HP Result 2022; ಮುನ್ನಡೆಯಲ್ಲಿ ಕಾಂಗ್ರೆಸ್‌ಗೆ ಮ್ಯಾಜಿಕ್ ನಂಬರ್

ನವದೆಹಲಿ, ಡಿಸೆಂಬರ್ 08; ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಪ್ರಾಥಮಿಕ ಮಾಹಿತಿಯಂತೆ ಕಾಂಗ್ರೆಸ್ 36 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಮ್ಯಾಜಿಕ್ ನಂಬರ್ ದಾಟಿದೆ.

ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಮತ ಎಣಿಕೆ ಗುರುವಾರ ಬೆಳಗ್ಗೆ 8 ಗಂಟೆಗೆ ಆರಂಭವಾಗಿದೆ. ರಾಜ್ಯದ 68 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 12ರಂದು ಒಂದೇ ಹಂತದಲ್ಲಿ ಮತದಾನ ನಡೆದಿತ್ತು, ಶೇ 75.6ರಷ್ಟು ಮತದಾನವಾಗಿತ್ತು.

ರಾಜ್ಯದಲ್ಲಿ ಅಧಿಕಾರ ಹಿಡಿಯಲು ಬೇಕಾದ ಮ್ಯಾಜಿಕ್ ನಂಬರ್ 35. 33 ಜಿಲ್ಲೆಗಳ 37 ಕೇಂದ್ರಗಳಲ್ಲಿ ಮತ ಎಣಿಕೆ ನಡೆಯುತ್ತಿದೆ. ಬೆಳಗ್ಗೆ 9.05ರ ಮಾಹಿತಿಯಂತೆ ರಾಜ್ಯದಲ್ಲಿ ಕಾಂಗ್ರೆಸ್‌ ಮುನ್ನಡೆ ಕಾಯ್ದುಕೊಂಡಿದೆ.

Himachal Pradesh Assembly Election Results 2022 Congress Leading Cross Magic Number

ಬಿಜೆಪಿ 32, ಕಾಂಗ್ರೆಸ್ 36 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ. ಈ ಮೂಲಕ ಮುನ್ನಡೆಯಲ್ಲಿ ಕಾಂಗ್ರೆಸ್‌ ಮ್ಯಾಜಿಕ್ ನಂಬರ್ ದಾಟಿದೆ. ರಾಜ್ಯದಲ್ಲಿ ಅಧಿಕಾರದಲ್ಲಿರುವ ಪಕ್ಷ ಮತ್ತೆ ಅಧಿಕಾರ ಪಡೆಯುವುದಿಲ್ಲ ಎಂಬ ಮಾತು ರಾಜ್ಯದಲ್ಲಿ ಚಾಲ್ತಿಯಲ್ಲಿದೆ.

ಈ ಬಾರಿಯ ಚುನಾವಣೆಯಲ್ಲಿ ಈ ಮಾತನ್ನು ಸುಳ್ಳಾಗಿಸಲು ಬಿಜೆಪಿ ಚುನಾವಣಾ ರಣತಂತ್ರ ರಚನೆ ಮಾಡಿತ್ತು. ಚುನಾವಣಾ ಪೂರ್ವ ಮತ್ತು ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿ ಸರಳ ಬಹುಮತದ ಮೂಲಕ ಅಧಿಕಾರ ಹಿಡಿಯಲಿದೆ ಎಂದು ಹೇಳಿರುವುದು ಪಕ್ಷದ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿತ್ತು.

ಹಿಮಾಚಲ ಪ್ರದೇಶದ ಈ ಬಾರಿಯ ಚುನಾವಣೆ ಕುತೂಹಲಕ್ಕೆ ಕಾರಣವಾಗಿದೆ. ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಪೈಪೋಟಿ ನಡೆಯುತ್ತಿದೆ. ಕ್ಷಣಕ್ಕೊಮ್ಮೆ ಟ್ರೆಂಡ್ ಬದಲಾಗುತ್ತಿದೆ.

ಚಂಬಾ, ಶಿಮ್ಲಾ ಗ್ರಾಮೀಣ, ಶ್ರೀ ರೇಣುಕಾಜಿ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಪಡೆದಿದ್ದಾರೆ. ಕಾಂಗ್ರೆಸ್ ಚೋಪಾಲ್ ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಎಎಪಿ ಯಾವುದೇ ಕ್ಷೇತ್ರದಲ್ಲಿ ಮುನ್ನಡೆ ಪಡೆದಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+