• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

8ನೇ ತರಗತಿ ವರೆಗೆ ಹಿಂದಿ ಭಾಷೆ ಕಡ್ಡಾಯ ಮಾಡಲು ಕೇಂದ್ರ ಸಜ್ಜು

|
Google Oneindia Kannada News

ನವದೆಹಲಿ, ಜನವರಿ 10: ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ತ್ರಿಭಾಷಾ ಸೂತ್ರದ ಅನ್ವಯ ಎಂಟನೇ ತರಗತಿವರೆಗೆ ಹಿಂದಿ ಭಾಷೆ ಕಲಿಕೆ ಕಡ್ಡಾಯ ಆಗಲಿದೆ. ಹೊಸ ಶಿಕ್ಷಣ ನೀತಿ ವರದಿ ತಯಾರಿಸಲಾಗಿದ್ದು, ಕೇಂದ್ರಕ್ಕೆ ಸಲ್ಲಿಕೆ ಆಗಲಿದೆ.

ಕೆ.ಕಸ್ತೂರಿ ರಂಗನ್ ನೇತೃತ್ವದಲ್ಲಿ ರಚಿಸಲಾಗಿದ್ದ ಸಮಿತಿಯು ಶಿಕ್ಷಣ ನೀತಿ ಕುರಿತಾಗಿ ವರದಿ ತಯಾರಿಸಿದ್ದು, ವರದಿ ಜಾರಿಯಾದಲ್ಲಿ ದೇಶದಾದ್ಯಂತ ಎಂಟನೇ ತರಗತಿ ವರೆಗೂ ಹಿಂದಿ ಶಿಕ್ಷಣ ಕಡ್ಡಾಯ ಆಗಲಿದೆ.

ಶಿಕ್ಷಣ ಗುಣಮಟ್ಟ ಹೆಚ್ಚಿಸಲು ಕೇಂದ್ರ ಸರ್ಕಾರದಿಂದ ಹೊಸ ಯೋಜನೆಶಿಕ್ಷಣ ಗುಣಮಟ್ಟ ಹೆಚ್ಚಿಸಲು ಕೇಂದ್ರ ಸರ್ಕಾರದಿಂದ ಹೊಸ ಯೋಜನೆ

ಕೆ.ಕಸ್ತೂರಿರಂಗನ್ ಅವರ ಸಮಿತಿಯು ಭಾರತ ಕೇಂದ್ರಿತ ಶಿಕ್ಷಣ ಪದ್ಧತಿಗೆ ಒತ್ತು ನೀಡುವ ಸಲುವಾಗಿ ಶಿಕ್ಷಣ ನೀತಿಯಲ್ಲಿ ಹಲವು ಬದಲಾವಣೆಗಳನ್ನು ಸೂಚಿಸಲಿದೆ. ವ್ಯವಸ್ಥಿತ ಮಾದರಿಯಲ್ಲಿ ಏಕರೂಪದ ಪ್ರಾಥಮಿಕ ಶಿಕ್ಷಣವನ್ನು ದೇಶದಾದ್ಯಂತ ನೀಡುವಂತೆ ಸಹ ವರದಿಯಲ್ಲಿ ಹೇಳಲಾಗಿದೆ.

ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು, ಪಶ್ಚಮ ಬಂಗಾಳ, ಕೇರಳ, ಗೋವಾ, ಅಸ್ಸಾಂಗಳಲ್ಲಿ ಹಿಂದಿ ಕಲಿಕೆ ಕಡ್ಡಾಯವಾಗಿಲ್ಲ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯು (ಎನ್‌ಇಪಿ) ಅಸ್ಥಿತ್ವಕ್ಕೆ ಬಂದರೆ ವಿದ್ಯಾರ್ಥಿಗಳು ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ಶಿಕ್ಷಣ ಹಂತದಲ್ಲಿ ಹಿಂದಿ ಕಲಿಯಲೇ ಬೇಕಾಗುತ್ತದೆ.

ಗಣಿತ, ವಿಜ್ಞಾನ, ಸಮಾಜ ಶಾಸ್ತ್ರಗಳು ಪ್ರೌಢಶಿಕ್ಷಣ ಹಂತದ ವೆರಗೂ ಏಕರೀತಿಯ ಪಠ್ಯದ ಬಗ್ಗೆಯೂ ಕಸ್ತೂರಿರಂಗನ್ ವರದಿಯಲ್ಲಿ ಶಿಫಾರಸ್ಸು ಮಾಡಲಾಗಿದೆ. ವರದಿಯ ಕರಡು ಪ್ರತಿ ಸಿದ್ಧವಾಗಿದ್ದು, ಕೆಲವೇ ದಿನಗಳಲ್ಲಿ ಕೇಂದ್ರ ಸರ್ಕಾರಕ್ಕೆ ಸಲ್ಲಿಕೆ ಆಗಲಿದೆ.

ಸರಕಾರಿ ಯೋಜನೆಯನ್ನೇ ಬಂಡವಾಳ ಮಾಡಿಕೊಂಡ ಈತ ಈಗ 'ಲಕ್ಷಾಧಿಪತಿ'ಸರಕಾರಿ ಯೋಜನೆಯನ್ನೇ ಬಂಡವಾಳ ಮಾಡಿಕೊಂಡ ಈತ ಈಗ 'ಲಕ್ಷಾಧಿಪತಿ'

ಹಿಂದಿ ಭಾಷೆ ಕಡ್ಡಾಯಕ್ಕೆ ಈಗಾಗಲೇ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ವಿರೋಧ ವ್ಯಕ್ತವಾಗುತ್ತಿದೆ. ಕೇಂದ್ರವು ಹಿಂದಿ ಹೇರಿಕೆಗೆ ಯತ್ನಿಸುತ್ತಿದೆ ಎಂದು ಸಿದ್ದರಾಮಯ್ಯ ಈಗಾಗಲೇ ಹೇಳಿಕೆ ನೀಡಿದ್ದಾರೆ.

ಕನ್ನಡ ಉಳಿಸಲು ಪಾಶ್ಚಾತ್ಯ ಶಿಕ್ಷಣದ ಗುಂಗಿನಿಂದ ಹೊರಬನ್ನಿ: ಕಂಬಾರಕನ್ನಡ ಉಳಿಸಲು ಪಾಶ್ಚಾತ್ಯ ಶಿಕ್ಷಣದ ಗುಂಗಿನಿಂದ ಹೊರಬನ್ನಿ: ಕಂಬಾರ

ಇಂದಿರಾ ಗಾಂಧಿ ಅವರ ಆಡಳಿತ ಅವಧಿಯಲ್ಲಿ ಮೊದಲ ಶಿಕ್ಷಣ ನೀತಿಯನ್ನು ಜಾರಿಗೊಳಿಸಲಾಗಿತ್ತು. ಆ ನಂತರ ರಾಜೀವ್ ಗಾಂಧಿ ಅವಧಿಯಲ್ಲಿ ಎರಡನೇ ಶಿಕ್ಷಣ ನೀತಿ ಜಾರಿಗೊಳಿಸಲಾಗಿತ್ತು. ಈ ಹೊಸ ಶಿಕ್ಷಣ ನೀತಿ ಜಾರಿಯಾದಲ್ಲಿ ಮೂರನೇ ಶಿಕ್ಷಣ ನೀತಿ ಜಾರಿ ಆದಂತಾಗುತ್ತದೆ.

English summary
Hindi may be mandatory for till class 8th to all students as per the new education policy. K Kasthurirangan comity created a draft report about education policy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X