Hindenburg Research: ಹಿಂಡನ್‌ಬರ್ಗ್ ವರದಿಯ ಸುತ್ತ ರಾಜಕೀಯ ಸಮರ: ಬಿಜೆಪಿ ವಿರುದ್ಧ ಕಾಂಗ್ರೆಸ್ ಆರೋಪವೇನು.?
Hindenburg Research: ಉದ್ಯಮಿ ಗೌತಮ್ ಅದಾನಿ ಅವರ ಸಮೂಹ ಕಂಪನಿಗಳ ಷೇರು ಅವ್ಯವಹಾರದಲ್ಲಿ ಸೆಬಿ ಮುಖ್ಯಸ್ಥರು ಭಾಗಿಯಾಗಿದ್ದಾರೆ ಎಂದು ಅಮೇರಿಕಾ ಮೂಲದ ಸಂಶೋಧನಾ ಸಂಸ್ಥೆ ಇತ್ತೀಚೆಗಷ್ಟೇ ಬಾಂಬ್ ಸಿಡಿಸಿದ್ದು, ಈ ಟ್ವಿಟರ್ ಪೋಸ್ಟ್ ಭಾರೀ ವೈರಲ್ ಆಗಿತ್ತು. ಆಗಿನಿಂದ ಇದು ಹೊಸ ತಿರುವುಗಳನ್ನು ಪಡೆಯುತ್ತಲೇ ಇದೆ. ಇದೀಗ ಈ ವರದಿಯ ಸುತ್ತ ರಾಜಕೀಯ ಸಮರ ಜೋರಾಗಿಯೇ ನಡೆಯುತ್ತಿದೆ.

ಹಿಂಡನ್‌ಬರ್ಗ್ ವರದಿಯು ಷೇರು ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಸಲಿಲ್ಲ. ಸೋಮವಾರ ಅದಾನಿ ಸಮೂಹದ ಕೆಲವು ಕಂಪನಿಗಳ ಷೇರುಗಳು ಅಲ್ಪ ಕುಸಿತ ದಾಖಲಿಸಿ, ಮತ್ತೆ ಏರಿಕೆಯತ್ತ ಸಾಗಿದವು. ಅದಾನಿ ವಿಲ್ಮರ್, ಅದಾನಿ ಟೋಟಲ್ ಗ್ಯಾಸ್, ಅದಾನಿ ಎನರ್ಜಿ ಸಲ್ಯೂಷನ್ಸ್, ಅಂಬುಜಾ ಸಿಮೆಂಟ್, ಅದಾನಿ ಎಂಟರ್‌ಪ್ರೈಸಸ್ ಷೇರುಗಳು ದಿನದ ಆರಂಭದಲ್ಲಿ ತೀವ್ರ ಕುಸಿತ ದಾಖಲಿಸಿ ನಂತರ ಚೇತರಿಕೆಯತ್ತ ಸಾಗಿಸದವು ಅಂತಾ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.
ಇದರ ಬೆನ್ನಲ್ಲೇ ಬಿಜೆಪಿಯು ಭಾರತದ ಷೇರು ಮಾರುಕಟ್ಟೆಯನ್ನು ಅಸ್ಥಿರಗೊಳಿಸುವ ಹಾಗೂ ಅರ್ಥ ವ್ಯವಸ್ಥೆಯನ್ನು ದುರ್ಬಲಗೊಳಿಸುವ ವಿದೇಶಗಳ ಪಿತೂರಿ ಎಂದಿಗೂ ಈಡೇರುವುದಿಲ್ಲ ಎಂದು ಹೇಳಿದೆ.
ಹಿಂಡನ್‌ಬರ್ಗ್ ವರದಿಯಲ್ಲಿನ ಆರೋಪಗಳ ಕುರಿತು ಕಾಂಗ್ರೆಸ್ ಪ್ರಕರಣವನ್ನು ಜೆಪಿಸಿ ತನಿಖೆಗೆ ವಹಿಸಬೇಕು ಎಂದು ಸರ್ಕಾರದ ಮೇಲೆ ಒತ್ತಡ ಹಾಕುತ್ತಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಂತರ ಪಕ್ಷದ ಪ್ರಧಾನ ಕಾರ‍್ಯದರ್ಶಿ ಜೈರಾಮ್ ರಮೇಶ್ ಅವರು ಕೂಡ ಸೋಮವಾರ ಸಾಮಾಜಿಕ ಜಾಲತಾಣ ತಾಣವಾದ ತಮ್ಮ ಟ್ವೀಟ್ ಖಾತೆಯಲ್ಲಿ ಇದನ್ನೇ ಬರೆದುಕೊಂಡಿದ್ದಾರೆ.
ಕೇಂದ್ರದ ಮಾಜಿ ಸಚಿವ ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್ ಅವರು ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ, ಕಾಂಗ್ರೆಸ್‌ನ ಆರೋಪಗಳಿಗೆ ತಿರುಗೇಟು ನೀಡಿದ್ದಾರೆ. ಇಷ್ಟು ದಿನ ಪ್ರಧಾನಿ ಮೋದಿ ಅವರನ್ನು ಮಾತ್ರ ದ್ವೇಷ ಮಾಡುತ್ತಿದ್ದ ರಾಹುಲ್ ಗಾಂಧಿ ಮತ್ತವರ ಟೂಲ್‌ಕಿಟ್ ಸ್ನೇಹಿತರ ಬಳಗ ಈಗ ಇಡೀ ಭಾರತದ ವಿರುದ್ಧವೇ ದ್ವೇಷ ಕಾರುತ್ತಿದೆ. ಕಾಂಗ್ರೆಸ್ ಭಾರತದ ಷೇರು ಮಾರುಕಟ್ಟೆ ಕುಸಿಯಲು ಬಯಸುತ್ತಿದೆ," ಎಂದು ತಿರುಗೇಟು ನೀಡಿದರು.
"ಯುಪಿಎ 10 ವರ್ಷಗಳ ಅವಧಿಯಲ್ಲಿ ಸಾಲುಸಾಲು ಹಗರಣಗಳು ನಡೆದಿದ್ದವು. ಆಗ ಏಕೆ ಹಿಂಡನ್‌ಬರ್ಗ್ ವರದಿ ಬರಲಿಲ್ಲ?" ಎಂದು ಪ್ರಶ್ನಿಸಿದ ಅವರು, "ಭಾರತದ ಆರ್ಥಿಕತೆಯನ್ನು ದುರ್ಬಲಗೊಳಿಸುವ ಹಾಗೂ ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರು ನಂಬಿಕೆ ಕಳೆದುಕೊಳ್ಳುವಂತಹ ಸ್ಥಿತಿ ನಿರ್ಮಿಸಲು ವಿದೇಶಗಳು ಹೊಂಚುಹಾಕುತ್ತಿವೆ. ಅವುಗಳ ಪ್ರಯತ್ನಕ್ಕೆ ಕಾಂಗ್ರೆಸ್ ಸಾಥ್ ನೀಡುತ್ತಿದೆ. ಆದರೆ ಈ ಸಂಚು ಎಂದಿಗೂ ಈಡೇರುವುದಿಲ್ಲ. ಈ ವರದಿಯ ಹಿಂದೆ ದೊಡ್ಡ ಷಡ್ಯಂತ್ರ ಇದೆ," ಎಂದು ಆರೋಪ ಮಾಡಿದರು.
"ಭಾರತದ ವಿರುದ್ಧ ಅಂತಾರಾಷ್ಟ್ರೀಯ ಮಟ್ಟದಲ್ಲಿಅಪಪ್ರಚಾರ ನಡೆಸುವ ಅಮೆರಿಕದ ಹೂಡಿಕೆದಾರ ಜಾರ್ಜ್ ಸೋರಸ್ ಹಿಂಡನ್‌ಬರ್ಗ್ ರಿಸರ್ಚ್ ಸಂಸ್ಥೆಯಲ್ಲಿ ಪ್ರಮುಖ ಹೂಡಿಕೆದಾರರಾಗಿದ್ದಾರೆ. ಇವರು ಈ ಹಿಂದೆ ಮೋದಿ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿದ್ದರು. ಇಂತಹ ವ್ಯಕ್ತಿಗಳಿರುವ ಹಿಂಡನ್‌ಬರ್ಗ್ ಸಂಸ್ಥೆಯಿಂದ ಇನ್ನೇನು ನಿರೀಕ್ಷೆ ಮಾಡಲಾದೀತು?" ಎಂದು ರವಿಶಂಕರ್ ಪ್ರಸಾದ್ ಪ್ರಶ್ನಿಸಿದರು.
ಭಾರತೀಯ ಷೇರು ನಿಯಂತ್ರಕ ಸಂಸ್ಥೆ (ಸೆಬಿ) ಮುಖ್ಯಸ್ಥೆ ಮಾಧವಿ ಪುರಿ ಬುಚ್ ಅವರ ವಿರುದ್ಧ ಹಿಂಡೆನ್‌ಬರ್ಗ್ ಆರೋಪಗಳ ಬೆನ್ನಲ್ಲೇ ಕಾಂಗ್ರೆಸ್, ಅವರ ರಾಜೀನಾಮೆಗೆ ಒತ್ತಾಯಿಸಿದೆ. ಸೆಬಿ ಅಧ್ಯಕ್ಷರ ವಿರುದ್ಧದ ಹಿಂಡೆನ್‌ಬರ್ಗ್ ಆರೋಪಕ್ಕೆ ಸಂಬಂಧಿಸಿದಂತೆ ಜೆಪಿಸಿ ತನಿಖೆ ನಡೆಸದಿದ್ದರೆ ರಾಷ್ಟ್ರದಾದ್ಯಂತ ಪ್ರತಿಭಟನೆ ನಡೆಸಲಾಗುವುದು. ಅಲ್ಲದೆ, ಈ ತನಿಖೆಯನ್ನು ಸಿಬಿಐ ಇಲ್ಲವೇ ಎಸ್‌ಐಟಿಗೆ ವಹಿಸಬೇಕು ಅಂತಲೂ ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಮಾಡಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications