ರಾಜ್ಯಸಭೆಯಲ್ಲಿಯೂ ಮಹಿಳಾ ಮೀಸಲಾತಿ ಮಸೂದೆಗೆ ಒಪ್ಪಿಗೆ

ನವದೆಹಲಿ, ಸೆಪ್ಟೆಂಬರ್ 22; ಸಂಸತ್ ವಿಶೇಷ ಅಧಿವೇಶನವನ್ನು ಗುರುವಾರವೇ ಅನಿರ್ದಿಷ್ಟಾವಧಿಗೆ ಮುಂದೂಡಿಕೆ ಮಾಡಲಾಗಿದೆ. ಗುರುವಾರದ ನಡೆದ ಕೊನೆಯ ದಿನದ ಕಲಾಪದಲ್ಲಿ ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆಯಲ್ಲಿಯೂ ಅಂಗೀಕಾರವಾಗಿದೆ.

ನಿಗದಿಯಂತೆ ಸೆಪ್ಟೆಂಬರ್ 22ರ ಶುಕ್ರವಾರದ ತನಕ ಸಂಸತ್ ಉಭಯ ಸದನಗಳ ವಿಶೇಷ ಅಧಿವೇಶನ ನಡೆಯಬೇಕಿತ್ತು. ಆದರೆ ಗುರುವಾರವೇ ಅಧಿವೇಶನ ಮುಕ್ತಾಯಗೊಂಡಿದೆ. ವಿಶೇಷ ಅಧಿವೇಶನದಲ್ಲಿ ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ಅನುಮೋದನೆಗೊಂಡಿದೆ.

Historic Step Rajya Sabha Clears Womens Reservation Bill

ಬುಧವಾರ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರಗೊಂಡಿತ್ತು. ಗುರುವಾರ ರಾಜ್ಯಸಭೆಯಲ್ಲಿ ಮಸೂದೆಗೆ ಅಂಗೀಕಾರ ಸಿಕ್ಕಿದ ಬಳಿಕ ಉಭಯ ಸದನಗಳ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿಕೆ ಮಾಡಲಾಗಿದೆ. ಅಂಗೀಕಾರಗೊಂಡಿರುವ ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿಗಳ ಸಹಿ ಮಾತ್ರ ಬಾಕಿ ಇದೆ.

ಸರ್ವಾನುಮತದ ಅಂಗೀಕಾರ; ಮಹಿಳಾ ಮೀಸಲಾತಿ ಮಸೂದೆ ಕುರಿತು ರಾಜ್ಯಸಭೆಯಲ್ಲಿ ಗುರುವಾರ ಬೆಳಗ್ಗೆಯಿಂದಲೇ ಚರ್ಚೆ ಆರಂಭವಾಗಿತ್ತು. ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಸೇರಿದಂತೆ ಅನೇಕ ಸದಸ್ಯರು ಮಸೂದೆ ಕುರಿತು ಕಲಾಪದಲ್ಲಿ ಮಾತನಾಡಿದರು.

ಸುಮಾರು 11 ಗಂಟೆಗಳ ಚರ್ಚೆಯ ಬಳಿಕ ಸರ್ವಾನುಮತದಿಂದ ಮಹಿಳಾ ಮೀಸಲಾತಿ ಮಸೂದೆಯನ್ನು ರಾಜ್ಯಸಭೆಯಲ್ಲಿ ಅಂಗೀಕಾರ ಮಾಡಲಾಯಿತು. 215 ಸದಸ್ಯರು ಸಹ ಮಸೂದೆಯ ಪರವಾಗಿ ಮತ ಚಲಾವಣೆ ಮಾಡಿದರು. ಈ ಮೂಲಕ ಹೊಸ ಸಂಸತ್‌ ಭವನದಲ್ಲಿ ಅಂಗೀಕಾರ ಪಡೆದ ಮೊದಲ ಮಸೂದೆ ಎಂಬ ಹೆಗ್ಗಳಿಕೆಯೂ ಮಹಿಳಾ ಮೀಸಲಾತಿ ಮಸೂದೆ ಮುಡಿಗೇರಿತು.

ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಂಗೀಕಾರಗೊಂಡ ಮಹಿಳಾ ಮೀಸಲಾತಿ ಮಸೂದೆಯನ್ನು ರಾಷ್ಟ್ರಪತಿಗಳಿಗೆ ಕಳಿಸಿ ಕೊಡಲಾಗುತ್ತದೆ. ರಾಷ್ಟ್ರಪತಿಗಳ ಅಂಕಿತದ ಬಳಿಕ ಅದು ಕಾನೂನು ಆಗಲಿದೆ. ಜನಗಣತಿ ಬಳಿಕ ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ನೀಡುವ ಕಾನೂನು ಜಾರಿಗೆ ಬರಲಿದೆ.

ಮಸೂದೆ ಸರ್ವಾನುಮತದಿಂದ ಅಂಗೀಕಾರವಾದ ಬಳಿಕ ಮಾತನಾಡಿದ ರಾಜ್ಯಸಭೆ ಸ್ಪೀಕರ್, ಉಪ ರಾಷ್ಟ್ರಪತಿ ಜಗದೀಪ್ ಧನ್‌ಕರ್, ಐತಿಹಾಸಿಕ ಸಾಧನೆಗೆ ಕೈ ಜೋಡಿಸಿದ ಎಲ್ಲಾ ಸದಸ್ಯರಿಗೆ ಅಭಿನಂದನೆಗಳನ್ನು ತಿಳಿಸಿದರು. ಹಿಂದೂ ಪಂಚಾಂಗದ ಪ್ರಕಾರ ಇಂದು ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನವಾಗಿದೆ. ಇಂದೇ ಮಸೂದೆ ಅಂಗೀಕಾರವಾಗಿದ್ದು, ಕಾಕತಾಳೀಯ ಎಂದರು.

ಮಸೂದೆ ಅಂಗೀಕಾರವಾದ ಬಳಿಕ ಟ್ವೀಟ್ ಮಾಡಿದ ಪ್ರಧಾನಿ ನರೇಂದ್ರ ಮೋದಿ, ನಮ್ಮ ರಾಷ್ಟ್ರದ ಪ್ರಜಾಸತ್ತಾತ್ಮಕ ಪಯಣದಲ್ಲಿ ಇದೊಂದು ನಿರ್ಣಾಯಕ ಕ್ಷಣ ಎಂದು ಬಣ್ಣಿಸಿದರು. ಭಾರತೀಯರಿಗೆ ಅಭಿನಂದನೆಗಳು. ನಾರಿ ಶಕ್ತಿ ವಂದನ್ ಅಧಿನಿಯಮದ ಪರವಾಗಿ ಮತ ಚಲಾಯಿಸಿದ ಎಲ್ಲಾ ರಾಜ್ಯಸಭಾ ಸದಸ್ಯರಿಗೂ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಸರ್ವಾನುಮತದ ಬೆಂಬಲ ನಿಜಕ್ಕೂ ಸಂತೋಷ ನೀಡುತ್ತದೆ ಎಂದು ಹೇಳಿದ್ದಾರೆ.

ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡ ಕಾಂಗ್ರೆಸ್‌ ಸದಸ್ಯರು ಮಸೂದೆ ಸ್ವಾಗತಿಸುತ್ತೇವೆ. ಆದರೆ ಇತರ ಹಿಂದುಳಿದ ವರ್ಗಗಳಿಗೆ ಇದರಲ್ಲಿ ಮೀಸಲಾತಿ ಇಲ್ಲದಿರುವುದರಿಂದ ಅಪೂರ್ಣವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಲೋಕಸಭೆಯಲ್ಲಿ ಬುಧವಾರ ಮಹಿಳಾ ಮೀಸಲಾತಿ ಮಸೂದೆಗೆ ಒಪ್ಪಿಗೆ ಸಿಕ್ಕಿತ್ತು. ಇಬ್ಬರು ಸಂಸದರು ಮಾತ್ರ ಮಸೂದೆ ವಿರುದ್ಧವಾಗಿ ಮತ ಚಲಾವಣೆ ಮಾಡಿದ್ದರು. ಆದರೆ ರಾಜ್ಯಸಭೆಯಲ್ಲಿ ಎಲ್ಲಾ ಸದಸ್ಯರು ಒಪ್ಪಿಗೆ ನೀಡುವ ಮೂಲಕ ಸರ್ವಾನುಮತದಿಂದ ಮಸೂದೆಗೆ ಅಂಗೀಕಾರ ನೀಡಲಾಗಿದೆ.

ಈ ಮಸೂದೆ ಕಾನೂನು ಆಗಿ ಜಾರಿಗೊಂಡ ಬಳಿಕ ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳಾ ಸದಸ್ಯರ ಸಂಖ್ಯೆ ಏರಿಕೆಯಾಗಲಿದೆ. ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರವಾದ ಬಳಿಕ ಸಂಸತ್‌ನ ಮಹಿಳಾ ಸದಸ್ಯರು ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+