ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಖ್ಯಮಂತ್ರಿಗಳ ಐವರು ಭದ್ರತಾ ಸಿಬ್ಬಂದಿಗೆ ಕೋವಿಡ್ ಸೋಂಕು

|
Google Oneindia Kannada News

ಶಿಮ್ಲಾ, ಆಗಸ್ಟ್ 13 : ಹಿಮಾಚಲ ಪ್ರದೇಶದ ಮುಖ್ಯಮಂತ್ರಿಗಳ ಐವರು ಭದ್ರತಾ ಸಿಬ್ಬಂದಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 3,744ಕ್ಕೆ ಏರಿಕೆಯಾಗಿದೆ.

ಗುರುವಾರ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜಯರಾಂ ಠಾಕೂರ್ ಐವರು ಭದ್ರತಾ ಸಿಬ್ಬಂದಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಖಚಿತವಾಗಿದೆ. ಗುರುವಾರ ರಾಜ್ಯದಲ್ಲಿ 108 ಹೊಸ ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದೆ.

 ಹಿಮಾಚಲ ಪ್ರದೇಶ ಮುಖ್ಯಮಂತ್ರಿಗೆ ಕೊರೊನಾ ಪಾಸಿಟಿವ್: ಕ್ವಾರಂಟೈನ್ ಹಿಮಾಚಲ ಪ್ರದೇಶ ಮುಖ್ಯಮಂತ್ರಿಗೆ ಕೊರೊನಾ ಪಾಸಿಟಿವ್: ಕ್ವಾರಂಟೈನ್

ಶಿಮ್ಲಾದ ಮುಖ್ಯ ಆರೋಗ್ಯಾಧಿಕಾರಿ ಡಾ. ಸುರೇಖಾ ಚೋಪ್ರಾ ಜಯರಾಂ ಠಾಕೂರ್ ಐವರು ಭದ್ರತಾ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವುದನ್ನು ಖಚಿತಪಡಿಸಿದ್ದಾರೆ. ಮುಖ್ಯಮಂತ್ರಿಗಳು ಕ್ವಾರಂಟೈನ್‌ ಆಗಲಿದ್ದಾರೆಯೇ? ಎಂಬುದು ಇನ್ನೂ ತಿಳಿದುಬಂದಿಲ್ಲ.

ಬಳ್ಳಾರಿ: ಕೇವಲ 7 ದಿನಗಳಲ್ಲಿ 36 ಸಾವು, 3935 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ ಬಳ್ಳಾರಿ: ಕೇವಲ 7 ದಿನಗಳಲ್ಲಿ 36 ಸಾವು, 3935 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ

Himachal Pradesh CM Five Security Personnel Tested Positive For COVID

ಹಿಮಾಚಲ ಪ್ರದೇಶದಲ್ಲಿ ಒಟ್ಟು 3,744 ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,300. 18 ಜನರು ರಾಜ್ಯದಲ್ಲಿ ಇದುವರೆಗೂ ಮೃತಪಟ್ಟಿದ್ದಾರೆ.

ಕರ್ನಾಟಕದಲ್ಲಿ 2 ಲಕ್ಷ ದಾಟಿದ ಕೋವಿಡ್ ಪ್ರಕರಣಗಳ ಸಂಖ್ಯೆಕರ್ನಾಟಕದಲ್ಲಿ 2 ಲಕ್ಷ ದಾಟಿದ ಕೋವಿಡ್ ಪ್ರಕರಣಗಳ ಸಂಖ್ಯೆ

ಬುಧವಾರ ಬೆಳಗ್ಗೆ 8 ರಿಂದ ಗುರುವಾರ ಬೆಳಗ್ಗೆ 8 ಗಂಟೆಯ ತನಕ ಭಾರತದಲ್ಲಿ 66,999 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಸೋಂಕಿತರು ಇದ್ದಾರೆ.

ತಮಿಳುನಾಡು, ಆಂಧ್ರ ಪ್ರದೇಶ, ಕರ್ನಾಟಕ, ದೆಹಲಿ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ಅತಿ ಹೆಚ್ಚು ಸೋಂಕಿತರು ಇದ್ದಾರೆ.

English summary
Chief medical offficer of Shimla Dr Surekha Chopra said that 5 security personnel of Himachal Pradesh chief minister Jai Ram Thakur have tested positive for COVID 19.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X