ಹಿಮಾಚಲ ಪ್ರದೇಶದಲ್ಲಿ ಭೂಕುಸಿತ: ಮೃತರ ಸಂಖ್ಯೆ 13ಕ್ಕೆ ಏರಿಕೆ, ಕಾರು ಇನ್ನೂ ನಾಪತ್ತೆ

ಶಿಮ್ಲಾ, ಆಗಸ್ಟ್ 12: ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಸಂಭವಿಸಿದ ಭಾರ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಆದರೆ ಇದುವರೆಗೂ ಕಾರು ಪತ್ತೆಯಾಗಿಲ್ಲ.

ಇನ್ನೂ ಮಣ್ಣಿನ ಅಡಿಯಲ್ಲಿ ಹಲವರು ಸಿಕ್ಕಿಹಾಕಿಕೊಂಡಿದ್ದು ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ. ಪ್ರಧಾನಿ ಪರಿಹಾರ ಘೋಷಣೆ: ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತ ನಿಜಕ್ಕೂ ದುಃಖಕರ ಸಂಗತಿ, ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ನನ್ನ ಸಂತಾಪ.

ಗಾಯಗೊಂಡವರು ಶೀಘ್ರವೇ ಗುಣಮುಖರಾಗಲಿ ಎಂದು ಆಶಿಸಿರುವ ಪ್ರಧಾನಿ ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರ ಕುಟುಂಬಕ್ಕೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

Himachal Landslide Toll Rises To 13 As Rescue Ops Resume, Passengers Of Bus

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್ ಡಿಆರ್ ಎಫ್) ಸ್ಥಳದಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ಕಾರ್ಯಾಚರಣೆಯಲ್ಲಿ 13 ಮಂದಿಯನ್ನು ರಕ್ಷಿಸಲಾಗಿದೆ. ಒಂದು ಬಸ್ಸು ಅವಶೇಷಗಳಡಿಯಲ್ಲಿ ಪತ್ತೆಯಾಗಿದ್ದು ಓರ್ವನ ಶವ ಹೊರತೆಗೆಯಲಾಗಿದೆ. ಬೊಲೆರೊ ಮತ್ತು ಅದರಲ್ಲಿದ್ದ ಪ್ರಯಾಣಿಕರು ಇನ್ನೂ ಅವಶೇಷಗಳಡಿಯಲ್ಲಿ ಪತ್ತೆಯಾಗಿಲ್ಲ ಎಂದು ಐಟಿಬಿಪಿ ಉಪ ಕಮಾಂಡರ್ ಧರ್ಮೇಂದ್ರ ಠಾಕೂರ್ ತಿಳಿಸಿದ್ದಾರೆ.

ಬಸ್ ನಲ್ಲಿ 30 ಮಂದಿ ಪ್ರಯಾಣಿಕರು ಇದ್ದರು ಎಂದು ಹೇಳಲಾಗಿದ್ದು, ಬಸ್ ಸಂಪೂರ್ಣ ಹಾನಿಯಾಗಿದ್ದು, ಸಂಪೂರ್ಣ ಮಣ್ಣಿನಿಂದ ಮುಚ್ಚಿಕೊಂಡಿದೆ. ಘಟನಾ ಸ್ಥಳಕ್ಕೆ ಸುಮಾರು 200 ಭದ್ರತಾ ಸಿಬ್ಬಂದಿ ರಕ್ಷಣೆಗೆ ಧಾವಿಸಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಉಪ ಆಯುಕ್ತ ಅಬಿದ್ ಹುಸೇನ್ ಸಾದಿಕ್ ಅವರು ಮಾಹಿತಿ ನೀಡಿದ್ದು, ಬಸ್ ಕಿನ್ನೌರಿನ ರೆಕಾಂಗ್ ಪಿಯೊದಿಂದ ಶಿಮ್ಲಾಕ್ಕೆ ಹೋಗುತ್ತಿತ್ತು ಎಂದು ಅವರು ಹೇಳಿದ್ದಾರೆ.

ಸ್ಥಳಕ್ಕೆ ಸೇನೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್ ಡಿಆರ್ ಎಫ್) ಮತ್ತು ಸ್ಥಳೀಯ ರಕ್ಷಣಾ ತಂಡಗಳು ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಕಿನ್ನೌರ್ ಉಪ ಆಯುಕ್ತರು ತಿಳಿಸಿದ್ದಾರೆ.

40ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಹಿಮಾಚಲ ರಸ್ತೆ ಸಾರಿಗೆ ಸಂಸ್ಥೆಯ(ಎಚ್‌ಆರ್‌ಟಿಸಿ) ಬಸ್ ಸೇರಿದಂತೆ ಹಲವು ವಾಹನಗಳು ಅವಶೇಷಗಳ ಅಡಿಯಲ್ಲಿ ಸಿಲುಕಿವೆ ಎಂದು ಸಾದಿಕ್ ಹೇಳಿದ್ದಾರೆ.

ಮಧ್ಯಾಹ್ನ 12.45ರ ಸುಮಾರಿಗೆ ಭೂ ಕುಸಿತ ಸಂಭವಿಸಿದೆ. ಕಿಣ್ಣಾವುರ್ ಜಿಲ್ಲಾಧಿಕಾರಿ ಅಬಿದ್ ಹುಸೇನ್ ಸಾದಿಖ್ ಸ್ಥಳಕ್ಕೆ ಭೇಟಿ ನೀಡಿ, ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ ನಡೆಸಿದ್ದಾರೆ.
ರಸ್ತೆಯಲ್ಲಿ ಹಿಮಾಚಲ ಪ್ರದೇಶದ ಸಾರಿಗೆ ಬಸ್ ಸಂಚರಿಸುತ್ತಿದ್ದಾಗಲೇ ಭೂಕುಸಿತ ಉಂಟಾಗಿದ್ದು, ಬಸ್​ ಹಾಗೂ ಅದರ ಹಿಂದೆ ಮುಂದೆ ಬರುತ್ತಿದ್ದ ಕೆಲವು ವಾಹನಗಳು ಕೂಡ ಮಣ್ಣಿನಡಿ ಮುಚ್ಚಿಹೋಗಿವೆ. ಆ ಬಸ್​ನಲ್ಲಿದ್ದ 40ಕ್ಕೂ ಹೆಚ್ಚು ಜನರು ಮಣ್ಣಿನಡಿ ಸಿಲುಕಿದ್ದಾರೆ.

ಹೆಚ್​ಆರ್​ಸಿಟಿಸಿ ಸಾರಿಗೆ ಬಸ್, ಟ್ರಕ್, ಕಾರುಗಳು ಭೂಕುಸಿತದಿಂದ ಮಣ್ಣಿನಡಿ ಮುಚ್ಚಿಹೋಗಿವೆ. ರೆಕಾಂಗ್ ಪಿಯೋ- ಶಿಮ್ಲಾ ಹೆದ್ದಾರಿ ಬಂದ್ ಆಗಿದ್ದು, ಎನ್​ಡಿಆರ್​ಎಫ್​ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಕೆಲವು ದಿನಗಳ ಹಿಂದೆ ಹಿಮಾಚಲ ಪ್ರದೇಶದ ಸಿರ್​ಮೌರ್ ಜಿಲ್ಲೆಯ ಶಿಲಾಯ್​ ಪ್ರದೇಶದ ಕಲಿ ಖಾನ್ ಏರಿಯಾದಲ್ಲಿ ಇದೇ ರೀತಿಯ ಭಾರೀ ಭೂಕುಸಿತವಾಗಿತ್ತು. ಭೂಕುಸಿತದಿಂದ ಹೈವೇಯಲ್ಲಿ 100 ಮೀಟರ್ ಅಗಲದ ಕಂದಕ ಉಂಟಾಗಿತ್ತು.

ರಾಷ್ಟ್ರೀಯ ಹೆದ್ದಾರಿ 707ರಲ್ಲಿ ಭೂ ಕುಸಿತ ಉಂಟಾಗಿ ಇಡೀ ರಸ್ತೆಯೇ ಕುಸಿದು ಬಿದ್ದ ವಿಡಿಯೋ ಭಾರೀ ವೈರಲ್ ಆಗಿತ್ತು. ಹಾಗೇ, ಇಲ್ಲಿನ ಉದಯ್​ಪುರದಲ್ಲೂ ಭೂಕುಸಿತವಾಗಿ, ಲಾಹೂಲಾಲ್ ಮತ್ತು ಸ್ಪಿತಿ ಜಿಲ್ಲೆಗಳಲ್ಲಿ ಪ್ರವಾಸಕ್ಕೆ ಬಂದಿದ್ದ 175 ಪ್ರವಾಸಿಗರು ಉದಯ್​ಪುರದಲ್ಲಿ ಸಿಲುಕಿಕೊಂಡಿದ್ದರು.

17,19,43ನೇ ಬೆಟಾಲಿಯನ್‌ನ ಐಟಿಬಿಪಿ ಸಿಬ್ಬಂದಿ ರಿಕಾಂಗ್ ಪಿಓ-ಶಿಮ್ಲಾ ಹೆದ್ದಾರಿ ತಲುಪಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಕಲ್ಲುಗಳು ಇನ್ನೂ ಕೂಡ ಜಾರಿ ಬೀಳುತ್ತಿದ್ದು, ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಭಾರತೀಯ ಸೇನೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಹಾಗೂ ಸ್ಥಳೀಯ ರಕ್ಷಣಾ ತಂಡಗಳನ್ನು ಸ್ಥಳಕ್ಕೆ ಬರುವಂತೆ ಕೋರಲಾಗಿದೆ.

ಕಿನ್ನೌರ್‌ನ ಭೂಕುಸಿತದಿಂದ ಎದುರಾದ ಪರಿಸ್ಥಿತಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.

ರಕ್ಷಣಾ ಕಾರ್ಯಾಚರಣೆಗೆ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ ತಿಳಿಸಿದೆ.

ಭೂಕುಸಿತ ಉಂಟಾಗಿರುವ ಸ್ಥಳಗಳಲ್ಲಿ ಮಣ್ಣಿನಡಿ ಮತ್ತಷ್ಟು ಮಂದಿ ಸಿಲುಕಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ, ಮಣ್ಣಿನ ಅಡಿಯಲ್ಲಿ ಸಿಲುಕಿದ್ದ ಬಸ್ ಚಾಲಕ, ನಿರ್ವಾಹಕ ಸೇರಿದಂತೆ ಹಲವರನ್ನು ರಕ್ಷಿಸಲಾಗಿದೆ.

ಜುಲೈ 26 ರಂದು ಕಿನ್ನೌರ್‌ನಲ್ಲಿ ಭಾರಿ ಮಳೆಯಾಗಿ ಭೂಕುಸಿತ ಸಂಭವಿಸಿತ್ತು, 9 ಮಂದಿ ಮೃತಪಟ್ಟಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+