Sushant Singh Case: ಸಾವಿನ ಪ್ರಕರಣ ಬಗ್ಗೆ ಹೊಸ ಮಾಹಿತಿ ಬಹಿರಂಪಡಿಸಿದ ಡಿಸಿಎಂ ಫಡ್ನವಿಸ್
ಬೆಂಗಳೂರು, ಜೂನ್ 29: ಹಿಂದಿ ನಟ ಸುಶಾಂತ್ ಸಿಂಗ್ ರಜಪೂತ್ ಅವರು ಮೃತಪಟ್ಟು ಸುಮಾರು ಮೂರು ವರ್ಷ ಕಳೆದಿವೆ. ವೇಳೆ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಪ್ರಕರಣದ ಬಗ್ಗೆ ಹೊಸ ಮಾಹಿತಿಯೊಂದನ್ನು ಬಹಿರಂಗಪಡಿಸಿದ್ದಾರೆ. ಇದರಿಂದ ಪ್ರಕರಣದ ತನಿಖೆಗೆ ತಿರುವು ಸಿಗುವ ಸಾಧ್ಯತೆ ಇದೆ.
ಸುಶಾಂತ್ ಸಾವು ತೀವ್ರ ಚರ್ಚೆ ಹುಟ್ಟುಹಾಕಿತ್ತು, ಕೆಲವು ಭಾಲಿವುಡ್ ನಟರಿಗೆ ಸಂಕಷ್ಟ ಒದಗಿತೇನೋ ಎನ್ನುವಷ್ಟರಲ್ಲಿಪ್ರಕರಣ ತನಿಖೆಯ ಪ್ರಗತಿ ನಿಧಾವಾಯಿತು ಅಂತಲೂ ಹೇಳಲಾಗುತ್ತಿದೆ. ಆದರೆ ಅವರ ಅಭಿಮಾನಿಗಳು ಇದನ್ನು ಆತ್ಮಹತ್ಯೆಯಲ್ಲಿ ಕೊಲೆ ಎಂದು ಆರೋಪಿಸಿದ್ದಾರೆ. ಈ ಸಾವು ಹಲವು ಸಂಶಯಗಳಿಗೆ ಎಡೆ ಮಾಡಿಕೊಟ್ಟಿತ್ತು.

ಸದ್ಯ ಕೇಂದ್ರೀಯ ತನಿಖಾ ದಳದ (ಸಿಬಿಐ) ಅಧಿಕಾರಿಗಳ ಸುಪರ್ದಿಯಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ. ಈ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿರುವ ದೇವೇಂದ್ರ ಫಡ್ನವೀಸ್ ಅವರು, ಪ್ರಕರಣ ಕುರಿತು ಸಾಕಷ್ಟು ಪುರಾವೆಗಳು ಸರ್ಕಾರದ ಬಳಿ ಇವೆ. ಕೆಲವು ಸಾಕ್ಷಗಳನ್ನು ಪೊಲೀಸರಿಗೂ ನೀಡುವಂತೆ ತಿಳಿಸಲಾಗಿದೆ. ಈ ಕುರಿತು ಕೆಲವರಿಂದ ಮಾಹಿತಿ ಸಹ ಅಧಿಕಾರಿಗಳು ಸಂಗ್ರಹಿಸಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.
ಅಧಿಕಾರಿಗಳು ಸಲ್ಲಿಸಿದ ಪುರಾವೆಗಳ ವಿಶ್ವಾಸಾರ್ಹತೆ, ನಿಖರತೆ ಸತ್ಯದ ಕುರಿತು ಪರಿಶೀಲನೆ ಪ್ರಕ್ರಿಯೆ ನಡೆಯುತ್ತಿದೆ. ಹೀಗಾಗಿ ಪ್ರಕರಣದ ತನಿಖೆ ಇನ್ನೂ ಪ್ರಗತಿಯಲ್ಲಿದೆ. ಹೀಗಾಗಿ ಈ ಕುರಿತು ಯಾವುದೇ ಹೆಚ್ಚಿನ ಮಾಹಿತಿ ನೀಡಲಾಗಲಿ, ಪ್ರತಿಕ್ರಿಯೆ ನೀಡುವುದಾಗಲಿ ನಾನು ಮಾಡುವುದಿಲ್ಲ. ಅವರ ಸಾವು ಅಕಾಲಿಕ ಎಂದು ಫಡ್ನವಿಸ್ ತಿಳಿಸಿದರು.

ರಿಯಾ ಚಕ್ರವರ್ತಿ ವಿಚಾರಣೆ
ಸುಶಾಂತ್ ಸಿಂಗ್ ಮತ್ತು ರಿಯಾ ಚಕ್ರವತಿ ಪ್ರೀತಿಸುತ್ತಿದ್ದರು ಎನ್ನಲಾಗಿತ್ತು. ಸುಶಾಂತ್ ಸಾವಿನ ಬಳಿಕ ರಿಯಾ ಚಕ್ರವರ್ತಿ ಅವರು ಸಾವಿನ ಕುರಿತ ಮಾದಕವಸ್ತು ಆರೋಪದಲ್ಲಿ ಸುಮಾರು ಒಂದು ತಿಂಗಳು ಸೆರೆವಾಸ ಅನುಭವಿಸಿದರು. ಪ್ರಕರಣ ಸಂಬಂಧ ಅವರನ್ನು ವಿಚಾರಣೆಗೆ ಒಳಪಡಿಸಲಾಯಿತು.
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದೆ. ಅವರು ಸತ್ತು ಮೂರು ವರ್ಷವಾದರೂ ಇನ್ನೂ ಸಹ ಈ ಸಾವು ಕೊಲೆಯೋ ಇಲ್ಲ ಆತ್ಮಹತ್ಯೆಯೋ ಎಂಬುದು ತಿಳಿದು ಬಂದಿಲ್ಲ. ತನಿಖೆ ನಡೆಯುತ್ತಲೆ ಇದೆ. ಸುಶಾಂತ್ ಸಿಂಗ್ ರಜಪೂತ್ ಅವರದ್ದು ಕೊಲೆ ಎಂದು ಅವರ ಮರಣೋತ್ತರ ಪರೀಕ್ಷೆ ಮಾಡಿದ್ದ ಕೂಪರ್ ಆಸ್ಪತ್ರೆ ಸಿಬ್ಬಂದಿ ಸ್ಫೋಟಕ ಹೇಳಿಕೆ ನೀಡಿದ್ದರು. ಈ ಆಯಾಮದಲ್ಲೂ ಸಹ ಈಗಾಗಲೇ ಅಧಿಕಾರಿಗಳು ತನಿಖೆ ಕೈಗೆತ್ತಿಕೊಂಡಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications