ಹಿಮಾಚಲ ಪ್ರದೇಶ: ವಿದೇಶಿಗರು ಸೇರಿ 16 ಮಂದಿ ಚಾರಣಿಗರು ನಾಪತ್ತೆ
ಚಂಬಾ (ಹಿಮಾಚಲ ಪ್ರದೇಶ), ಸೆಪ್ಟೆಂಬರ್ 29: ಹಿಮಾಚಲ ಪ್ರದೇಶದ ಚಂಬಾದಲ್ಲಿ 10 ವಿದೇಶಿ ಪ್ರವಾಸಿಗರೂ ಸೇರಿದಂತೆ ಚಾರಣಕ್ಕೆ ತೆರಳಿದ್ದ 16 ಮಂದಿ ಶನಿವಾರ ನಾಪತ್ತೆಯಾಗಿದ್ದಾರೆ.
ಪ್ರತಿಕೂಲ ಹವಾಮಾನದ ಕಾರಣದಿಂದಾಗಿ ಚಾರಣಿಗರ ಜತೆ ಯಾವುದೇ ಸಂಪರ್ಕ ಸಾಧಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಪೊಲೀಸರು, ಸ್ಥಳೀಯರು ಮತ್ತು ಪರ್ವತಾರೋಹಣ ಪರಿಣತರನ್ನು ಒಳಗೊಂಡ ತಂಡವೊಂದು ಅವರ ಪತ್ತೆಗೆ ತೀವ್ರ ಹುಡುಕಾಟ ನಡೆಸಿದೆ ಎಂದು ಜಿಲ್ಲಾ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಈ ವಾರದ ಆರಂಭದಲ್ಲಿ ಹಿಮಾಚ್ಛಾದಿತ ಪರ್ವತ ಶ್ರೇಣಿಯಲ್ಲಿನ ಸಿಲುಕಿದ್ದ ಐಐಟಿ-ರೂರ್ಕಿಯ 45 ವಿದ್ಯಾರ್ಥಿಗಳು, ಐವರು ಭಾರತ ಮೂಲದ ಅಮೆರಿಕ ನಾಗರಿಕರು ಮತ್ತು ಇಬ್ಬರು ಜರ್ಮನ್ ಚಾರಣಿಗರನ್ನು ಜಿಲ್ಲಾಡಳಿತ ಮತ್ತು ಗಡಿ ಪ್ರದೇಶಗಳ ರಸ್ತೆ ನಿರ್ವಹಣಾ ಸಂಸ್ಥೆ (ಬಿಆರ್‌ಒ) ಜಂಟಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದವು.

ಮನಾಲಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಭೂ ಕುಸಿತ ಮತ್ತು ಭಾರಿ ಹಿಮಪಾತದ ಕಾರಣದಿಂದ ಕಡಿತಗೊಂಡಿದ್ದರಿಂದ ಅವರ ಲಾಹೌಲ್ ಕಣಿವೆಯಲ್ಲಿ ಸಿಲುಕಿಕೊಂಡಿದ್ದರು.
16 trekkers including 10 foreign nationals have lost contact due to bad weather conditions in Chamba district. A team of policemen, local porters & mountaineering experts are conducting a search operation to locate them: SP Chamba, Himachal Pradesh
— ANI (@ANI) 29 September 2018
ರಾಜ್ಯದಲ್ಲಿ ಸೆಪ್ಟೆಂಬರ್ ತಿಂಗಳ ಮಧ್ಯಭಾಗದಿಂದಲೂ ವಿಪರೀತ ಮಳೆ ಮತ್ತು ಹಿಮಪಾತ ಸಂಭವಿಸುತ್ತಿದೆ. ತೀರಾ ಒಳಭಾಗದಲ್ಲಿರುವ ಪ್ರದೇಶಗಳಲ್ಲಿ ಐಎಎಫ್ ಮತ್ತು ಬಿಆರ್‌ಒ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಹೆಲಿಕಾಪ್ಟರ್ ಮೂಲಕ ಆಹಾರ ಸರಬರಾಜು ಮಾಡಲಾಗುತ್ತಿದೆ.
#HimachalPradesh: 6 bikers, 20 tourists who were stranded due to heavy snowfall, rescued by @IAF_MCC from locations near #RohtangPass as efforts continue on the 5th day pic.twitter.com/bgf3V3N8x2
— Doordarshan News (@DDNewsLive) 28 September 2018
ಹಾನಿಗೊಳಗಾಗಿದ್ದ ಮತ್ತು ಮುಚ್ಚಿಹೋಗಿದ್ದ ರಸ್ತೆಗಳನ್ನು ದುರಸ್ತಿಪಡಿಸಲಾಗುತ್ತಿದ್ದು, ಸುಮಾರು 600 ರಸ್ತೆಗಳು ಸಂಚಾರಕ್ಕೆ ಮುಕ್ತಗೊಂಡಿವೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಅಧಿಕಾರಿಗಳು ತಿಳಿಸಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications