ನಗರದೊಳಗಿರುವ ಬಾರ್ ಗಳಿಗೆ ಮದ್ಯ ನಿಷೇಧ ಅನ್ವಯಿಸುವುದಿಲ್ಲ: ಸುಪ್ರೀಂ

ನವದೆಹಲಿ, ಜುಲೈ 04 : ನಗರ ವ್ಯಾಪ್ತಿ ಹೆದ್ದಾರಿಗಳಲ್ಲಿ ಇರುವ ಬಾರ್ ಮಾಲೀಕರಿಗೆ ಸಂತಸದ ಸುದ್ದಿಯೊಂದನ್ನು ಸುಪ್ರೀಂ ಕೋರ್ಟ್ ನೀಡಿದೆ.

ನಗರ ವ್ಯಾಪ್ತಿಯ ಹೆದ್ದಾರಿಗಳನ್ನು ಡಿನೋಟಿಫೈ ಮಾಡುವ ಅವಕಾಶವಿದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಮಹತ್ವದ ಅಭಿಪ್ರಾಯ ತಿಳಿಸಿದೆ. ಇದರಿಂದಾಗಿ ಬೆಂಗಳೂರು ಸೇರಂದತೆ ನಗರಗಳಲ್ಲಿರುವ ಬಾರ್ ಮತ್ತು ಪಬ್ ಗಳಿಗೆ ರಿಲೀಫ್ ಸಿಕ್ಕಂತಾಗಿದೆ.

Highway liquor ban: States can denotify roads and allow bars,

ಮಧ್ಯ ನಿಷೇಧ ಮಾಡಿದ್ದು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಾತ್ರ, ಮಧ್ಯಸೇವಿಸಿ ಚಾಲಕರು ಹೆದ್ದಾರಿಗಳಲ್ಲಿ ಅತಿವೇಗವಾಗಿ ವಾಹನ ಚಲಾಯಿಸುತ್ತಿದ್ದರು, ಹೀಗಾಗಿ ಹೆದ್ದಾರಿಗಳಲ್ಲಿ ಮಧ್ಯ ಮಾರಾಟ ನಿಷೇಧಕ್ಕೆ ಆದೇಶಿಸಲಾಗಿತ್ತು. ಇದು ನಗರದೊಳಗಿರುವ ಬಾರ್ ಗಳಿಗೆ ಅನ್ವಯಿಸುವುದಿಲ್ಲ ಎಂದು ಸುಪ್ರೀಂ ತಿಳಿಸಿದೆ.

ನಗರ ವ್ಯಾಪ್ತಿಯ ಹೆದ್ದಾರಿಗಳನ್ನು ಡಿನೋಟಿಫೈ ಮಾಡಬಹುದು, ಇದರಲ್ಲಿ ಯಾವುದೇ ತಪ್ಪಿಲ್ಲ ಎಂದು ಹೇಳಿರುವ ಸುಪ್ರೀಂ ಡಿನೋಟಿಫೈ ಮಾಡುವ ಅಧಿಕಾರ ಆಯಾ ರಾಜ್ಯ ಸರ್ಕಾರಗಳಿಗೆ ಎಂದು ಹೇಳಿದೆ.

ರಾಷ್ಟ್ರೀಯ ಹೆದ್ದಾರಿಯಿಂದ 500 ಮೀಟರ್ ವ್ಯಾಪ್ತಿಯಲ್ಲಿರುವ ಬಾರ್ ಗಳನ್ನು ನಿಷೇಧಿಸಬೇಕೆಂದು ಸುಪ್ರೀಂ ಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+