Hijab Row: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್‌ಗೆ ಅವಕಾಶವಿಲ್ಲ ಎಂದ ಅಲಹಾಬಾದ್ ಹೈಕೋರ್ಟ್, ವಿದ್ಯಾರ್ಥಿನಿಯ ಅರ್ಜಿ ವಜಾ

Hijab Row: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್ ಧರಿಸುವುದಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಶಿಕ್ಷಣ ಸಂಸ್ಥೆಗಳು ನಿರ್ದಿಷ್ಟವಾಗಿ ನಿಗದಿಪಡಿಸಿದ ಶಾಲಾ ಸಮವಸ್ತ್ರದ ನಿಯಮವನ್ನು ವೈಯಕ್ತಿಕ ಆಸಕ್ತಿ ಅಥವಾ ಆದ್ಯತೆಗಳಿಗೆ ಅನುಗುಣವಾಗಿ ಬದಲಾಯಿಸುವ ಹಕ್ಕು ಯಾವುದೇ ವಿದ್ಯಾರ್ಥಿಗೂ ಇಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.

ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್ (ಹೆಡ್‌ಸ್ಕಾರ್ಫ್) ಧರಿಸಲು ಅನುಮತಿ ಕೋರಿ ಅಪ್ರಾಪ್ತ ಮುಸ್ಲಿಂ ವಿದ್ಯಾರ್ಥಿನಿಯೊಬ್ಬರು ಅಲಹಾಬಾದ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಈ ಅರ್ಜಿಯನ್ನು ವಜಾಗೊಳಿಸಲಾಗಿದೆ. ಅಲ್ಲದೆ ಅರ್ಜಿದಾರರು ಹಿಜಾಬ್ ಧರಿಸುವುದು ಇಸ್ಲಾಮಿಕ್ ನಂಬಿಕೆಯ ಅತ್ಯಗತ್ಯ ಧಾರ್ಮಿಕ ಆಚರಣೆ ಎಂದು ಹೇಳುವುದಕ್ಕೆ ಪೂರಕವಾದ ವಿಷಯಗಳನ್ನು ಮಂಡನೆ ಮಾಡಲು ವಿಫಲರಾಗಿದ್ದಾರೆ ಎನ್ನುವ ಅಂಶವನ್ನು ಇದರಲ್ಲಿ ಪರಿಗಣಿಸಲಾಗಿದೆ.

Hijab Row

ವಿದ್ಯಾರ್ಥಿನಿಯು ಸಲ್ಲಿಕೆ ಮಾಡಲಾಗಿದ್ದ ಅರ್ಜಿಯಲ್ಲಿ ಹಿಜಾಬ್ ಧರಿಸುವುದು ಇಸ್ಲಂ ಧರ್ಮದ ಅತ್ಯಗತ್ಯ ಆಚರಣೆಯಾಗಿದ್ದು, 6ನೇ ತರಗತಿಯಿಂದಲೂ ಇದೇ ಶಾಲೆಯಲ್ಲಿ ಹಿಜಾಬ್ ಧರಿಸುತ್ತಿರುವುದಾಗಿಯೂ ಅವರು ಅರ್ಜಿಯಲ್ಲಿ ಉಲ್ಲೇಖ ಮಾಡಿದ್ದರು. ನ್ಯಾಯಮೂರ್ತಿ ಜೆಜೆ ಮುನೀರ್ ಮತ್ತು ನ್ಯಾಯಮೂರ್ತಿ ಇಂದ್ರಜೀತ್ ಶುಕ್ಲಾ ಅವರ ಪೀಠವು, ಶಿಕ್ಷಣ ಸಂಸ್ಥೆಯು ನಿಗದಿಪಡಿಸಿರುವ ಡ್ರೆಸ್ ಕೋಡ್ ಏಕರೂಪತೆ, ಪ್ರಾಮಾಣಿಕತೆ, ತಾರತಮ್ಯರಹಿತತೆ ಹಾಗೂ ಶಿಸ್ತು ಮತ್ತು ಸಾಂಸ್ಥಿಕ ಗುರುತನ್ನು ಕಾಪಾಡುವ ಉದ್ದೇಶವನ್ನು ಒಳಗೊಂಡಿದೆ. ಹೀಗಾಗಿ, ವಿದ್ಯಾರ್ಥಿಯೊಬ್ಬರು ಈ ಡ್ರೆಸ್ ಕೋಡ್‌ ಅನ್ನು ಬದಲಾಯಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ಇನ್ನು ಮುಖ್ಯವಾಗಿ ಮುಸ್ಲಿಂ ಮಹಿಳೆಯರು ಹಿಜಾಬ್ ಧರಿಸುವುದು ಇಸ್ಲಾಮಿಕ್ ನಂಬಿಕೆಯಲ್ಲಿ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ ಎಂದು ಕರ್ನಾಟಕ ಹೈಕೋರ್ಟ್ 2022ರ ಪೂರ್ಣ ಪೀಠದ ತೀರ್ಪಿಗಿಂತ ಭಿನ್ನವಾದ ದೃಷ್ಟಿಕೋನವನ್ನು ತೆಗೆದುಕೊಳ್ಳಲು ಯಾವುದೇ ಕಾರಣವಿಲ್ಲ ಎಂದು ನ್ಯಾಯಾಲಯವು ಗಮನಿಸಿದೆ ಎಂದೂ ಹೇಳಲಾಗಿದೆ.

ಇನ್ನು ಹಿಜಾಬ್ ಧರಿಸುವುದಕ್ಕೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಕೆ ಮಾಡಿರುವ ವಿದ್ಯಾರ್ಥಿನಿಯು ಹತ್ತನೇ ತರಗತಿಯಲ್ಲಿ ಉತ್ತೀರ್ಣರಾಗಿದ್ದರು ಮತ್ತು ಅದೇ ಶಾಲೆಯಲ್ಲಿ ಹನ್ನೊಂದನೇ ತರಗತಿಗೆ ಪ್ರವೇಶ ಪಡೆಯಲು ಪ್ರಯತ್ನಿಸಿದ್ದರು. ಶಾಲೆಯು ತಮ್ಮ ಎಲ್ಲಾ ವಿದ್ಯಾರ್ಥಿಗಳಿಗೆ ನಿಗದಿಪಡಿಸಿದ ಸಮವಸ್ತ್ರದ ಜೊತೆಗೆ "ಹಿಜಾಬ್‌" ಧರಿಸಲು ಶಾಲಾ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಆದೇಶ ಕೋರಿ ಅವರು ತಮ್ಮ ತಾಯಿಯ ಮೂಲಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದರು.

ಆರನೇ ತರಗತಿಯಿಂದ ಹತ್ತನೇ ತರಗತಿಯವರೆಗೆ ಶಾಲೆಯಲ್ಲಿ ಅಧ್ಯಯನ ಮಾಡಿದ್ದೇನೆ ಮತ್ತು ಆ ಅವಧಿಯಲ್ಲಿ ಶಾಲೆಯಿಂದ ಯಾವುದೇ ಆಕ್ಷೇಪಣೆಯಿಲ್ಲದೆ ಹಿಜಾಬ್‌ ಧರಿಸಿದ್ದೆ ಎಂದು ಬಾಲಕಿ ಹೇಳಿಕೊಂಡಿದ್ದಾಳೆ. ಆದಾಗ್ಯೂ, ಹಿಜಾಬ್ ಧರಿಸುವುದನ್ನು ಮುಂದುವರಿಸಲು ಮನವಿ ಮಾಡಿದ್ದರಿಂದ ಶಾಲೆಯ ಆಡಳಿತ ಮಂಡಳಿಯು ಇದೀಗ ಹನ್ನೊಂದನೇ ತರಗತಿಗೆ ಪ್ರವೇಶವನ್ನು ನಿರಾಕರಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಶಾಲೆಯ ಆಡಳಿತ ಮಂಡಳಿ ಹೇಳಿದ್ದೇನು

ಇನ್ನು ಈ ಶಾಲೆಯಲ್ಲಿ ಇಸ್ಲಾಂ ಧರ್ಮಕ್ಕೆ ಸೇರಿದ ಇನ್ನುಳಿದ ವಿದ್ಯಾರ್ಥಿನಿಯರು ಸಹ ವಿದ್ಯಾಭ್ಯಾಸ ಮಾಡುತ್ತಿದ್ದು. ಅದೇ ಧಾರ್ಮಿಕ ಸಮುದಾಯಕ್ಕೆ ಸೇರಿದ ಇತರ ವಿದ್ಯಾರ್ಥಿನಿಯರು ನಿಗದಿತ ಡ್ರೆಸ್ ಕೋಡ್ ಅಥವಾ ಶಾಲಾ ಸಮವಸ್ತ್ರವನ್ನು ಧರಿಸುತ್ತಿದ್ದಾರೆ.

ಅರ್ಜಿದಾರರಿಗೆ ಅಥವಾ ನಿರ್ದಿಷ್ಟ ವಿದ್ಯಾರ್ಥಿನಿಗೆ ವಿನಾಯಿತಿ ನೀಡುವುದು ಶಾಲೆಯ ಆಡಳಿತ ಮತ್ತು ಶಿಸ್ತಿನ ಮೇಲೆ ಪರಿಣಾಮ ಬೀರಬಹುದು ಎನ್ನುವುದು ಶಾಲೆಯ ಪ್ರಾಂಶುಪಾಲರ ನಿಲುವಾಗಿತ್ತು. ಸಮವಸ್ತ್ರ ಸೂಚಿಸುವುದು ನಿರ್ದಿಷ್ಟವಾಗಿ ಶಾಲಾ ಆಡಳಿತದ ನೀತಿಯ ವಿಷಯವಾಗಿದೆ. ಇದರ ಉದ್ದೇಶವು ಅವರ ಸಂಸ್ಥೆಗೆ ಹಾಜರಾಗುವ ವಿದ್ಯಾರ್ಥಿಗಳಲ್ಲಿ ಏಕರೂಪತೆ ತರುವುದು ಇದರ ಉದ್ದೇಶವಾಗಿದೆ ಎಂದು ಉತ್ತರ ಪ್ರದೇಶದ ವಕೀಲರು ವಾದಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+