ಹಿಮಾಚಲ ಪ್ರದೇಶ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ; ನ.5ರಿಂದ ಮೋದಿ ಪ್ರಚಾರ

ಶಿಮ್ಲಾ, ಅ.28: ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 5 ರಿಂದ 9 ರವರೆಗೆ ಹಿಮಾಚಲ ಪ್ರದೇಶದಲ್ಲಿ ಬಿಜೆಪಿಯ ಚುನಾವಣಾ ರ್‍ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಸುರೇಶ್ ಕಶ್ಯಪ್ ಹೇಳಿದ್ದಾರೆ.

ಈ ಕಾರ್ಯಕ್ರಮದ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ಶಿಮ್ಲಾ, ಹಮೀರ್‌ಪುರ, ಕಂಗ್ರಾ ಮತ್ತು ಮಂಡಿಯಲ್ಲಿ ಸಾರ್ವಜನಿಕ ರ್‍ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಹಿಮಾಚಲ ಪ್ರದೇಶ ರಾಜ್ಯದಲ್ಲಿ ನವೆಂಬರ್ 12 ರಂದು ಚುನಾವಣೆ ನಡೆಯಲಿದೆ.

ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್, ಕೇಂದ್ರ ಸಚಿವರಾದ ಭೂಪೇಂದರ್ ಯಾದವ್, ಅನುರಾಗ್ ಠಾಕೂರ್, ಜ್ಯೋತಿರಾದಿತ್ಯ ಸಿಂಧಿಯಾ, ಸ್ಮೃತಿ ಇರಾನಿ, ಪಕ್ಷದ ವಕ್ತಾರ ಸಂಬಿತ್ ಪಾತ್ರ ಮತ್ತು ಇತರ ಹಲವಾರು ಪ್ರಮುಖ ನಾಯಕರು ರಾಜ್ಯದ ವಿವಿಧ ಭಾಗಗಳಲ್ಲಿ ಚುನಾವಣಾ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಸುರೇಶ್ ಕಶ್ಯಪ್ ಹೇಳಿದ್ದಾರೆ.

Himachal Pradesh Assembly Elections 2022: PM Modi to address BJP rallies from Nov 5-9

ಚುನಾವಣಾ ಪ್ರಚಾರಗಳ ಚುನಾವಣಾ ರ್‍ಯಾಲಿಗಳ ದಿನಾಂಕಗಳನ್ನು ಅಂತಿಮಗೊಳಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಟಿಕೆಟ್ ಸಿಗದ ಬಂಡಾಯ ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಹಿಂಪಡೆಯುವಂತೆ ಮನವೊಲಿಸುವ ಪ್ರಯತ್ನ ನಡೆಯುತ್ತಿದೆ ಎಂದು ಕಶ್ಯಪ್ ತಿಳಿಸಿದ್ದಾರೆ.

ತಮ್ಮ ನಾಮಪತ್ರಗಳನ್ನು ಹಿಂತೆಗೆದುಕೊಳ್ಳದ ಬಿಜೆಪಿ ಬಂಡಾಯ ಅಭ್ಯರ್ಥಿಗಳನ್ನು ಆರು ವರ್ಷಗಳ ಕಾಲ ಪಕ್ಷದಿಂದ ಹೊರಹಾಕಲಾಗುವುದು. ಆದರೆ, ಬಂಡಾಯ ಅಭ್ಯರ್ಥಿಗಳು ನಾಮಪತ್ರ ಹಿಂಪಡೆದುಕೊಳ್ಳುತ್ತಾರೆ. ಪಕ್ಷದಿಂದ ಉಚ್ಛಾಟಿಸುವ ಪರಿಸ್ಥಿತಿ ಬರುವುದಿಲ್ಲ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

Himachal Pradesh Assembly Elections 2022: PM Modi to address BJP rallies from Nov 5-9

ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗೆ ನಾಮಪತ್ರ ಹಿಂಪಡೆಯಲು ಅಕ್ಟೋಬರ್ 29 ಕೊನೆಯ ದಿನವಾಗಿದೆ. 68 ಸ್ಥಾನಗಳ ವಿಧಾನಸಭೆಗೆ ನವೆಂಬರ್ 12 ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ.

ಅಕ್ಟೋಬರ್ 17ರಂದು ರಾಜ್ಯ ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗಿದ್ದು, ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ 25 ಕೊನೆಯ ದಿನವಾಗಿದ್ದು, ಅಕ್ಟೋಬರ್ 27ರಂದು ನಾಮಪತ್ರಗಳ ಪರಿಶೀಲನೆ ನಡೆಸಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+