• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಿಮಾಚಲ ಪ್ರದೇಶ ಚುನಾವಣೆ: ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ 26 ಮುಖಂಡರು

|
Google Oneindia Kannada News

ಶಿಮ್ಲಾ, ನ. 08: ಹಿಮಾಚಲ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಗೆ ಒಂದೆರಡು ದಿನಗಳಿರುವಾಗ ಕಾಂಗ್ರೆಸ್‌ಗೆ ಭಾರಿ ಆಘಾತ ಉಂಟಾಗಿದೆ. ಬರೋಬ್ಬರಿ 26 ನಾಯಕರು ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಹಿಮಾಚಲ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಜಿ ಪ್ರಧಾನ ಕಾರ್ಯದರ್ಶಿ ಧರಂಪಾಲ್ ಠಾಕೂರ್ ಖಂಡ್ ಸೇರಿದಂತೆ ರಾಜ್ಯದ ಹಲವು ಕಾಂಗ್ರೆಸ್ ನಾಯಕರು ಮತ್ತು ಸದಸ್ಯರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

Himachal Pradesh Elections 2022: ರಾಹುಲ್ ಗಾಂಧಿ ಪ್ರಚಾರHimachal Pradesh Elections 2022: ರಾಹುಲ್ ಗಾಂಧಿ ಪ್ರಚಾರ

ಹಿಮಾಚಲ ಪ್ರದೇಶದಲ್ಲಿ ಮತದಾನಕ್ಕೆ ನಾಲ್ಕು ದಿನ ಬಾಕಿ ಇರುವಾಗಲೇ ಕಾಂಗ್ರೆಸ್ ಪಕ್ಷದ ಒಟ್ಟು 26 ನಾಯಕರು ತೊರೆದು ಆಡಳಿತಾರೂಢ ಬಿಜೆಪಿ ಸೇರಿದ್ದಾರೆ. ಇದು ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಆಘಾತ ತಂದಿದೆ.

ಮುಖ್ಯಮಂತ್ರಿ ಜೈರಾಮ್ ಠಾಕೂರ್ ಮತ್ತು ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಬಿಜೆಪಿಯ ಸುಧನ್ ಸಿಂಗ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ನಾಯಕರು ಅಧಿಕೃತವಾಗಿ ಪಕ್ಷ ಸೇರ್ಪಡೆಯಾಗಿದ್ದಾರೆ. ಈ ಸಂದರ್ಭದಲ್ಲಿ ಶಿಮ್ಲಾದ ಬಿಜೆಪಿ ಅಭ್ಯರ್ಥಿ ಸಂಜಯ್ ಸೂದ್ ಕೂಡ ಉಪಸ್ಥಿತರಿದ್ದರು.

ಮುಖ್ಯಮಂತ್ರಿ ಜೈರಾಮ್ ಠಾಕೂರ್ ಅವರು ಬಿಜೆಪಿಯ ಎಲ್ಲಾ ಕಾರ್ಯಕರ್ತರಿಗೆ ಆತ್ಮೀಯ ಸ್ವಾಗತ ಕೋರಿದ್ದು, ಬಿಜೆಪಿಯ ಐತಿಹಾಸಿಕ ಗೆಲುವಿಗೆ ಒಗ್ಗಟ್ಟಿನಿಂದ ಶ್ರಮಿಸೋಣ ಎಂದಿದ್ದಾರೆ.

ಇದಕ್ಕೂ ಮುನ್ನ, ಹಿಮಾಚಲ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿನ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ವಿಶ್ವಾಸ ವ್ಯಕ್ತಪಡಿಸಿದರು ಮತ್ತು ರಾಜ್ಯದ ಜನರು ಪ್ರಧಾನಿ ನರೇಂದ್ರ ಮೋದಿ ಅವರನ್ನು ನಂಬುತ್ತಾರೆ ಎಂದು ಹೇಳಿದ್ದರು. ರಾಜ್ಯದಲ್ಲಿ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಅವರು ಉತ್ತಮ ಆಡಳಿತ ನಡೆಸುತ್ತಿದ್ದಾರೆ ಅವರು ಶ್ಲಾಘಿಸಿದ್ದರು.

ಹಿಮಾಚಲದಲ್ಲಿ ನವೆಂಬರ್ 12 ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ. ಈ ಹಿಂದೆ ನಡೆದ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) 44 ಸ್ಥಾನಗಳನ್ನು ಪಡೆದುಕೊಂಡಿದ್ದರೆ, ಕಾಂಗ್ರೆಸ್ 21 ಸ್ಥಾನಗಳನ್ನು ಗೆದ್ದುಕೊಂಡಿತ್ತು.

English summary
Himachal pradesh assembly elections 2022: Big shock to congress, ahead of the Assembly elections 26 Congress leaders joined the ruling BJP. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X