ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಿಮಾಚಲ ಪ್ರದೇಶ ಭೂಕುಸಿತ; 23ಕ್ಕೆ ಏರಿದ ಮೃತರ ಸಂಖ್ಯೆ

By ಒನ್‌ಇಂಡಿಯಾ ಡೆಸ್ಕ್‌
|
Google Oneindia Kannada News

ಶಿಮ್ಲಾ, ಆಗಸ್ಟ್‌ 14: ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಸತತ ನಾಲ್ಕನೇ ದಿನ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಶನಿವಾರ ಆರು ಶವಗಳು ಪತ್ತೆಯಾಗಿದ್ದು, ಭೂಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 23ಕ್ಕೆ ಏರಿಕೆಯಾಗಿರುವುದಾಗಿ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹಿಮಾಚಲ ಪ್ರದೇಶದ ಚೌರಾ ಗ್ರಾಮದ ರಾಷ್ಟ್ರೀಯ ಹೆದ್ದಾರಿ 5ರಲ್ಲಿ ಆರು ಶವಗಳು ಶನಿವಾರ ಪತ್ತೆಯಾಗಿವೆ. ಉಳಿದ ಒಂಬತ್ತು ಮಂದಿಗಾಗಿ ಶೋಧ ಕಾರ್ಯ ಮುಂದುವರೆದಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಘಟಕದ ನಿರ್ದೇಶಕ ಸುದೇಶ್ ಕುಮಾರ್ ಮೊಖ್ತಾ ಮಾಹಿತಿ ನೀಡಿದ್ದಾರೆ.

ಭೂಕುಸಿತದ ಪರಿಣಾಮ ಬಂಡೆಗಳು ಉರುಳಿ ಬೀಳುತ್ತಲೇ ಇವೆ. ಹೀಗಾಗಿ ಇಲ್ಲಿ ಸದ್ಯ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ನಿಚಾರ್‌ ಉಪ ವಿಭಾಗಾಧಿಕಾರಿ ಮನಮೋಹನ್ ಸಿಂಗ್ ಹೇಳಿದ್ದಾರೆ.

Himachal Pradesh Landslide: Death Toll Rises To 23

ಬುಧವಾರ ಮಧ್ಯಾಹ್ನ 12.45ರ ಸುಮಾರಿಗೆ ಕಿನ್ನೌರ್‌ನಲ್ಲಿ ಭೂ ಕುಸಿತ ಸಂಭವಿಸಿದೆ. 40ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಹಿಮಾಚಲ ರಸ್ತೆ ಸಾರಿಗೆ ಸಂಸ್ಥೆಯ(ಎಚ್‌ಆರ್‌ಟಿಸಿ) ಬಸ್ ಸೇರಿದಂತೆ ಹಲವು ವಾಹನಗಳು ಅವಶೇಷಗಳ ಅಡಿಯಲ್ಲಿ ಸಿಲುಕಿವೆ. ಎಚ್​ಆರ್​ಸಿಟಿಸಿ ಸಾರಿಗೆ ಬಸ್, ಟ್ರಕ್, ಕಾರುಗಳು ಭೂಕುಸಿತದಿಂದ ಮಣ್ಣಿನಡಿ ಮುಚ್ಚಿಹೋಗಿವೆ. ರೆಕಾಂಗ್ ಪಿಯೋ- ಶಿಮ್ಲಾ ಹೆದ್ದಾರಿ ಬಂದ್ ಆಗಿದ್ದು, ಎನ್​ಡಿಆರ್​ಎಫ್​ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಕಿನ್ನೌರ್ ಜಿಲ್ಲಾಧಿಕಾರಿ ಅಬಿದ್ ಹುಸೇನ್ ಸಾದಿಖ್ ಸ್ಥಳಕ್ಕೆ ಭೇಟಿ ನೀಡಿ, ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ ನಡೆಸಿದ್ದಾರೆ. ರಸ್ತೆಯಲ್ಲಿ ಹಿಮಾಚಲ ಪ್ರದೇಶದ ಸಾರಿಗೆ ಬಸ್ ಸಂಚರಿಸುತ್ತಿದ್ದಾಗಲೇ ಭೂಕುಸಿತ ಉಂಟಾಗಿದ್ದು, ಬಸ್​ ಹಾಗೂ ಅದರ ಹಿಂದೆ ಮುಂದೆ ಬರುತ್ತಿದ್ದ ಕೆಲವು ವಾಹನಗಳು ಕೂಡ ಮಣ್ಣಿನಡಿ ಮುಚ್ಚಿಹೋಗಿವೆ. ಆ ಬಸ್​ನಲ್ಲಿದ್ದ 40ಕ್ಕೂ ಹೆಚ್ಚು ಜನರು ಮಣ್ಣಿನಡಿ ಸಿಲುಕಿದ್ದರು. ಘಟನಾ ಸ್ಥಳಕ್ಕೆ ಸುಮಾರು 200 ಭದ್ರತಾ ಸಿಬ್ಬಂದಿ ರಕ್ಷಣೆಗೆ ಧಾವಿಸಿದ್ದರು.

ಕಿನ್ನೌರ್ ಜಿಲ್ಲಾಧಿಕಾರಿ ಅಬಿದ್ ಹುಸೇನ್ ಸಾದಿಖ್ ಸ್ಥಳಕ್ಕೆ ಭೇಟಿ ನೀಡಿ, ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ ನಡೆಸಿದ್ದಾರೆ. ರಸ್ತೆಯಲ್ಲಿ ಹಿಮಾಚಲ ಪ್ರದೇಶದ ಸಾರಿಗೆ ಬಸ್ ಸಂಚರಿಸುತ್ತಿದ್ದಾಗಲೇ ಭೂಕುಸಿತ ಉಂಟಾಗಿದ್ದು, ಬಸ್​ ಹಾಗೂ ಅದರ ಹಿಂದೆ ಮುಂದೆ ಬರುತ್ತಿದ್ದ ಕೆಲವು ವಾಹನಗಳು ಕೂಡ ಮಣ್ಣಿನಡಿ ಮುಚ್ಚಿಹೋಗಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹಿಮಾಚಲಪ್ರದೇಶದಲ್ಲಿ ಭೂಕುಸಿತ, 40 ಮಂದಿ ಸಿಲುಕಿರುವ ಸಾಧ್ಯತೆಹಿಮಾಚಲಪ್ರದೇಶದಲ್ಲಿ ಭೂಕುಸಿತ, 40 ಮಂದಿ ಸಿಲುಕಿರುವ ಸಾಧ್ಯತೆ

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್ ಡಿಆರ್ ಎಫ್) ಸ್ಥಳದಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ಕಾರ್ಯಾಚರಣೆಯಲ್ಲಿ 13 ಮಂದಿಯನ್ನು ರಕ್ಷಿಸಲಾಗಿದೆ.

ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತ ನಿಜಕ್ಕೂ ದುಃಖಕರ ಸಂಗತಿ, ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ನನ್ನ ಸಂತಾಪ. ಗಾಯಗೊಂಡವರು ಶೀಘ್ರವೇ ಗುಣಮುಖರಾಗಲಿ ಎಂದು ಆಶಿಸಿರುವ ಪ್ರಧಾನಿ ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರ ಕುಟುಂಬಕ್ಕೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಇದುವರೆಗೂ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ. ಕೆಲವು ದಿನಗಳ ಹಿಂದೆ ಹಿಮಾಚಲ ಪ್ರದೇಶದ ಸಿರ್​ಮೌರ್ ಜಿಲ್ಲೆಯ ಶಿಲಾಯ್​ ಪ್ರದೇಶದ ಕಲಿ ಖಾನ್ ಏರಿಯಾದಲ್ಲಿ ಇದೇ ರೀತಿಯ ಭಾರೀ ಭೂಕುಸಿತವಾಗಿತ್ತು. ಭೂಕುಸಿತದಿಂದ ಹೈವೇಯಲ್ಲಿ 100 ಮೀಟರ್ ಅಗಲದ ಕಂದಕ ಉಂಟಾಗಿತ್ತು. ರಾಷ್ಟ್ರೀಯ ಹೆದ್ದಾರಿ 707ರಲ್ಲಿ ಭೂ ಕುಸಿತ ಉಂಟಾಗಿ ಇಡೀ ರಸ್ತೆಯೇ ಕುಸಿದು ಬಿದ್ದ ವಿಡಿಯೋ ಭಾರೀ ವೈರಲ್ ಆಗಿತ್ತು.

English summary
six more bodies were recovered from the site of the landslide in Himachal Pradesh's Kinnaur, taking the death toll to 23
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X