ಮುಖ್ಯಮಂತ್ರಿಗಳ ಐವರು ಭದ್ರತಾ ಸಿಬ್ಬಂದಿಗೆ ಕೋವಿಡ್ ಸೋಂಕು

ಶಿಮ್ಲಾ, ಆಗಸ್ಟ್ 13 : ಹಿಮಾಚಲ ಪ್ರದೇಶದ ಮುಖ್ಯಮಂತ್ರಿಗಳ ಐವರು ಭದ್ರತಾ ಸಿಬ್ಬಂದಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 3,744ಕ್ಕೆ ಏರಿಕೆಯಾಗಿದೆ.

ಗುರುವಾರ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜಯರಾಂ ಠಾಕೂರ್ ಐವರು ಭದ್ರತಾ ಸಿಬ್ಬಂದಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಖಚಿತವಾಗಿದೆ. ಗುರುವಾರ ರಾಜ್ಯದಲ್ಲಿ 108 ಹೊಸ ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದೆ.

ಶಿಮ್ಲಾದ ಮುಖ್ಯ ಆರೋಗ್ಯಾಧಿಕಾರಿ ಡಾ. ಸುರೇಖಾ ಚೋಪ್ರಾ ಜಯರಾಂ ಠಾಕೂರ್ ಐವರು ಭದ್ರತಾ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವುದನ್ನು ಖಚಿತಪಡಿಸಿದ್ದಾರೆ. ಮುಖ್ಯಮಂತ್ರಿಗಳು ಕ್ವಾರಂಟೈನ್‌ ಆಗಲಿದ್ದಾರೆಯೇ? ಎಂಬುದು ಇನ್ನೂ ತಿಳಿದುಬಂದಿಲ್ಲ.

Himachal Pradesh CM Five Security Personnel Tested Positive For COVID

ಹಿಮಾಚಲ ಪ್ರದೇಶದಲ್ಲಿ ಒಟ್ಟು 3,744 ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,300. 18 ಜನರು ರಾಜ್ಯದಲ್ಲಿ ಇದುವರೆಗೂ ಮೃತಪಟ್ಟಿದ್ದಾರೆ.

ಬುಧವಾರ ಬೆಳಗ್ಗೆ 8 ರಿಂದ ಗುರುವಾರ ಬೆಳಗ್ಗೆ 8 ಗಂಟೆಯ ತನಕ ಭಾರತದಲ್ಲಿ 66,999 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಸೋಂಕಿತರು ಇದ್ದಾರೆ.

ತಮಿಳುನಾಡು, ಆಂಧ್ರ ಪ್ರದೇಶ, ಕರ್ನಾಟಕ, ದೆಹಲಿ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ಅತಿ ಹೆಚ್ಚು ಸೋಂಕಿತರು ಇದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+