Hit And Drag Case: ವಾಹನಗಳಿಗೆ ಡಿಕ್ಕಿ ಹೊಡೆದು, ಕಾರನ್ನು 3 ಕಿಮೀ.ವರೆಗೆ ಎಳೆದೊಯ್ದ ಟ್ರಕ್ ಚಾಲಕ: ವಿಡಿಯೋ

ಕುಡಿದ ಟ್ರಕ್ ಚಾಲಕ ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದು, ಯುಪಿಯ ಮೀರತ್‌ನಲ್ಲಿ ಕಾರನ್ನು 3 ಕಿಮೀ ವರೆಗೆ ಎಳೆದೊಯ್ದ ವಿಡಿಯೋ ವೈರಲ್ ಆಗಿದೆ.

ಮೀರತ್ ಫೆಬ್ರವರಿ 13: ಮತ್ತೊಂದು ಹಿಟ್ ಅಂಡ್ ಡ್ರ್ಯಾಗ್ ಪ್ರಕರಣದಲ್ಲಿ ಟ್ರಕ್ ಚಾಲಕನೊಬ್ಬ ಕಾರನ್ನು ಮೂರು ಕಿಲೋಮೀಟರ್ ವರೆಗೆ ಎಳೆದೊಯ್ದ ಘಟನೆ ಮೀರತ್ ನಲ್ಲಿ ನಡೆದಿದೆ. ಇಡೀ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ ವೈರಲ್ ಆಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಕಾರಿನಲ್ಲಿದ್ದ ಯಾರಿಗೂ ಗಾಯಗಳಾಗಿಲ್ಲ ಮತ್ತು ಬಸ್ ಚಾಲಕನನ್ನು ಬಂಧಿಸಲಾಗಿದೆ.

ಟ್ರಕ್ ಚಾಲಕ ಕಾರನ್ನು ಎಳೆಯುತ್ತಿದ್ದಾಗ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದು ನಂತರ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾನೆ ಎಂದು ಪ್ರತ್ಯಕ್ಷದರ್ಶಿ ಪೊಲೀಸರಿಗೆ ತಿಳಿಸಿದ್ದಾರೆ. ಸದ್ಯ ಆತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಕಾರಿನಲ್ಲಿದ್ದವರಲ್ಲಿ ಒಬ್ಬರು ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ, ಟ್ರಕ್ ಚಾಲಕ ಇತರ ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದಿದ್ದಾನೆ. ಚಾಲಕನಿಗೆ ನಿಲ್ಲಿಸುವಂತೆ ಸೂಚಿಸಿದಾಗ ಕಾರನ್ನು ಮೂರು ಕಿ.ಮೀ.ವರೆಗೂ ಎಳೆದೊಯ್ದಿದ್ದಾನೆ ಎಂದು ಆರೋಪಿಸಲಾಗಿದೆ.

ಟ್ರಕ್ ಚಾಲಕ ಅಮಿತ್ ಎಂದು ಗುರುತಿಸಲಾಗಿದ್ದು, ಮದ್ಯದ ಅಮಲಿನಲ್ಲಿದ್ದ ಎಂದು ಪರ್ತಾಪುರ್ ಪೊಲೀಸ್ ಠಾಣೆಯಲ್ಲಿ ನಿಯೋಜಿಸಲಾದ ಪೊಲೀಸರು ತಿಳಿಸಿದ್ದಾರೆ.

ಮತ್ತೊಂದು ಹಿಟ್ ಅಂಡ್ ಡ್ರ್ಯಾಗ್ ಪ್ರಕರಣ

ಉತ್ತರ ಪ್ರದೇಶದ ಮಥುರಾ ಬಳಿಯ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಕಳೆದ ಮಂಗಳವಾರ ಬೆಳಗಿನ ಜಾವ ಭೀಕರ ಅಪಘಾತ ಸಂಭವಿಸಿತ್ತು. ವೇಗವಾಗಿ ಬಂದ ಕಾರೊಂದು ಅಪರಿಚಿತ ವ್ಯಕ್ತಿಗೆ ಡಿಕ್ಕು ಹೊಡೆದಿದ್ದು, ಚಾಲಕ ದೇಹವನ್ನು 10 ಕಿ.ಮೀ.ಗೂ ಹೆಚ್ಚು ದೂರ ಎಳೆದೊಯ್ದಿರುವ ದಾರುಣ ಘಟನೆ ನಡೆದಿದೆ.

Hit And Drag Case: Truck Driver Hits Vehicles, Drags Car For 3 Km: Video

ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರಿನಲ್ಲಿದ್ದ ಪುರುಷ ಮತ್ತು ಮಹಿಳೆಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಮಥುರಾ ಪೊಲೀಸ್ ಮೂಲಗಳು ತಿಳಿಸಿವೆ. ಪ್ರಕರಣದಲ್ಲಿ ಭಾಗಿಯಾದ ಸ್ವಿಫ್ಟ್ ಡಿಜೈರ್ ಕಾರನ್ನು ಚಾಲನೆ ಮಾಡುತ್ತಿದ್ದ ವ್ಯಕ್ತಿಯನ್ನು ದೆಹಲಿ ನಿವಾಸಿ ವೀರೇಂದ್ರ ಸಿಂಗ್ ಎಂದು ಗುರುತಿಸಲಾಗಿದೆ. ದಟ್ಟವಾದ ಮಂಜು ಮತ್ತು ಕಳಪೆ ಗೋಚರತೆಯಿಂದ ವ್ಯಕ್ತಿ ಕಾರಿಗೆ ಸಿಲುಕಿರುವುದನ್ನು ಗುರುತಿಸಲು ಸಾಧ್ಯವಾಗಲಿಲ್ಲ. ಎಕ್ಸ್‌ಪ್ರೆಸ್‌ವೇಯಲ್ಲಿ ದಟ್ಟವಾದ ಮಂಜಿನಿಂದಾಗಿ ಕಡಿಮೆ ಗೋಚರತೆ ಇತ್ತು ಎಂದು ಸಿಂಗ್ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+