ಹೈಜಾಕ್ ಬೆದರಿಕೆ, ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್
ಮುಂಬೈ, ಚೆನ್ನೈ ಮತ್ತು ಹೈದರಾಬಾದ್ ಏರ್ಪೋರ್ಟ್ ಗಳಲ್ಲಿ ವಿಮಾನ ಹೈಜಾಕ್ ಮಾಡಲಾಗುವುದು ಎಂದು ಬೆದರಿಕೆ ಬಂದಿದ್ದರಿಂದ ಈ ನಿಲ್ದಾಣಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಮುಂಬೈ, ಏಪ್ರಿಲ್ 16: ವಿಮಾನ ಹೈಜಾಕ್ ಮಾಡುವುದಾಗಿ ಬೆದರಿಕೆ ಇ-ಮೇಲ್ ಬಂದ ಹಿನ್ನಲೆಯಲ್ಲಿ ದೇಶದ ಪ್ರಮುಖ ಮೂರು ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಪ್ರಮುಖವಾಗಿ ಮುಂಬೈ, ಚೆನ್ನೈ ಮತ್ತು ಹೈದರಾಬಾದ್ ಏರ್ಪೋರ್ಟ್ ಗಳಲ್ಲಿ ವಿಮಾನ ಹೈಜಾಕ್ ಮಾಡಲಾಗುವುದು ಎಂದು ಬೆದರಿಕೆ ಬಂದಿದ್ದರಿಂದ ಈ ನಿಲ್ದಾಣಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

"ಸುಮಾರು 23 ಜನರ ತಂಡವೊಂದು ವಿವಿಧ ಏರ್ಪೋರ್ಟ್ ಗಳಿಂದ ವಿಮಾನಗಳನ್ನು ಅಪಹರಣ ನಡೆಸಲಿದೆ," ಎಂದು ಹೈದರಾಬಾದ್ ಮಹಿಳೆಯಿಂದ ಮುಂಬೈ ಪೊಲೀಸರಿಗೆ ಇ-ಮೇಲ್ ಬಂದಿತ್ತು. ಇದಾದ ಬೆನ್ನಿಗೆ ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಈ ಇ-ಮೇಲ್ ನಲ್ಲಿ ಮಹಿಳೆಯು, "ಆರು ಜನ ವಿಮಾನ ಹೈಜಾಕ್ ಮಾಡುವ ಕುರಿತು ಚರ್ಚಿಸುತ್ತಿದ್ದರು," ಎಂದು ಉಲ್ಲೇಖಿಸಿದ್ದಾರೆ. ಮುಂಬೈ ಪೊಲೀಸರು ಈ ಇ-ಮೇಲನ್ನು ಗುಪ್ತಚರ ಇಲಾಖೆ ಸೇರಿದಂತೆ ಏರ್ಪೋರ್ಟ್ ಗಳಿಗೆ ರವಾನಿಸಿದ್ದಾರೆ. ಇನ್ನು ಪೊಲೀಸರು ಇ-ಮೇಲ್ ಸತ್ಯಾಸತ್ಯತೆಗಳ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಮೂರು ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದರೆ, ಬೆಂಗಳೂರು ಸೇರಿದಂತೆ ದೇಶದ ಇತರ ವಿಮಾನ ನಿಲ್ದಾಣಗಳಲ್ಲಿಯೂ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಬೆದರಿಕೆ ಹಿನ್ನಲೆಯಲ್ಲಿ ವಿಶೇಷ ವಿಮಾನ ನಿಲ್ದಾಣ ಭದ್ರತಾ ಸಮಿತಿ ಸಭೆಯನ್ನು ನಿನ್ನೆ ರಾತ್ರಿ ಆಯಾ ವಿಮಾನ ನಿಲ್ದಾಣಗಳಲ್ಲಿ ನಡೆಸಲಾಗಿದೆ. ಈ ಸಮಿತಿಯು ಭದ್ರತೆ ನಿರ್ವಹಿಸುವ ಸಿಬ್ಬಂದಿಗಳಿಗೆ ಮೈಯೆಲ್ಲಾ ಕಣ್ಣಾಗಿರುವಂತೆ ಸೂಚನೆ ನೀಡಿದೆ.
ಪ್ರಯಾಣಿಕರನ್ನು ಸಂಪುರ್ಣ ಪರಿಶೀಲನೆ ಮಾಡಿ. ಕೊನೆಯ ಕ್ಷಣದಲ್ಲಿ ಚೆಕ್ ಇನ್ ಗೊಂದಲಗಳನ್ನು ತಪ್ಪಿಸಿ. ಏರ್ಪೋರ್ಟ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅನುಮಾನಾಸ್ಪದ ವ್ಯಕ್ತಿಗಳ ಮೇಲೆ ನಿಗಾ ಇರಿಸಿ ಎಂದು ಕಟ್ಟಪ್ಪಣೆ ಹೊರಡಿಸಲಾಗಿದೆ.
ಜತೆಗೆ ಶ್ವಾನದಳ, ಕ್ಷಿಪ್ರ ಕಾರ್ಯಾಚರಣೆ ಪಡೆಗಳನ್ನೂ ಏರ್ಪೋರ್ಟಿಗೆ ಕಳುಹಿಸಿಕೊಡಲಾಗಿದೆ. "ಚೆನ್ನೈ, ಮುಂಬೈ, ಹೈದರಾಬಾದ್ ವಿಮಾನ ನಿಲ್ದಾಣಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಭದ್ರತೆಗೆ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಲಾಗಿದೆ ," ಎಂದು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‍ಎಫ್) ಮಹಾ ನಿರ್ದೇಶಕ ಒ.ಪಿ.ಸಿಂಗ್ ತಿಳಿಸಿದ್ದಾರೆ.
ಹೀಗಿದ್ದೂ, "ಯಾರೂ ಗಾಬರಿಯಾಗುವ ಅಗತ್ಯವಿಲ್ಲ. ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗದಂತೆ ಭದ್ರತೆ ವ್ಯವಸ್ಥೆ ಮಾಡಲಾಗಿದೆ. ಯಾರೂ ಚಿಂತಿಸುವ ಅಗತ್ಯವಿಲ್ಲ," ಎಂದು ಹಿರಿಯ ವಿಮಾನ ನಿಲ್ದಾಣದ ಭದ್ರತಾ ಅಧಿಕಾರಿ ಹೇಳಿದ್ದಾರೆ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications