ಹಿಮಾಚಲ ಪ್ರದೇಶದಲ್ಲಿ ಜೂನ್ 30ರ ತನಕ ಲಾಕ್ ಡೌನ್ ವಿಸ್ತರಣೆ
ಶಿಮ್ಲಾ, ಮೇ 25 : ಕೊರೊನಾ ಹರಡದಂತೆ ತಡೆಯಲು ಹಿಮಾಚಲ ಪ್ರದೇಶದಲ್ಲಿ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಜೂನ್ 30ರ ತನಕ ಲಾಕ್ ಡೌನ್ ವಿಸ್ತರಣೆ ಮಾಡಿ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಆದೇಶ ಹೊರಡಿಸಿದ್ದಾರೆ.
Recommended Video
ಬಿಜೆಪಿ ಅಧಿಕಾರದಲ್ಲಿರುವ ಹಿಮಾಚಲ ಪ್ರದೇಶದಲ್ಲಿ ಲಾಕ್ ಡೌನ್ ವಿಸ್ತರಣೆ ಮಾಡಿ ಸೋಮವಾರ ಆದೇಶ ಹೊರಡಿಸಲಾಗಿದೆ. ಮೇ 18ರಿಂದ 31ರ ತನಕ 4ನೇ ಹಂತದ ಲಾಕ್ ಡೌನ್ ಜಾರಿಯಲ್ಲಿ ಇರುತ್ತದೆ. ಜೂನ್ 1ರಿಂದ 5ನೇ ಹಂತದ ಲಾಕ್ ಡೌನ್ ಜಾರಿಗೆ ಬರಲಿದೆ.
"ರಾಜ್ಯದ ಎಲ್ಲಾ 12 ಜಿಲ್ಲೆಗಳಲ್ಲಿ ಲಾಕ್ ಡೌನ್ ಜೂನ್ 30ರ ತನಕ ಜಾರಿಯಲ್ಲಿರುತ್ತದೆ" ಎಂದು ಮುಖ್ಯಮಂತ್ರಿ ಜೈರಾಮ್ ಠಾಕೂರ್ ಹೇಳಿದ್ದಾರೆ. ಇದುವರೆಗೂ ರಾಜ್ಯದಲ್ಲಿ 203 ಕೊರೊನಾ ಪ್ರಕರಣ ದಾಖಲಾಗಿದೆ.

ಹಿಮಾಚಲ ಪ್ರದೇಶದಲ್ಲಿ ಇದುವರೆಗೂ 63 ಕೊರೊನಾ ಸೋಂಕಿತರು ಗುಣಮುಖರಾಗಿದ್ದು, ಮೂವರು ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. 4 ನೇ ಹಂತದ ಲಾಕ್ ಡೌನ್‌ನ ಇನ್ನೂ 6 ದಿನ ಬಾಕಿ ಇರುವಾಗಲೇ ಒಂದು ತಿಂಗಳ ಕಾಲ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಮೇ 31ರ ಬಳಿಕ ದೇಶದಲ್ಲಿ ಲಾಕ್ ಡೌನ್ ಯಾವ ಸ್ವರೂಪದಲ್ಲಿ ಇರಲಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ ಹಿಮಾಚಲ ಪ್ರದೇಶ ಸರ್ಕಾರ ಮಾತ್ರ ಲಾಕ್ ಡೌನ್ ವಿಸ್ತರಣೆ ಮಾಡಿದೆ.












Click it and Unblock the Notifications