ಹಿಜ್ಬುಲ್ ಆಪರೇಷನ್ ಕಮಾಂಡರ್ ಸೇರಿ ಮೂವರು ಉಗ್ರರ ಹತ್ಯೆ
ಶ್ರೀನಗರ, ಆಗಸ್ಟ್ 14 : ಹಿಜ್ಬುಲ್ ಮುಜಾಹಿದೀನ್ ಉಗ್ರ ಸಂಘಟನೆಯ ಆಪರೇಷನ್ ಕಮಾಂಡರ್ ಸೇರಿದಂತೆ ಮೂವರು ಉಗ್ರರನ್ನು ಭಾನುವಾರ ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಎನ್‌ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ.
ಆಪರೇಷನ್ ಕಮಾಂಡರ್, ಬುರ್ಹಾನ್ ವಾನಿಯ ಉತ್ತರಾಧಿಕಾರಿ ಯಾಸಿನ್ ಐಟೂ ಅಲಿಯಾಸ್ ಗಝ್ನವಿ ಸೇರಿದಂತೆ ಮೂವರು ಉಗ್ರರನ್ನು ಭಾರತೀಯ ಭದ್ರತಾ ಪಡೆ ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿದೆ. ಇನ್ನಿಬ್ಬರನ್ನು ಉಮರ್ ಮತ್ತು ಇರ್ಫಾನ್ ಎಂದು ಗುರುತಿಸಲಾಗಿದೆ.

ಉಗ್ರರು ಅಡಗಿ ಕುಳಿತಿರುವ ಬಗ್ಗೆ ಸ್ಥಳೀಯ ಪೊಲೀಸರು ನೀಡಿದ ಮಾಹಿತಿ ಆಧರಿಸಿ ವಿಶೇಷ ಕಾರ್ಯಾಚರಣೆ ಪಡೆಯ ಪೊಲೀಸರು ಶೋಪಿಯಾನ್ ಜಿಲ್ಲೆಯ ಅವ್ನಿರ್ ಗ್ರಾಮದ ಪ್ರದೇಶವನ್ನು ಸುತ್ತುವರೆದು ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ದಾಳಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ.
ಈ ಮಧ್ಯೆ ಮತ್ತೊಂದು ಭಯೋತ್ಪಾದಕರ ಗುಂಪೊಂದು ಬಂಡಿಪೊರಾದ ಹಾಜಿನ್ ಪ್ರದೇಶದಲ್ಲಿ ಪೊಲೀಸ್ ಶೋಧನಾ ಸ್ಥಳದಲ್ಲಿ ದಾಳಿ ನಡೆಸಿದೆ. ಇದರಲ್ಲಿ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ












Click it and Unblock the Notifications