Hit And Run Case: ಮಲಗಿದ್ದವನ ಮೇಲೆ ಹರಿದ ಕಾರು- ಸಂಸದರ ಪುತ್ರಿ ಅಂದರ್ ಬಾಹರ್
ಚೆನ್ನೈ ಜೂನ್ 19: ಫುಟ್‌ಪಾತ್ ಮೇಲೆ ಮಲಗಿದ್ದವನ ಮೇಲೆ ಸಂಸದನ ಪುತ್ರಿ ಕಾರು ಹರಿದ ಆರೋಪ ಕೇಳಿ ಬಂದಿದೆ. ವ್ಯಕ್ತಿ ಮೇಲೆ ಕಾರು ಹರಿದು ಬಳಿಕ ಸಂಸದರ ಪುತ್ರಿ ಅಲ್ಲಿಂದ ಪರಾರಿಯಾಗಿದ್ದಾರೆ.
ಸೋಮವಾರ ಸಂಜೆ ಚೆನ್ನೈನಲ್ಲಿ ರಾಜ್ಯಸಭಾ ಸಂಸದರೊಬ್ಬರ ಪುತ್ರಿ ತನ್ನ ಐಷಾರಾಮಿ ಬಿಎಂಡಬ್ಲ್ಯು ಕಾರಿನಲ್ಲಿ ತೆರಳುತ್ತಿದ್ದಾಗ ವ್ಯಕ್ತಿಯ ಮೇಲೆ ತನ್ನ ಕಾರು ಹರಿಸಿದ್ದಾಳೆ ಎಂಬ ಆರೋಪ ಕೇಳಿ ಬರುತ್ತಿದೆ.

ಇದರಿಂದ ಸೂರ್ಯ ಎಂಬ 21 ವರ್ಷದ ಪೇಂಟರ್ ಗಂಭೀರವಾಗಿ ಗಾಯಗೊಂಡಿದ್ದು, ನಂತರ ಆತ ಸಾವನ್ನಪ್ಪಿದ್ದಾನೆ ಎಂದು ಮಾಧ್ಯಮ ವರದಿಗಳು ಹೇಳಿವೆ. ಆರೋಪಿಯನ್ನು ಚೆನ್ನೈ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಆದರೆ ಶೀಘ್ರದಲ್ಲೇ ಅವರು ಜಾಮೀನು ಪಡೆದು ವಾಪಸ್ ಮನೆಗೆ ಮರಳಿದ್ದಾರೆ. ಇದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಹೌದು... ಹಿಟ್ ಅಂಡ್ ರನ್ ಪ್ರಕರಣದಲ್ಲಿ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ (ವೈಎಸ್‌ಆರ್‌ಸಿಪಿ) ರಾಜ್ಯಸಭಾ ಸಂಸದ ಬಿಡಾ ಮಸ್ತಾನ್ ರಾವ್ ಅವರ ಪುತ್ರಿ ಮಾಧುರಿ ಅವರನ್ನು ಬಂಧಿಸಲಾಗಿತ್ತು. ಬಳಿಕ ಅವರನ್ನು ಜಾಮೀನಿನ ಮೇಲೆ ಬಿಡಿಸಲಾಗಿದೆ.
ಏನಿದು ಪ್ರಕರಣ?
ಸೋಮವಾರ ಸಂಜೆ ವೇಗವಾಗಿ ಬಂದ ಬಿಎಂಡಬ್ಲ್ಯು ಕಾರು ಫುಟ್‌ಪಾತ್‌ನಲ್ಲಿ ಮಲಗಿದ್ದ ಸೂರ್ಯ ಅವರ ಮೇಲೆ ಹರಿದಿದೆ. ತೀವ್ರ ಗಾಯಗೊಂಡಿದ್ದ ವ್ಯಕ್ತಿಯನ್ನು ತಕ್ಷಣ ಆಸ್ಪತ್ರೆಗ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಘಟನೆ ನಡೆದ ತಕ್ಷಣ ಆರೋಪಿ ಮಹಿಳಾ ಚಾಲಕಿ ಮತ್ತು ಆಕೆಯ ಜೊತೆಗಿದ್ದ ಮತ್ತೊಬ್ಬರು ಸ್ಥಳದಿಂದ ಪರಾರಿಯಾಗಿದ್ದಾರೆ.
ಕಾರು ಮಾಲೀಕರಿಗೆ ಸಮನ್ಸ್
ಮಾಹಿತಿ ಪ್ರಕಾರ ಮೃತರನ್ನು ಸೂರ್ಯ ಎಂದು ಗುರುತಿಸಲಾಗಿದೆ. ಸೋಮವಾರ ರಾತ್ರಿ ಬೆಸೆಂಟ್‌ನಗರದ ಫುಟ್‌ಪಾತ್‌ನಲ್ಲಿ ಮಲಗಿದ್ದ ವೇಳೆ ಐಷಾರಾಮಿ ಕಾರೊಂದು ಢಿಕ್ಕಿ ಹೊಡೆದು ಸೂರ್ಯ ಸಾವನ್ನಪ್ಪಿದ್ದಾರೆ. ಅಡ್ಯಾರ್ ಟ್ರಾಫಿಕ್ ಇನ್ವೆಸ್ಟಿಗೇಶನ್ ವಿಂಗ್ ಪೊಲೀಸರು ಐಪಿಸಿ ಸೆಕ್ಷನ್ 304 ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಕಾರು ಮಾಲೀಕರಿಗೆ ಸಮನ್ಸ್ ಜಾರಿ ಮಾಡಿದ್ದಾರೆ.
ಠಾಣೆ ಮುಂದೆ ಪ್ರತಿಭಟನೆ
ಘಟನೆ ನಡೆದ ಬಳಿಕ ಮಾಧುರಿ ತಕ್ಷಣವೇ ಸ್ಥಳದಿಂದ ಪರಾರಿಯಾಗಿದ್ದಾರೆ. ಆದರೆ ಅವರ ಸ್ನೇಹಿತೆ ಕಾರಿನಿಂದ ಕೆಳಗಿಳಿದು ಅಪಘಾತದ ನಂತರ ನೆರೆದಿದ್ದ ಜನರೊಂದಿಗೆ ಜಗಳವಾಡಲು ಪ್ರಾರಂಭಿಸಿದರು. ಸ್ವಲ್ಪ ಸಮಯದ ನಂತರ ಆಕೆಯೂ ಅಲ್ಲಿಂದ ಪರಾರಿಯಾಗಿದ್ದಾರೆ. ಗುಂಪಿನಲ್ಲಿದ್ದ ಕೆಲವರು ಸೂರ್ಯ ಅವರನ್ನು ಆಸ್ಪತ್ರೆಗೆ ಕರೆದೊಯ್ದರು. ಆದರೆ ಅಲ್ಲಿ ಅವರು ಸಾವನ್ನಪ್ಪಿದ್ದಾರೆ.
ಸೂರ್ಯನ ಮದುವೆಯಾಗಿ ಎಂಟು ತಿಂಗಳು ಮಾತ್ರ ಕಳೆದಿತ್ತು. ಆತನ ಸಂಬಂಧಿಕರು ಮತ್ತು ನೆರೆಹೊರೆಯವರು ಜೆ-5 ಶಾಸ್ತ್ರಿನಗರ ಪೊಲೀಸ್ ಠಾಣೆಯಲ್ಲಿ ಆರೋಪಿಯನ್ನು ಬಂಧಿಸಿ ನ್ಯಾಯಕ್ಕಾಗಿ ಒತ್ತಾಯಿಸಿದರು.
ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ವೀಕ್ಷಿಸಿದ ಪೊಲೀಸರು, ಕಾರು ಬಿಎಂಆರ್ (ಬಿಡಾ ಮಸ್ತಾನ್ ರಾವ್) ಗ್ರೂಪ್‌ಗೆ ಸೇರಿದ್ದು ಮತ್ತು ಪುದುಚೇರಿಯಲ್ಲಿ ನೋಂದಣಿಯಾಗಿದೆ ಎಂದು ಕಂಡುಹಿಡಿದರು. ಕೊನೆಗೆ ಪ್ರಕರಣದಲ್ಲಿ ಮಾಧುರಿಯನ್ನು ಬಂಧಿಸಲಾಗಿತ್ತು, ಆದರೆ ಆಕೆಗೆ ಪೊಲೀಸ್ ಠಾಣೆಯಿಂದಲೇ ಜಾಮೀನು ಸಿಕ್ಕಿದೆ. ಇದರಿಂದ ಅವರು ಹೊರ ಬಂದಿದ್ದಾರೆ.
ಭಾರೀ ಸುದ್ದಿಯಾಗಿದ್ದ ಪುಣೆ ಪ್ರಕರಣ
ಮೇ 18ರಂದು ಪುಣೆಯ ಕಲ್ಯಾಣಿನಗರ ಪ್ರದೇಶದಲ್ಲಿ ಅಪ್ರಾಪ್ತ ಬಾಲಕನೊಬ್ಬ ತನ್ನ ಕಾರಿನಿಂದ ಬೈಕ್‌ಗೆ ಡಿಕ್ಕಿ ಹೊಡೆದಿದ್ದ. ಅಪಘಾತದಲ್ಲಿ ಇಬ್ಬರು ಯುವ ಸಾಫ್ಟ್‌ವೇರ್ ವೃತ್ತಿಪರರು ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದವನು ಎಸ್ಕೇಪ್ ಆಗಿದ್ದು ಅವರ ತಂದೆ ಮತ್ತು ಅಜ್ಜನನ್ನು ಬಂಧಿಸಲಾಗಿದೆ. ಈ ಪ್ರಕರಣ ಇಡೀ ದೇಶದಲ್ಲಿ ಸಂಚಲನ ಮೂಡಿಸಿತ್ತು.
-
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್












Click it and Unblock the Notifications