲ್ಲಿ ಭಾರತದ ಹಳೆಯ ವೈಭವವನ್ನು ಮರುಸ್ಥಾಪಿಸಿದ್ದೇವೆ. ಆದರೆ ಕೆಲವರು ದೇಶವನ್ನು ದೂಷಿಸಲು ಬಯಸುತ್ತಾರೆ. ಜಗತ್ತು ಈಗ ಭಾರತದ ಬಗ್ಗೆ ತಿಳಿದಿದೆ' ಎಂದು ಪ್ರಧಾನಿ ಹೇಳಿದರು.
ನಾವು ಶತಕಗಳನ್ನು ಬಾರಿಸುತ್ತಿರುವಾಗ, ನೀವು ನೋ ಬಾಲ್ ಎಸೆಯುತ್ತಿದ್ದೀರಿ ಎಂದು ವಿರೋಧ ಪಕ್ಷಗಳಿಗೆ ಪ್ರಧಾನಿ ಮೋದಿ ಕಿಂಡಲ್ ಮಾಡಿದರು.
ಬ್ಯಾಂಕಿಂಗ್ ಕ್ಷೇತ್ರ ಕುಸಿಯಲಿದೆ ಎಂದು ವಿರೋಧ ಪಕ್ಷಗಳು ಹೇಳಿದ್ದವು. ಆದರೆ, ನಮ್ಮ ಸಾರ್ವಜನಿಕ ವಲಯದ ಬ್ಯಾಂಕ್‌ಗಳ ನಿವ್ವಳ ಲಾಭ ದ್ವಿಗುಣಗೊಂಡಿದೆ ಎಂದು ಪ್ರಧಾನಿ ಹೇಳಿದರು.
ಪ್ರತಿಪಕ್ಷಗಳು ಎಚ್‌ಎಎಲ್ ಬಗ್ಗೆ ನಕಾರಾತ್ಮಕವಾಗಿ ಮಾತನಾಡಿದ್ದವು. ಎಚ್‌ಎಎಲ್ ಮುಗಿದಿದೆ ಮತ್ತು ಭಾರತದ ರಕ್ಷಣಾ ಕ್ಷೇತ್ರ ನಾಶವಾಗಿದೆ ಎಂದು ಹೇಳುತ್ತಿದ್ದರು. ಜಮೀನಿನಲ್ಲಿ ವಿಡಿಯೋ ಚಿತ್ರೀಕರಣ ಮಾಡಿದಂತೆ ಎಚ್‌ಎಎಲ್‌ನ ಬಾಗಿಲಲ್ಲಿ ವಿಡಿಯೋ ಚಿತ್ರೀಕರಣ ಮಾಡಲಾಗಿತು. ಪ್ರತಿಪಕ್ಷಗಳು ಎಚ್‌ಎಎಲ್ ಕಾರ್ಯಕರ್ತರ ಬ್ರೈನ್‌ವಾಶ್ ಮಾಡಲು ಯತ್ನಿಸಿತು. ಇಂದು , ಎಚ್‌ಎಎಲ್ ಯಶಸ್ಸಿನ ಹೊಸ ಎತ್ತರವನ್ನು ಸಾಧಿಸುತ್ತಿದೆ. ಅತ್ಯಧಿಕ ಆದಾಯವನ್ನು ದಾಖಲಿಸುತ್ತಿದೆ ಎಂದು ಪ್ರಧಾನಿ ತಿಳಿಸಿದರು.
'ಎಲ್‌ಐಸಿ ಬಗ್ಗೆ ವಿರೋಧ ಪಕ್ಷದವರು ಸುಳ್ಳು ಹೇಳಿದ್ದಾರೆ. ಇಂದು ಎಲ್‌ಐಸಿ ಬಲವಾಗಿ ಬೆಳೆಯುತ್ತಿದೆ. ಷೇರುಗಳಲ್ಲಿ ಆಸಕ್ತಿ ಹೊಂದಿರುವವರು ಸರ್ಕಾರಿ ಕಂಪನಿಗಳ ಷೇರುಗಳಲ್ಲಿ ಹೂಡಿಕೆ ಮಾಡಬೇಕು ಎಂಬುದಾಗಿ ತಿಳಿದಿರುತ್ತಾರೆ' ಎಂದು ಪ್ರಧಾನಿ ಮೋದಿ ಲೋಕಸಭೆಯಲ್ಲಿ ಹೇಳಿದರು.
ಭಾರತದ ಗಡಿಯ ಮೇಲೆ ಪಾಕಿಸ್ತಾನ ದಾಳಿ ಮಾಡುತ್ತಿತ್ತು. ಭಯೋತ್ಪಾದಕರನ್ನು ನಮ್ಮ ದೇಶದೊಳಗೆ ಕಳುಹಿಸುತ್ತಿತ್ತು. ಆದರೆ, ಪಾಕಿಸ್ತಾನ ತನ್ನ ಪಾತ್ರವನ್ನು ನಿರಾಕರಿಸುತ್ತಿತ್ತು. ಕಾಂಗ್ರೆಸ್ ಪಾಕ್ ಮೇಲೆ ನಂಬಿಕೆ ಇಟ್ಟಿತ್ತು. ಕಾಂಗ್ರೆಸ್ ಹುರಿಯತ್ ಮತ್ತು ಇತರ ಪ್ರತ್ಯೇಕತಾವಾದಿಗಳನ್ನು ನಂಬಿತ್ತು. ನಾವು ಅವರ ಮೇಲೆ ಸರ್ಜಿಕಲ್ ಸ್ಟ್ರೈಕ್ ಮತ್ತು ವೈಮಾನಿಕ ದಾಳಿಗಳನ್ನು ನಡೆಸಿದೆವು ಎಂದು ಮೋದಿ ಹೇಳಿದರು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications