Hijab Ban: ಕರ್ನಾಟಕದಲ್ಲಿ ಹಿಜಾಬ್ ನಿಷೇಧ ಹಿಂಪಡೆಯಲು ಕಾಂಗ್ರೆಸ್‌ಗೆ ಒಮರ್ ಅಬ್ದುಲ್ಲಾ ಒತ್ತಾಯ
ಕರ್ನಾಟಕ ಸರ್ಕಾರ ಹೇರಿರುವ ಹಿಜಾಬ್ ನಿಷೇಧವನ್ನು ಹಿಂಪಡೆಯಲು ಕೆಲಸ ಮಾಡುವಂತೆ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರಿಗೆ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಒತ್ತಾಯಿಸಿದ್ದಾರೆ.
ಬಾರಾಮುಲ್ಲಾದಲ್ಲಿ ಪಕ್ಷದ ಕಾರ್ಯಕ್ರಮದ ನಂತರ ಮಾತನಾಡಿದ ಒಮರ್ ಅಬ್ದುಲ್ಲಾ, ಸರ್ಕಾರವು ಇದರಲ್ಲಿ ಏಕೆ ಮಧ್ಯಪ್ರವೇಶಿಸಬೇಕು? ಮತ್ತು ಮುಸ್ಲಿಮರನ್ನು ಗುರಿಯಾಗಿಟ್ಟುಕೊಂಡು ಇಂತಹ ಆದೇಶಗಳನ್ನು ಜಾರಿಗೊಳಿಸಲಾಗಿದೆ. ಕರ್ನಾಟಕದಲ್ಲಿ ಈ ಹಿಂದೆ ಇದೆಲ್ಲ ನಡೆದಾಗ ನಮಗೆ ಆಶ್ಚರ್ಯವಾಗಲಿಲ್ಲ ಏಕೆಂದರೆ ಆ ಸಮಯದಲ್ಲಿ ಬಿಜೆಪಿ ಸರ್ಕಾರವಿತ್ತು ಎಂದರು.

ಆದರೆ ಈಗ ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ಇಂತಹ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ, ಇದು ಅತ್ಯಂತ ದುರದೃಷ್ಟಕರ, ನಾನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರನ್ನು ಕರ್ನಾಟಕದಲ್ಲಿ ಹೊರಡಿಸಿರುವ ಆದೇಶವನ್ನು ಮರುಪರಿಶೀಲಿಸಿ ಈ ಆದೇಶವನ್ನು ಹಿಂತೆಗೆದುಕೊಳ್ಳುವ ಕೆಲಸ ಮಾಡಬೇಕೆಂದು ನಾನು ವಿನಂತಿಸುತ್ತೇನೆ" ಎಂದು ಹೇಳಿದರು.
ಬಿಜೆಪಿ ವಿರುದ್ಧ ವಾಗ್ದಾಳಿ
ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಾಜಿ ಮುಖ್ಯಮಂತ್ರಿ, ಬಿಜೆಪಿ ಜನರನ್ನು ಎದುರಿಸಲು ಸಿದ್ಧವಿಲ್ಲ. "ವಿಧಾನಸಭಾ ಚುನಾವಣೆ ಬಿಡಿ, ಮುನ್ಸಿಪಲ್ ಚುನಾವಣೆಯೂ ಮುಂದೂಡಲ್ಪಟ್ಟಿದೆ, ಶ್ರೀನಗರದಲ್ಲಿ ಪುರಸಭೆ (ಕಾರ್ಪೊರೇಷನ್) ಈಗ ಅಸ್ತಿತ್ವದಲ್ಲಿಲ್ಲ, ಜಮ್ಮು ಪುರಸಭೆಯ ಅವಧಿಯೂ ಮುಗಿಯುತ್ತಿದೆ, ಜನವರಿ ವೇಳೆಗೆ ಎಲ್ಲಾ ಪುರಸಭೆಗಳು ತಮ್ಮ ಅವಧಿಯನ್ನು ಪೂರ್ಣಗೊಳಿಸುತ್ತವೆ'' ಎಂದು ಹೇಳಿದರು.
"ಜಮ್ಮು ಕಾಶ್ಮೀರದಲ್ಲಿ ಮೂರು ಹಂತದ ಪ್ರಜಾಪ್ರಭುತ್ವವನ್ನು ಸ್ಥಾಪಿಸಿದ್ದೇವೆ ಎಂದು ಅವರು (ಕೇಂದ್ರ ಸರ್ಕಾರ) ಜಗತ್ತಿಗೆ ಹೇಳುತ್ತಿದ್ದರು, ಈಗ ಅದರಲ್ಲಿ ಒಂದು ಹಂತವೂ ಉಳಿದಿಲ್ಲ. ಇದು ಸ್ಪಷ್ಟವಾಗಿದೆ. ಬಿಜೆಪಿ ಇಲ್ಲಿ ಚುನಾವಣೆಯಲ್ಲಿ ಗೆಲ್ಲುತ್ತೇವೆ ಎಂದು ಭಾವಿಸಿದ್ದರೆ ಅವರು ಇಲ್ಲಿ ಚುನಾವಣೆ ನಡೆಸುತ್ತಿದ್ದರು ಎಂದು ಹೇಳಿದರು.












Click it and Unblock the Notifications