Himachal Pradesh Election Result 2022 : ಮತ್ತೆ ಗದ್ದುಗೆ ಹಿಡಿಯಲು ಬಿಜೆಪಿ ಪ್ಲಾನ್
ಶಿಮ್ಲಾ, ಡಿಸೆಂಬರ್, 08: ಹಿಮಾಚಲ ಪ್ರದೇಶ ವಿಧಾನಸಭೆಗಳ ಚುನಾವಣಾ ಫಲಿತಾಂಶ ಮತ ಎಣಿಕೆ ಆರಭವಾಗಿದೆ. ರಾಜ್ಯದಲ್ಲಿ ಬಿಜೆಪಿ, ಕಾಂಗ್ರೆಸ್‌ನ ಪೈಪೋಟಿ ಜೋರಾಗಿದ್ದು, ಆಡಳಿತರೂಢ ಬಿಜೆಪಿ ಪಕ್ಷ ಈ ಬಾರಿಯೂ ಗೆಲುವು ಸಾಧಿಸಿ ಹೊಸ ದಾಖಲೆಗಳ ನಿರ್ಮಿಸಲು ಎದುರು ನೋಡುತ್ತಿದೆ.
68 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 12ರಂದು ಒಂದೇ ಹಂತದಲ್ಲಿ ಮತದಾನ ನಡೆದಿತ್ತು. ಆಗಿನಿಂದ ಬಿಜೆಪಿ, ಕಾಂಗ್ರೆಸ್ ಪಕ್ಷಗಳು ನಡುವೆ ಯಾವ ರೀತಿ ಕ್ಷೇತ್ರಗಳನ್ನು ತಮ್ಮ ತೆಕ್ಕೆಗೆ ಹಾಕಿಕೊಳ್ಳಲಿವೆ ಎನ್ನುವ ಮಾತುಗಳು ಕೇಳಿಬರುತ್ತಿದ್ದವು. ಇದೀಗ ಅದಕ್ಕೆಲ್ಲ ಇಂದಿನ ಮತ ಎಣಿಕೆಯಿಂದ ಉತ್ತರ ಸಿಗಲಿದೆ. ಸಮೀಕ್ಷೆಗಳ ಪ್ರಕಾರ ಆಡಳಿ ಕ್ಷದ ಬಿಜೆಪಿ ರಾಜ್ಯದಲ್ಲಿ ಮತ್ತೆ ಚುಕ್ಕಾಣಿ ಹಿಡಿಯುವ ಉತ್ಸಾಹದಲ್ಲಿದ್ದು, ಹೊಸ ಇತಿಹಾಸ ಸೃಷ್ಟಿಸುವ ಉತ್ಸಾಹದಲ್ಲಿದೆ. ಹಿಮಾಚಲ ಪ್ರದೇಶದಲ್ಲಿ 1985ರ ನಂತರ ಯಾವುದೇ ಪಕ್ಷ ಸತತವಾಗಿ 2 ಬಾರಿ ಅಧಿಕಾರಕ್ಕೆ ಬಂದಿಲ್ಲ. ಆದರೆ ಆ ಬಾರಿ ಆಡಳಿತ ಪಕ್ಷ ಬಿಜೆಪಿ ಮತ್ತೆ ಅಧಿಕಾರ ಹಿಡಿದರೆ ಮತ್ತೊಂದು ದಾಖಲೆ ಸೃಷ್ಟಿಸಲಿದೆ.
ಹಿಮಾಚಲ ಪ್ರದೇಶದಲ್ಲಿ ಮತದಾನದ ವಿವರ
ಹಿಮಾಚಲ ಪ್ರದೇಶದಲ್ಲಿ ಒಟ್ಟು ಶೇಕಡಾ 76.44ರಷ್ಟು ಮತದಾನ ನಡೆದಿದೆ. 68 ಸ್ಥಾನ ಹೊಂದಿರುವ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ 24-41, ಕಾಂಗ್ರೆಸ್ 20-40 ಸ್ಥಾನ ಗೆಲ್ಲಬಹುದು ಎಂದು ಚುನಾವಣಾ ಸಮೀಕ್ಷೆಗಳಿಂದ ತಿಳಿದಿದೆ. ಮತ್ತೊಂದೆಡೆ ಇನ್ನು ಕೆಲ ಸಮೀಕ್ಷೆಗಳು ಸ್ಪಷ್ಟ ಬಹುಮತದ ಸಾಧಿಸಲಾಗದೇ ಅತಂತ್ರ ಸ್ಥಿತಿ ನಿರ್ಮಾಣ ಆಗುವ ಸಾಧ್ಯತೆ ಇದೆ ಎಂದು ತಿಳಿಸಿವೆ.
Recommended Video

ಗುಜರಾತ್‌ನಲ್ಲಿ ಡಿಸೆಂಬರ್ 1 ಹಾಗೂ 5 ರಂದು ಎರಡು ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆದಿತ್ತು. ಇದರಲ್ಲಿ ಒಟ್ಟು ಶೇಕಡಾ 66.31ರಷ್ಟು ಮತ ಚಲಾವಣೆ ಆಗಿದೆ ಎನ್ನುವ ಮಾಹಿತಿ ಹೊರಬಿದ್ದಿತ್ತು. ಗುಜರಾತ್‌ನಲ್ಲಿ ಬಿಜೆಪಿ, ಕಾಂಗ್ರೆಸ್‌ಗೆ ಪೈಪೋಟಿ ನೀಡಲು ಇದೇ ಮೊದಲ ಬಾರಿಗೆ ಎಎಪಿ ಪಕ್ಷವು ಕಣಕ್ಕಿಳಿದಿತ್ತು. ಆದರೆ ರಾಜ್ಯದಲ್ಲಿ ತ್ರಿಕೋನ ಸ್ಪರ್ಧೆ ಹೊರತಾಗಿಯೂ ಬಿಜೆಪಿ 117-151 ಸೀಟುಗಳನ್ನು ಗೆಲ್ಲುವ ಸಾಧ್ಯತೆಗಳಿವೆ. ಕಾಂಗ್ರೆಸ್ 16-51 ಇನ್ನು ಎಎಪಿ 2-13 ಸೀಟುಗಳನ್ನು ಗಳಿಸಲಿದೆ ಎಂದು ಸಮೀಕ್ಷೆಗಳಿಂದ ತಳಿದುಬಂದಿದೆ.

ವಿಶೇಷ ವೀಕ್ಷಕರ ನೇಮಕ
ಎರಡು ವಿಧಾನಸಭೆಗಳು ಹಾಗೂ ಏಳು ಉಪಚುನಾವಣೆಗಳ ಮತ ಎಣಿಕೆಗೆ ಸಂಬಂಧಿಸಿದಂತೆ ಒಟ್ಟಾರೆ 116 ಮತ ಎಣಿಕೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ ಒಬ್ಬ ಮತ ಎಣಿಕೆ ವೀಕ್ಷಕರನ್ನು ನಿಯೋಜಿಸಲಾಗಿದೆ. ಅದರಲ್ಲೂ ಹಿಮಾಚಲ ಪ್ರದೇಶ ಮತ್ತು ಗುಜರಾತ್‌ನಲ್ಲಿ ತಲಾ ಇಬ್ಬರು ವಿಶೇಷ ವೀಕ್ಷಕರನ್ನು ನೇಮಿಸಲಾಗಿದೆ.












Click it and Unblock the Notifications