ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಿಂದೂಗಳು ಹೆಚ್ಚು ಮಕ್ಕಳು ಮಾಡಬೇಕು: ಗಿರಿರಾಜ್ ಸಿಂಗ್

By ಒನ್ಇಂಡಿಯಾ ಪ್ರತಿನಿಧಿ
|
Google Oneindia Kannada News

ಪಾಟ್ನಾ, ಅಕ್ಟೋಬರ್ 24: ಹೆಚ್ಚು ಮಕ್ಕಳನ್ನು ಮಾಡಿಕೊಳ್ಳುವ ಮೂಲಕ ದೇಶದಲ್ಲಿ ಹಿಂದೂಗಳು ಜನಸಂಖ್ಯೆಯನ್ನು ಹೆಚ್ಚಿಸಿಕೊಳ್ಳುವುದಕ್ಕೆ ಗಂಭೀರವಾಗಿ ಯೋಚಿಸಬೇಕು ಎಂದು ಸೋಮವಾರ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಹೇಳಿದ್ದಾರೆ. 'ದೇಶದಲ್ಲಿ ಹಿಂದೂಗಳ ಜನಸಂಖ್ಯೆ ಹೆಚ್ಚಿಸಿಕೊಳ್ಳುವ ಅಗತ್ಯ ಇದೆ' ಎಂದಿದ್ದಾರೆ.

ದೇಶದ ಎಂಟು ರಾಜ್ಯಗಳಲ್ಲಿ ಹಿಂದೂಗಳ ಜನಸಂಖ್ಯೆ ಕಡಿಮೆಯಾಗಿದೆ. ಆದ್ದರಿಂದ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಗಿರಿರಾಜ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಕಳೆದ ಅಗಸ್ಟ್ ನಲ್ಲಿ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ನೀಡಿದ ಸಲಹೆಯನ್ನು ಮತ್ತೊಮ್ಮೆ ನೆನಪಿಸಿಕೊಂಡ ಅವರು, ಹಿಂದೂಗಳು ಹೆಚ್ಚು ಮಕ್ಕಳನ್ನು ಪಡೆಯುವುದನ್ನು ಯಾವ ಕಾನೂನು ತಡೆಯುವುದಿಲ್ಲ ಎಂದು ಹೇಳಿದ್ದಾರೆ.[ಉಡುಪಿ : ವಿವಾದದ ನಡುವೆ ಕನಕ ನಡೆಗೆ ಪೇಜಾವರ ಶ್ರೀಗಳಿಂದ ಚಾಲನೆ]

'Hindus should increase their population'

ಭಾರತ ಸ್ವತಂತ್ರಗೊಂಡಾಗ ಶೇ 10ರಷ್ಟಿದ್ದ ಮುಸ್ಲಿಂ ಜನಸಂಖ್ಯೆ ಈಗ ಶೇ 24ರಷ್ಟಿದೆ. ಹಿಂದೂಗಳ ಜನಸಂಖ್ಯೆ ಶೇ 90ರಿಂದ 76ಕ್ಕೆ ಕುಸಿದಿದೆ ಎಂದು ಸಚಿವ ಹೇಳಿದ್ದಾರೆ. ಅಲ್ಪಸಂಖ್ಯಾತರು ಎಂಬ ಪದಕ್ಕೆ ಮುಸ್ಲಿಮರು ಸೂಕ್ತರೇ ಎಂಬ ಬಗ್ಗೆ ಮತ್ತೊಮ್ಮೆ ಪರಿಶೀಲನೆಯಾಗಬೇಕು. ಜಿಲ್ಲಾ ಮಟ್ಟದಿಂದ, ಬ್ಲಾಕ್, ಹಳ್ಳಿಗಳ ಮಟ್ಟದಲ್ಲಿ ಮುಸ್ಲಿಮರ ಜನಸಂಖ್ಯೆ ಹೆಚ್ಚಳವಾಗಿದೆ. ಅಲ್ಲೆಲ್ಲ ಅಲ್ಪಸಂಖ್ಯಾತರು ಎಂಬ ಪದ ಬಳಕೆ ಕೈಬಿಡಬೇಕು ಎಂದು ಆಗ್ರಹಿಸಿದ್ದಾರೆ.

English summary
Hindus need to increase their population in the country. They should take this issue seriously as their population has been decreasing in eight states in the country, sai by central minister Giriraj Singh in Patna, Bihar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X