ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಲ್ಲಾ ಧರ್ಮದ ವಿದ್ಯಾರ್ಥಿಗಳು ವಸ್ತ್ರಸಂಹಿತೆ ಪಾಲಿಸಬೇಕು: ಅಮಿತ್‌ ಶಾ

|
Google Oneindia Kannada News

ನವದೆಹಲಿ, ಫೆಬ್ರವರಿ 21: ಕರ್ನಾಟಕದಲ್ಲಿ ಹಿಜಾಬ್‌ ವಿವಾದ ಭಾರಿ ಚರ್ಚೆಗೆ ಕಾರಣವಾಗಿದೆ. ಈ ನಡುವೆ, ಹಿಜಾಬ್ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಅಮಿತ್ ಶಾ ಅವರು, ಶಾಲೆಗಳು ಮತ್ತು ಕಾಲೇಜುಗಳು ಸೂಚಿಸಿದ ಡ್ರೆಸ್ ಕೋಡ್ ಅನ್ನು ಎಲ್ಲಾ ವಿದ್ಯಾರ್ಥಿಗಳು ತಮ್ಮ ಧರ್ಮವನ್ನು ಲೆಕ್ಕಿಸದೆ ಅನುಸರಿಸಬೇಕು ಎಂದು ಹೇಳಿದ್ದಾರೆ.

ಸಿಎನ್‌ಎನ್ ನ್ಯೂಸ್ 18 ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅಮಿತ್‌ ಶಾ, "ಶಾಲಾ-ಕಾಲೇಜುಗಳಲ್ಲಿ ಮಕ್ಕಳನ್ನು ಧರ್ಮಕ್ಕಿಂತ ಹೆಚ್ಚಾಗಿ ಸೌಹಾರ್ಧವಾಗಿ ನೋಡಿಕೊಳ್ಳಬೇಕು. ಧರ್ಮವನ್ನು ಲೆಕ್ಕಿಸದೆ ಪ್ರತಿಯೊಬ್ಬ ವಿದ್ಯಾರ್ಥಿಯು ಕಡ್ಡಾಯವಾದ ಸಮವಸ್ತ್ರವನ್ನು ಅನುಸರಿಸಬೇಕು ಎಂದು ನಾನು ವೈಯಕ್ತಿಕವಾಗಿ ಭಾವಿಸುತ್ತೇನೆ," ಎಂದು ತಿಳಿಸಿದ್ದಾರೆ.

"ವಿಷಯವು ನ್ಯಾಯಾಲಯದಲ್ಲಿದೆ ಮತ್ತು ನ್ಯಾಯಾಲಯದ ನಿರ್ಧಾರವನ್ನು ಎಲ್ಲರೂ ಒಪ್ಪಿಕೊಳ್ಳಬೇಕು. ನ್ಯಾಯಾಲಯವು ತನ್ನ ತೀರ್ಪು ನೀಡುವವರೆಗೂ ನನ್ನ ವೈಯಕ್ತಿಕ ನಂಬಿಕೆ ಉಳಿಯುತ್ತದೆ. ಆದರೆ ನ್ಯಾಯಾಲಯವು ತನ್ನ ತೀರ್ಪು ನೀಡಿದರೆ, ನಾನು ಅದನ್ನು ಸಹ ಒಪ್ಪಿಕೊಳ್ಳಬೇಕು," ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗ: ಹರ್ಷ ಹತ್ಯೆಗೆ ಕಾರಣ ಏನು? ಸಾವಿನ ಮನೆಯಲ್ಲಿ ಸುಳ್ಳಿನ ಮೆರವಣಿಗೆಶಿವಮೊಗ್ಗ: ಹರ್ಷ ಹತ್ಯೆಗೆ ಕಾರಣ ಏನು? ಸಾವಿನ ಮನೆಯಲ್ಲಿ ಸುಳ್ಳಿನ ಮೆರವಣಿಗೆ

ಕಳೆದ ತಿಂಗಳು ಉಡುಪಿಯ ಸರ್ಕಾರಿ ಪಿಯು ಕಾಲೇಜಿನಲ್ಲಿ ತಲೆಗೆ ರುಮಾಲು ಧರಿಸಿ ತರಗತಿಗೆ ಹಾಜರಾಗಿದ್ದ ಆರು ವಿದ್ಯಾರ್ಥಿಗಳು ನಿಗದಿತ ವಸ್ತ್ರ ಸಂಹಿತೆ ಉಲ್ಲಂಘಿಸಿದ್ದರಿಂದ ಕಾಲೇಜಿಗೆ ಪ್ರವೇಶ ನಿಷೇಧಿಸಲಾಗಿದೆ. ಈ ಬೆನ್ನಲ್ಲೇ ಕರ್ನಾಟಕದಲ್ಲಿ ಹಿಜಾಬ್‌ ವಿವಾದ ಆರಂಭವಾಗಿದೆ. ಸದ್ಯಕ್ಕೆ ರಾಜಕೀಯ ಬಣ್ಣವನ್ನು ಪಡೆದುಕೊಂಡಿದೆ. ಒಂದೆಡೆ ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿದರೆ, ಮತ್ತೊಂದೆಡೆ ವಿದ್ಯಾರ್ಥಿಗಳು ಕೇಸರಿ ಶಲ್ಯ ಧರಿಸುವ ಮೂಲಕ ವಿವಾದ ಮತ್ತಷ್ಟು ತೀವ್ರ ಸ್ವರೂಪವನ್ನು ಪಡೆದಿತ್ತು.

Hijab row: Students of all faiths should follow mandated uniform says Amit Shah

ಸದ್ಯ ಈ ಪ್ರಕರಣ ಹೈಕೋರ್ಟ್‌ನಲ್ಲಿದ್ದು, ಹೈಕೋರ್ಟ್ ಮಧ್ಯಂತರ ಆದೇಶದಲ್ಲಿ ಶಾಲಾ ಕಾಲೇಜಿನಲ್ಲಿ ಯಾವುದೇ ಧಾರ್ಮಿಕ ವಸ್ತ್ರವನ್ನು ತೊಡುವಂತಿಲ್ಲ ಎಂದು ಹೇಳಿದೆ. ಈ ಹಿಜಾಬ್‌ ವಿವಾದ ವಿಚಾರದಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ, "ಈ ವಿಚಾರದಲ್ಲಿ ರಾಜಕೀಯ ಮಾಡಲು ಯತ್ನಿಸುತ್ತಿರುವ ವಿರೋಧಿಗಳು ಯಶಸ್ವಿಯಾಗುವುದಿಲ್ಲ. ಅವರ ಪ್ರಯತ್ನಗಳು ವಿಫಲವಾಗುತ್ತವೆ," ಎಂದು ತಿಳಿಸಿದರು.

ಹೈಕೋರ್ಟ್‌ನಲ್ಲಿ ಹಿಜಾಬ್‌ ವಿಚಾರಣೆ

ಡಿಸೆಂಬರ್ 2021 ರಲ್ಲಿ ಈ ಕೋಮು ಅಲೆಯು ಪ್ರಾರಂಭವಾಯಿತು. ಉಡುಪಿ ಮಹಿಳಾ ಪಿಯು ಕಾಲೇಜಿನ ಆರು ವಿದ್ಯಾರ್ಥಿಗಳು ವಾರಗಟ್ಟಲೆ ಪ್ರತಿಭಟನೆ ನಡೆಸುವ ಮೂಲಕ ಈ ವಿವಾದ ಆರಂಭವಾಯಿತು. ಕಾಲೇಜಿನಲ್ಲಿ ಈ ಹಿಂದೆ ಎಲ್ಲಾ ಮುಸ್ಲಿಂ ವಿದ್ಯಾರ್ಥಿಗಳು ಕಾಲೇಜು ಆಗಮಿಸಿದ ಬಳಿಕ ಹಿಜಾಬ್‌ ತೆಗೆದು ಸಮವಸ್ತ್ರದಲ್ಲಿ ಇರುತ್ತಿದ್ದರು. ಆದರೆ ಈ ವಿದ್ಯಾರ್ಥಿಗಳು ಹಿಜಾಬ್‌ ಧರಿಸಲು ಅವಕಾಶ ನೀಡಬೇಕು ಎಂದು ಆಗ್ರಹ ಮಾಡಿದರು.

Recommended Video

ಪಂದ್ಯದ ದಿಕ್ಕನ್ನೇ ಬದಲಿಸಿ ಇಶಾನ್ ಕಿಶನ್! | Oneindia kannada

ಹಿಜಾಬ್ ಪ್ರಕರಣ; ಕರ್ನಾಟಕ ಹೈಕೋರ್ಟ್‌ನಲ್ಲಿ ವಿಚಾರಣೆಹಿಜಾಬ್ ಪ್ರಕರಣ; ಕರ್ನಾಟಕ ಹೈಕೋರ್ಟ್‌ನಲ್ಲಿ ವಿಚಾರಣೆ

ಜಿಲ್ಲಾಧಿಕಾರಿ, ಶಿಕ್ಷಣ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಿದ ಬಳಿಕ ಬಾಲಕಿಯರು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಉಡುಪಿಯ ವಿದ್ಯಾರ್ಥಿಗಳ ಅರ್ಜಿ ಮತ್ತು ಇದೇ ವಿಚಾರದಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ಕರ್ನಾಟಕ ಹೈಕೋರ್ಟ್‌ನಲ್ಲಿ ಮುಂದುವರಿದಿದೆ. ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ತಿ ನೇತೃತ್ವದ ವಿಶೇಷ ಪೀಠದಲ್ಲಿ ಒಂದು ವಾರದಿಂದ ವಿಚಾರಣೆ ನಡೆಯುತ್ತಿದೆ. ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್, ನ್ಯಾಯಮೂರ್ತಿ ಖಾಜಿ ಜೈಬುನ್ನಿಸಾ ಮೊಹಿದ್ದೀನ್ ಅವರು ಸಹ ಪೀಠದಲ್ಲಿದ್ದಾರೆ. (ಒನ್‌ಇಂಡಿಯಾ ಸುದ್ದಿ)

English summary
Karnataka Hijab row: Students of all faiths should follow mandated uniform says Amit Shah.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X