
Himachal Pradesh Exit Poll Result 2022; ಬಿಜೆಪಿಯೇ ಬಹುದೊಡ್ಡ ಪಕ್ಷ
ನವದೆಹಲಿ, ಡಿಸೆಂಬರ್ 05; ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯ ಮತದಾನ ಮುಕ್ತಾಯಗೊಂಡಿದೆ. ವಿವಿಧ ವಾಹಿನಿಗಳು ನಡೆಸಿದ ಚುನಾವಣೋತ್ತರ ಸಮೀಕ್ಷೆಗಳು ಸೋಮವಾರ ಪ್ರಕಟಗೊಂಡಿವೆ. ಬಿಜೆಪಿಯೇ ಬಹುದೊಡ್ಡ ಪಕ್ಷವಾಗಲಿದೆ ಎಂದು ಸಮೀಕ್ಷೆಗಳು ಹೇಳಿವೆ.
Republic TV P-Marq ಎಕ್ಸಿಟ್ ಪೋಲ್ ಫಲಿತಾಂಶದ ಪ್ರಕಾರ ಬಿಜೆಪಿ 34-39 ಸ್ಥಾನಗಳಲ್ಲಿ ಜಯಗಳಿಸಲಿದೆ. ಕಾಂಗ್ರೆಸ್ 28 ರಿಂದ 33, ಎಎಪಿ 1 ಸ್ಥಾನದಲ್ಲಿ ಜಯಗಳಿಸಲಿದೆ. ಈ ಮೂಲಕ ಮತ್ತೆ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದು ಅಂದಾಜಿಸಲಾಗಿದೆ.
Himachal Pradesh Exit Poll Result 2022; ಬಿಜೆಪಿಗೆ ಗೆಲುವು
ಹಿಮಾಚಲ ಪ್ರದೇಶದ 68 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 12ರಂದು ಒಂದೇ ಹಂತದಲ್ಲಿ ಮತದಾನ ನಡೆದಿತ್ತು. ಶೇ 75.6ರಷ್ಟು ಮತದಾನವಾಗಿತ್ತು, ರಾಜ್ಯದಲ್ಲಿ ಅಧಿಕಾರ ಹಿಡಿಯಲು ಬೇಕಾದ ಮ್ಯಾಜಿಕ್ ನಂಬರ್ 35 ಆಗಿದೆ. ಸಮೀಕ್ಷೆಯ ಪ್ರಕಾರ ಬಿಜೆಪಿ ಸ್ಪಷ್ಟ ಬಹುಮತ ಪಡೆಯಲಿದೆ.
ಗುಜರಾತ್ ಚುನಾವಣೆ: ಮಲ್ಲಿಕಾರ್ಜುನ ಖರ್ಗೆಯ 'ರಾವಣ' ಹೇಳಿಕೆಗೆ ಮೋದಿ ತಿರುಗೇಟು
Republic TV P-Marq ಎಕ್ಸಿಟ್ ಪೋಲ್ ಫಲಿತಾಂಶದ ಪ್ರಕಾರ ಬಿಜೆಪಿ ಶೇ 44.8 ಮತಗಳನ್ನು ಪಡೆಯಲಿದೆ. ಕಾಂಗ್ರೆಸ್ ಶೇ 42.9ರಷ್ಟು ಮತಗಳು ಮತ್ತು ಎಎಪಿ ಶೇ 2.8 ರಷ್ಟು ಮತಗಳನ್ನು ಪಡೆಯಲಿದೆ. ಇತರರು ಶೇ 9.5ರಷ್ಟು ಮತಗಳನ್ನು ಪಡೆಯಲಿದ್ದಾರೆ.
ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಸೀರಾಜ್ ಕ್ಷೇತ್ರದಲ್ಲಿ ಜಯಗಳಿಸಲಿದ್ದಾರೆ ಎಂದು ಸಮೀಕ್ಷೆ ಹೇಳಿದೆ. ಶಿಮ್ಲಾ (ಗ್ರಾಮೀಣ) ಕ್ಷೇತ್ರದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ವಿಕ್ರಮಾದಿತ್ಯ ಸಿಂಗ್ ಜಯಗಳಿಸಲಿದ್ದಾರೆ ಎಂದು ಅಂದಾಜಿಸಿದೆ.
ಸೋಮವಾರ ಬೆಳಗ್ಗೆ ಮುಖ್ಯಮಂತ್ರಿ ಜೈರಾಮ್ ಠಾಕೂರ್, "ಬಿಜೆಪಿ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ. ಸತತ ಎರಡನೇ ಬಾರಿಗೆ ಸರ್ಕಾರ ರಚನೆ ಮಾಡುವ ಮೂಲಕ ಸಂಪ್ರದಾಯ ಮುರಿಯಲಿದೆ" ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.
ಕಳೆದ ಚುನಾವಣೆ ಫಲಿತಾಂಶ; ಹಿಮಾಚಲ ಪ್ರದೇಶದ ಕಳೆದ ಚುನಾವಣೆಗಳ ಫಲಿತಾಂಶಗಳನ್ನು ನೋಡಿದರೆ 2017ರ ಚುನಾವಣೆಯಲ್ಲಿ ಬಿಜೆಪಿ 44, ಕಾಂಗ್ರೆಸ್ 21 ಮತ್ತು ಇತರರು 3 ಸ್ಥಾನಗಳಲ್ಲಿ ಜಯಗಳಿಸಿತ್ತು.
ಅದಕ್ಕೂ ಹಿಂದಿನ ಅಂದರೆ 2012ರ ಚುನಾವಣೆಯಲ್ಲಿ ಬಿಜೆಪಿಗೆ ಅಧಿಕಾರ ಸಿಕ್ಕಿರಲಿಲ್ಲ. ಬಿಜೆಪಿಗೆ 26, ಕಾಂಗ್ರೆಸ್‌ಗೆ 36 ಮತ್ತು ಇತರರು 6 ಸ್ಥಾನಗಳಲ್ಲಿ ಜಯಗಳಿಸಿದ್ದರು. ಕಾಂಗ್ರೆಸ್ ದೊಡ್ಡ ಪಕ್ಷವಾಗಿ ಅಧಿಕಾರವನ್ನು ಹಿಡಿದಿತ್ತು.
ಮುಖ್ಯಮಂತ್ರಿಗಳ ಪ್ರತಿಕ್ರಿಯೆ; ಚುನಾವಣೋತ್ತರ ಸಮೀಕ್ಷೆಗಳು ಪ್ರಕಟವಾದ ಬಳಿಕ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಜೈರಾಂ ಠಾಕೂರ್, "ಹಲವು ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿ ಸರ್ಕಾರ ರಚನೆ ಮಾಡಲಿವೆ ಎಂದು ಹೇಳಿವೆ. ಮತ್ತೆ ಕೆಲವು ನೇರ ಸ್ಪರ್ಧೆ ಇದೆ ಎಂದು ತಿಳಿಸಿವೆ. ನಾವು ಡಿಸೆಂಬರ್ 8ರ ತನಕ ಕಾಯುತ್ತೇವೆ. ನಮ್ಮ ಪ್ರಕಾರ ಬಿಜೆಪಿ ಸರಳ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ" ಎಂದು ಹೇಳಿದರು.