ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Himachal Pradesh: ಸಿಎಂ ರೇಸ್‌ನಿಂದ ಹೊರಗುಳಿದ ಪ್ರತಿಭಾ ಸಿಂಗ್

|
Google Oneindia Kannada News

ಶಿಮ್ಲಾ, ಡಿಸೆಂಬರ್‌ 10: ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಪಟ್ಟಾಭಿಷೇಕಕ್ಕೆ ಹೊಸ ತಿರುವು ಸಿಕ್ಕಿದೆ. ರಾಜ್ಯ ಕಾಂಗ್ರೆಸ್ ಅಧ್ಯಕ್ಷೆ ಪ್ರತಿಭಾ ಸಿಂಗ್ ಅವರು ಮುಖ್ಯಮಂತ್ರಿ ರೇಸ್‌ನಿಂದ ಹೊರಗುಳಿದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಿನ್ನೆ ನಡೆದ ಕಾಂಗ್ರೆಸ್‌ ಸಭೆಗೂ ಮುನ್ನ ಪ್ರತಿಭಾ ಸಿಂಗ್‌ ತಮ್ಮ ಬೇಡಿಕೆಯನ್ನು ಮುಂದಿಟ್ಟಿದ್ದರು.

'ಮಾಜಿ ಸಿಎಂ ವೀರಭದ್ರ ಸಿಂಗ್‌ ಅವರ ಹೆಸರನ್ನು ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳಲಾಗಿದೆ. ಆ ಹಿನ್ನೆಲೆಯಲ್ಲಿ ವೀರಭದ್ರ ಸಿಂಗ್‌ ಕುಟುಂಬವನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ' ಎಂದು ಪ್ರತಿಭಾ ಸಿಂಗ್‌ ಹೇಳಿದ್ದರು.

'ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರು ನನಗೆ ದೊಡ್ಡ ಜವಾಬ್ದಾರಿಗಳನ್ನು ನೀಡಿದ್ದಾರೆ. ಅವರು ನನ್ನನ್ನು ಪಕ್ಷದ ರಾಜ್ಯಾಧ್ಯಕ್ಷಳನ್ನಾಗಿ ಆಯ್ಕೆ ಮಾಡಿದ್ದಾರೆ. ಆ ನಂತರ ರಾಜ್ಯದ ಎಲ್ಲಾ 68 ಕ್ಷೇತ್ರಗಳಿಗೆ ಭೇಟಿ ನೀಡಿದ್ದೇನೆ. ರಾಜ್ಯದಲ್ಲಿ ಪಕ್ಷ ಗೆಲ್ಲುವುದು ಖಚಿತವೆಂದು ನನಗೆ ತಿಳಿದಿತ್ತು. ನಾನು ನನ್ನ ಕೆಲಸವನ್ನು ಅತ್ಯಂತ ಪ್ರಾಮಾಣಿಕತೆಯಿಂದ ಮಾಡಿದ್ದೇನೆ. ಅದರ ಫಲಿತಾಂಶ ಇಂದು ನಮ್ಮೆಲ್ಲರ ಮುಂದಿದೆ' ಎಂದು ತಿಳಿಸಿದ್ದರು.

Himachal Congress Chief Pratibha Singh Out Of Chief Minister Race

ಆದರೆ, ಈಗ ಪ್ರತಿಭಾ ಸಿಂಗ್ ಅವರೇ ಸಿಎಂ ರೇಸ್‌ನಿಂದ ಹೊರಗುಳಿದಿರುವುದು ಅಚ್ಚರಿಗೆ ಕಾರಣವಾಗಿದೆ. ಅವರು ಹೊಸದಾಗಿ ಆಯ್ಕೆಯಾಗಿರುವ ನಲವತ್ತು ಶಾಸಕರ ಬೆಂಬಲವನ್ನು ಹೊಂದಿಲ್ಲವೆಂದು ಹೇಳಲಾಗುತ್ತಿದೆ. ಅದಕ್ಕಾಗಿಯೇ ಅವರನ್ನು ಸ್ಪರ್ಧೆಯಿಂದ ಕೈಬಿಡಲಾಗಿದೆ ಎಂದು ಮೂಲಗಳು ತಿಳಿಸಿವೆ.

25 ಕ್ಕೂ ಹೆಚ್ಚು ಶಾಸಕರ ಬೆಂಬಲವನ್ನು ಹೊಂದಿರುವ ಮಾಜಿ ರಾಜ್ಯ ಮುಖ್ಯಸ್ಥ ಸುಖ್ವಿಂದರ್ ಸಿಂಗ್ ಸುಖು ಈಗ ಮುಖ್ಯಮಂತ್ರಿ ಹುದ್ದೆಗೆ ನೆಚ್ಚಿನವರಾಗಿದ್ದಾರೆ. ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಮುಖೇಶ್ ಅಗ್ನಿಹೋತ್ರಿ ಕೂಡ ರೇಸ್‌ನಲ್ಲಿದ್ದಾರೆ.

Himachal Congress Chief Pratibha Singh Out Of Chief Minister Race

ಹಮೀರ್‌ಪುರ ಜಿಲ್ಲೆಯ ನಾದೌನ್‌ನಿಂದ ಮೂರನೇ ಬಾರಿ ಶಾಸಕರಾದ ಸುಖವಿಂದರ್ ಸಿಂಗ್ ಸುಖು ಅವರು ವೃತ್ತಿಯಿಂದ ವಕೀಲರಾಗಿದ್ದಾರೆ. ಕಾಂಗ್ರೆಸ್‌ ಸ್ಟೂಡೆಂಟ್‌ ವಿಂಗ್ ಅನ್ನು ಅವರು ಮುನ್ನಡೆಸಿದ್ದರು.

ಎರಡು ದಶಕಗಳ ಹಿಂದೆ ಪತ್ರಿಕೋದ್ಯಮದಿಂದ ರಾಜಕೀಯಕ್ಕೆ ಕಾಲಿಟ್ಟ ನಂತರ ಮುಖೇಶ್ ಅಗ್ನಿಹೋತ್ರಿ ಅವರು ತಮ್ಮ ಐದನೇ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿದ್ದಾರೆ.

English summary
Himachal Pradesh Chief Minister's coronation has got a new twist. State Congress president Pratibha Singh has dropped out of the chief ministerial race, sources said,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X