Himachal Pradesh Election Result 2022; ಸಿಎಂ ಜೈರಾಮ್ ಠಾಕೂರ್ ಗೆ 2,200 ಮತಗಳ ಮುನ್ನಡೆ
ನವದೆಹಲಿ, ಡಿಸೆಂಬರ್ 08; ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯ ಮತ ಎಣಿಕೆ ಗುರುವಾರ ನಡೆಯುತ್ತಿದೆ. 68 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 12ರಂದು ಒಂದೇ ಹಂತದಲ್ಲಿ ಮತದಾನ ನಡೆದಿತ್ತು. ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 35.
ಬೆಳಗ್ಗೆ 9.45ರ ಮಾಹಿತಿಯಂತೆ ಬಿಜೆಪಿ 31, ಕಾಂಗ್ರೆಸ್ 34 ಮತ್ತು ಇತರರು 3 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್, ಬಿಜೆಪಿ ನಡುವೆ ನೇರ ಪೈಪೋಟಿ ನಡೆಯುತ್ತಿದ್ದು, ಫಲಿತಾಂಶ ಕುತೂಹಲಕ್ಕೆ ಕಾರಣವಾಗಿದೆ.
Recommended Video
ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಮಂಡಿ ಜಿಲ್ಲೆಯ ಸಿರಾಜ್ ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಸುಮಾರು 2,200 ಮತಗಳ ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ರಾಜ್ಯದಲ್ಲಿ ಅಧಿಕಾರ ಹಿಡಿಯಲು ಬೇಕಾದ ಮ್ಯಾಜಿಕ್ ನಂಬರ್ 35. ಮುನ್ನಡೆಯಲ್ಲಿ ಕಾಂಗ್ರೆಸ್ ಪಕ್ಷ ಮ್ಯಾಜಿಕ್ ನಂಬರ್ ಸನಿಹಕ್ಕೆ ಬಂದಿದೆ. 33 ಜಿಲ್ಲೆಗಳ 37 ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದೆ.
ಅಧಿಕಾರದಲ್ಲಿರುವ ಪಕ್ಷ ಚುನಾವಣೆಯಲ್ಲಿ ಎರಡನೇ ಬಾರಿಗೆ ಗೆಲ್ಲುವುದಿಲ್ಲ ಎಂಬುದು ಹಿಮಾಚಲ ಪ್ರದೇಶದ ನಂಬಿಕೆಯಾಗಿದೆ. ಆದರೆ ಅದನ್ನು ಈ ಬಾರಿಯ ಚುನಾವಣೆಯಲ್ಲಿ ಸುಳ್ಳು ಮಾಡಬೇಕು ಎಂದು ಬಿಜೆಪಿ ಚುನಾವಣಾ ತಂತ್ರವನ್ನು ರೂಪಿಸಿತ್ತು.
ಹಿಮಾಚಲ ಪ್ರದೇಶದಲ್ಲಿ 2017ರ ಚುನಾವಣೆಯಲ್ಲಿ ಬಿಜೆಪಿ 44, ಕಾಂಗ್ರೆಸ್ 21 ಮತ್ತು ಇತರರು 3 ಸ್ಥಾನಗಳಲ್ಲಿ ಜಯಗಳಿಸಿದ್ದರು. ಬಿಜೆಪಿ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿ ಅಧಿಕಾರ ಹಿಡಿದಿತ್ತು.
ರಾಜ್ಯದಲ್ಲಿ 2012ರ ಚುನಾವಣೆಯಲ್ಲಿ ಬಿಜೆಪಿಗೆ ಅಧಿಕಾರ ಸಿಕ್ಕಿರಲಿಲ್ಲ. ಬಿಜೆಪಿಗೆ 26, ಕಾಂಗ್ರೆಸ್‌ಗೆ 36 ಮತ್ತು ಇತರರು 6 ಸ್ಥಾನಗಳಲ್ಲಿ ಜಯಗಳಿಸಿದ್ದರು. ಕಾಂಗ್ರೆಸ್ ಸರ್ಕಾರ ರಚನೆ ಮಾಡಿತ್ತು. ಪ್ರತಿ ಚುನಾವಣೆಯಲ್ಲಿಯೂ ರಾಜ್ಯದಲ್ಲಿ ಒಂದೊಂದು ಪಕ್ಷದ ಅಧಿಕಾರವನ್ನು ಹಿಡಿಯುತ್ತಿದೆ.
ಚುನಾವಣಾ ಆಯೋಗದ ಮಾಹಿತಿ ಪ್ರಕಾರ 31 ಸೀಟುಗಳ ಮುನ್ನಡೆಯಲ್ಲಿ ಬಿಜೆಪಿ ಶೇ 44.3 ಮತ್ತು ಕಾಂಗ್ರೆಸ್ ಶೇ 42.6ರಷ್ಟು ಮತಗಳನ್ನು ಗಳಿಸಿದೆ.












Click it and Unblock the Notifications