ಹಿಮಾಚಲ ಪ್ರದೇಶ ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಬಿಜೆಪಿಗೆ ಸೇರ್ಪಡೆ

ಶಿಮ್ಲಾ, ಸೆಪ್ಟೆಂಬರ್‌ 29: ಹಿಮಾಚಲ ಪ್ರದೇಶ ಕಾಂಗ್ರೆಸ್ ಕಾರ್ಯಾಧ್ಯಕ್ಷ ಹರ್ಷ್ ಮಹಾಜನ್ ಅವರು ಬುಧವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ರಾಜ್ಯ ಸರ್ಕಾರದ ಮಾಜಿ ಸಚಿವ ಮತ್ತು ಕಳೆದ ವರ್ಷ ನಿಧನರಾದ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅವರ ನಿಕಟವರ್ತಿ ಮಹಾಜನ್, ರಾಜ್ಯದಲ್ಲಿ ಕಾಂಗ್ರೆಸ್ ನಾಯಕತ್ವದ ವಿರುದ್ಧ ವಾಗ್ದಾಳಿ ನಡೆಸಿದ್ದು, ಬಿಜೆಪಿ ಸೇರ್ಪಡೆ ಬಳಿಕ ಕಾಂಗ್ರೆಸ್‌ ಪಕ್ಷವು ಈಗ ದೃಷ್ಟಿಹೀನ, ದಿಕ್ಕಿಲ್ಲದ ಮತ್ತು ನಾಯಕನಿಲ್ಲದ ಪಕ್ಷವಾಗಿದೆ. ಕೇಂದ್ರ ನಾಯಕತ್ವದಂತೆ, ಇದು ದೆಹಲಿಯಂತೆಯೇ ಮಾ-ಬೇಟಾದಿಂದ ನರಳುತ್ತಿದೆ ಎಂದು ಹೇಳಿದರು.

Himachal Pradesh Congress working president joins BJP

ಹಿಮಾಚಲಪ್ರದೇಶದಲ್ಲಿ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅವರ ಪತ್ನಿ ಪ್ರತಿಭಾ ಸಿಂಗ್ ಅವರು ಈಗ ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. ಅವರ ಮಗ ವಿಕ್ರಮಾದಿತ್ಯ ಸಿಂಗ್ ಪಕ್ಷದ ಶಾಸಕರಾಗಿದ್ದಾರೆ. ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರ ಸಮ್ಮುಖದಲ್ಲಿ ಅವರು ಬಿಜೆಪಿಗೆ ಸೇರ್ಪಡೆಗೊಂಡರು ಮತ್ತು ಸದೃಢ ಸರ್ಕಾರ ನೀಡುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವನ್ನು ಶ್ಲಾಘಿಸಿ ಮಾಜಿ ಮುಖ್ಯಮಂತ್ರಿ ನಿಧನದ ನಂತರ ಕಾಂಗ್ರೆಸ್‌ನಲ್ಲಿ ಏನೂ ಉಳಿದಿಲ್ಲ ಎಂದರು.

ಮಹಾಜನ್ ಅವರನ್ನು ಸ್ವಾಗತಿಸಿದ ಕೇಂದ್ರ ಸಚಿವ ಪಿಯೂಷ್ ಗೋಯಲ್ ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಚುನಾವಣೆಯ ನಂತರ ಬಿಜೆಪಿ ಅಧಿಕಾರವನ್ನು ಉಳಿಸಿಕೊಳ್ಳುವ ಮೂಲಕ ರಾಜ್ಯದಲ್ಲಿ ಇತಿಹಾಸವನ್ನು ಬರೆಯಲಿದೆ. ಮಹಾಜನ್ ನಾಲ್ಕು ದಶಕಗಳಿಂದ ಕಾಂಗ್ರೆಸ್‌ನಲ್ಲಿದ್ದರು. ಅವರು ಕಾಂಗ್ರೆಸ್‌ನಲ್ಲಿ ಪ್ರಮುಖ ಸ್ಥಾನಗಳನ್ನು ಅಲಂಕರಿಸಿದ್ದಾರೆ ಮತ್ತು ಕ್ಲೀನ್ ಇಮೇಜ್ ಅನ್ನು ಉಳಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರಕಾರ ಪುನರಾವರ್ತನೆಯಾಗಲಿದೆ ಎಂದರು.

ಮಹಾಜನ್ ಅವರು ಕಾಂಗ್ರೆಸ್ ಜೊತೆಗಿನ ನಾಲ್ಕು ದಶಕಗಳ ಸುದೀರ್ಘ ಒಡನಾಟವನ್ನು ನೆನಪಿಸಿಕೊಂಡರು. ಈ ಸಮಯದಲ್ಲಿ ಅವರು ರಾಜ್ಯ ಸರ್ಕಾರದಲ್ಲಿ ಮತ್ತು ಪಕ್ಷದ ಸಂಘಟನೆಯಲ್ಲಿ ಪ್ರಮುಖ ಸ್ಥಾನಗಳಲ್ಲಿ ಸೇವೆ ಸಲ್ಲಿಸಿದರು. ಇತ್ತೀಚೆಗಷ್ಟೇ, ಚುನಾವಣಾ ಕಣದಲ್ಲಿರುವ ರಾಜ್ಯದ ಇಬ್ಬರು ಕಾಂಗ್ರೆಸ್ ಶಾಸಕರು ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಕಳೆದ ವರ್ಷ ಅಲ್ಲಿ ನಡೆದ ಉಪಚುನಾವಣೆಯಲ್ಲಿ ಸೋಲು ಅನುಭವಿಸಿದ ನಂತರ ಅಧಿಕಾರವನ್ನು ಉಳಿಸಿಕೊಳ್ಳಲು ಹೆಚ್ಚು ಸಮಯ ಶ್ರಮಿಸುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+