ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Himachal Pradesh Election Results 2022 : ಪಕ್ಷ ವಿರೋಧಿ ಚಟುವಟಿಕೆ: ಕಾಂಗ್ರೆಸ್‌ನಿಂದ 30 ಪದಾಧಿಕಾರಿಗಳ ಉಚ್ಚಾಟನೆ

|
Google Oneindia Kannada News

ಶಿಮ್ಲಾ, ಡಿಸೆಂಬರ್‌, 08: ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಯ ಮತ ಎಣಿಕೆಯ ಮುನ್ನವೇ ಕಾಂಗ್ರೆಸ್‌ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಆಘಾತವಾಗಿದೆ. ಪಕ್ಷ ವಿರೋಧಿ ಚಟುವಟಿಕೆಯ ಕಾರಣದಿಂದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ 30 ಪದಾಧಿಕಾರಿಗಳನ್ನು ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಿದೆ.

ಪಕ್ಷದಿಂದ ಹೊರಹಾಕಲ್ಪಟ್ಟವರಲ್ಲಿ ಪಕ್ಷದ ಶಿಮ್ಲಾ ಜಿಲ್ಲಾ ಸಮಿತಿಯ ಉಪಾಧ್ಯಕ್ಷರು ಮತ್ತು ಮಾಜಿ ಉಪಾಧ್ಯಕ್ಷರು ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಸೇರಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬ್ಲಾಕ್ ಕಮಿಟಿ ಅಂಗೀಕರಿಸಿದ ನಿರ್ಣಯದ ಮೇರೆಗೆ ರಾಜ್ಯ ಕಾಂಗ್ರೆಸ್ ಮುಖ್ಯಸ್ಥೆ ಪ್ರತಿಭಾ ಸಿಂಗ್ ಅವರು ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

Recommended Video

Himachal Pradesh Result 2022: ಸರ್ಕಾರ ರಚನೆ ವೇಳೆ ಪಕ್ಷೇತರರೇ ನಿರ್ಣಾಯಕ ಪಾತ್ರ ವಹಿಸುವ ಸಾಧ್ಯತೆ ಕಂಡುಬರುತ್ತಿದೆ

68 ವಿಧಾನಸಭಾ ಸ್ಥಾನಗಳಿಗೆ ನಡೆದಿದ್ದ ಚುನಾವಣೆ
ಹಿಮಾಚಲ ಪ್ರದೇಶದ 68 ವಿಧಾನಸಭಾ ಸ್ಥಾನಗಳಿಗೆ ನವೆಂಬರ್ 12 ರಂದು ಮತದಾನ ನಡೆದಿದ್ದು, ರಾಜ್ಯದಲ್ಲಿ 75.6 ರಷ್ಟು ಮತದಾನವಾಗಿದೆ. ಈ ಬಾರಿ ಮತದಾನ 2017ರ ದಾಖಲೆಯನ್ನು ಮುರಿದಿದೆ ಎನ್ನುವ ಮಾಹಿತಿ ಹೊರಬಿದ್ದಿದೆ. ಈ ವರ್ಷ ಅಂತಿಮ ಮತದಾನದ ಪ್ರಮಾಣ ಶೇಕಾ 74 ರಷ್ಟಿತ್ತು. ಇದು 2017ರ ಅಂಕಿ ಅಂಶಗಳಿಗಿಂತ ಸ್ವಲ್ಪ ಕಡಿಮೆಯಾಗಿದೆ. ಈ ವರ್ಷ ಡೂನ್ ಕ್ಷೇತ್ರದಲ್ಲಿ ಅತಿ ಹೆಚ್ಚು ಶೇಕಡಾ 85.25 ಮತದಾನವಾಗಿದೆ. ಶಿಮ್ಲಾದಲ್ಲಿ ಅತೀ ಕಡಿಮೆ ಅಂದರೆ 62.53 ರಷ್ಟು ಮತದಾನವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Himachal pradesh assembly election 2022: Congress expels 30 office bearers

ಹಲವು ಮೂಲಗಳಿಂದ ಸಮೀಕ್ಷೆ ವಿವರ
ಹೆಚ್ಚಿನ ಸಮೀಕ್ಷೆಗಳ ಪ್ರಕಾರ ಬಿಜೆಪಿ ಹಿಮಾಚಲ ಪ್ರದೇಶವನ್ನು ತನ್ನ ತೆಕ್ಕೆಗೆ ಹಾಕಿಕೊಳ್ಳುವ ಸಾಧ್ಯತೆಯಿದೆ ಎಂದು ಹೇಳುತ್ತಿವೆ. ಮತ್ತೊಂದಡೆ ಗುಡ್ಡಗಾಡು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸುವ ಸಾಧ್ಯತೆಯಿದೆ ಎಂದು ಹೇಳುತ್ತಿದೆ. ಹೀಗೆ ಹಲವಾರು ದಶಕಗಳಿಂದ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಅಧಿಕಾರಕ್ಕಾಗಿ ಪೈಪೋಟಿಗಳು ನಡೆಯುತ್ತಲೇ ಇರುತ್ತವೆ.

ನವೆಂಬರ್ 12 ರಂದು ಹಿಮಾಚಲ ಪ್ರದೇಶದಲ್ಲಿ ಚುನಾವಣೆ ನಡೆದಿದ್ದು, ರಿಪಬ್ಲಿಕ್ ಎಕ್ಸಿಟ್ ಪೋಲ್ ಪ್ರಕಾರ ಬಿಜೆಪಿ ಶೇಕಡಾ 44.8 ರಷ್ಟು ಮತಗಳನ್ನು ಗಳಿಸಲಿದ್ದು, 34-49 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಇನ್ನು 42.9 ರಷ್ಟು ಮತ ಹಂಚಿಕೆಯೊಂದಿಗೆ ಕಾಂಗ್ರೆಸ್ 28-33 ಸ್ಥಾನಗಳನ್ನು ತೆಕ್ಕೆಗೆ ಹಾಕಿಕೊಳ್ಳಲಿದೆ ಎಂದು ಹೇಳಿದೆ. ಮತ್ತು ಎಎಪಿ 2.8ರಷ್ಟು ಮತ ಹಂಚಿಕೆಯೊಂದಿಗೆ ರಾಜ್ಯದಲ್ಲಿ 0-1 ಸ್ಥಾನವನ್ನು ಪಡೆಯುತ್ತದೆ ಎಂದು ಹೇಳಿದೆ.

Himachal pradesh assembly election 2022: Congress expels 30 office bearers

ಇನ್ನು ಇಂಡಿಯಾ ಟುಡೇ ಸಮೀಕ್ಷೆಯ ಪ್ರಕಾರ- ಗುಡ್ಡಗಾಡು ರಾಜ್ಯದಲ್ಲಿ ಕಾಂಗ್ರೆಸ್ 30-40 ಸ್ಥಾನಗಳನ್ನು ಪಡೆಯಲಿದ್ದು, ಬಿಜೆಪಿ 24-34 ಮತ್ತು ಎಎಪಿ ನಾಲ್ಕರಿಂದ ಎಂಟು ಸ್ಥಾನಗಳನ್ನು ಪಡೆಯಲಿದೆ ಎಂದು ಭವಿಷ್ಯ ನುಡಿದಿದೆ. ಸಮೀಕ್ಷೆಯು ಕಾಂಗ್ರೆಸ್‌ಗೆ ಶೇಕಡಾ 44, ಬಿಜೆಪಿಗೆ ಶೇಕಡಾ 42, ಎಎಪಿಗೆ ಶೇಕಡಾ 2 ಮತ್ತು ಇತರೆ ಶೇಕಡಾ 12 ರಷ್ಟು ಮತ ಹಂಚಿಕೆ ಆಗಲಿದೆ ಎಂದು ಭವಿಷ್ಯ ನುಡಿದಿದೆ. ಟೈಮ್ಸ್ ನೌ ಸಮೀಕ್ಷೆಯ ಪ್ರಕಾರ ಬಿಜೆಪಿಗೆ 34-42, ಕಾಂಗ್ರೆಸ್‌ಗೆ 24-32, ಎಎಪಿಗೆ ಯಾವುದೇ ಸ್ಥಾನ ಇಲ್ಲ. ಮತ್ತು ಇತರೆ 1-3 ಸ್ಥಾನಗಳನ್ನು ಪಡೆಯುತ್ತಾರೆ ಎಂದು ಹೇಳಲಾಗಿದೆ.

English summary
Himachal pradesh assembly election 2022; Ahead of himachal vote counting congress expels 30 office bearers, Congress expels 30 office bearers by Pratibha Singh, know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X