ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿಯೊಂದಿಗೆ ಸಂಘ ಬೆಳೆಸಿದ ನಾಯಕನನನ್ನು ಪಕ್ಷದಿಂದ ಉಚ್ಛಾಟಿಸಿದ ಕಾಂಗ್ರೆಸ್

|
Google Oneindia Kannada News

ಉತ್ತರಾಖಂಡ, ಜ.14: ಉತ್ತರಾಖಂಡ ವಿಧಾನಸಭಾ ಚುನಾವಣೆಗೆ ಕೆಲವು ದಿನಗಳು ಬಾಕಿ ಇರುವಾಗಲೇ ಕಾಂಗ್ರೆಸ್ ಮುಖ್ಯಸ್ಥನನ್ನು ಉಚ್ಛಾಟಿಸಲಾಗಿದೆ.

ಕಣಿವೆ ರಾಜ್ಯ ಉತ್ತರಾಖಂಡದ ಕಾಂಗ್ರೆಸ್‌ನಲ್ಲಿ ಪ್ರಮುಖ ರಾಜಕೀಯ ಬೆಳವಣಿಗೆಯಾಗಿದೆ. ಆಡಳಿತಾರೂಢ ಬಿಜೆಪಿ ಪಕ್ಷದ ವಿರುದ್ಧ ಹೋರಾಡಬೇಕಿದ್ದ ಉತ್ತರಾಖಂಡ ಕಾಂಗ್ರೆಸ್ ಘಟಕದ ಮಾಜಿ ಅಧ್ಯಕ್ಷ ಕಿಶೋರ್ ಉಪಾಧ್ಯಾಯ, ಬಿಜೆಪಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ ಅವರನ್ನು ಪಕ್ಷದ ಎಲ್ಲ ಜವಾಬ್ದಾರಿಗಳಿಂದ ಉಚ್ಛಾಟಿಸಲಾಗಿದೆ.'

ಕಿಶೋರ್ ಉಪಾಧ್ಯಾಯ ಕಳೆದ ಜ.3ರಂದು ಉತ್ತರಾಖಂಡ ಬಿಜೆಪಿ ಸಂಘಟನಾ ಕಾರ್ಯದರ್ಶಿ ಅಜಯ್‌ಕುಮಾರ್ ಅವರ ಮನೆಯಲ್ಲಿ ಕೆಲ ಬಿಜೆಪಿ ನಾಯಕರನ್ನು ಭೇಟಿ ಮಾಡಿದ್ದರು. ಆ ಸಭೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹ ಇದ್ದರು.

Hobnobbing with BJP: Congress leader Kishore Upadhyay Back from party

ಹಲವು ಬಾರಿ ಎಚ್ಚರಿಕೆ

ಈ ಸಂಬಂಧ ಉತ್ತರಾಖಂಡ ಕಾಂಗ್ರೆಸ್ ಉಸ್ತುವಾರಿ ದೇವೇಂದ್ರ ಯಾದವ್ ಅವರು, ಪಕ್ಷ ವಿರೋಧಿ ಚಟುವಟಿಕೆ ಹಾಗೂ ಬಿಜೆಪಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ ಕಿಶೋರ್ ಉಪಾಧ್ಯಾಯ ಅವರಿಗೆ ನೋಟಿಸ್ ಜಾರಿ ಮಾಡಿದ್ದರು. ಹೀಗೆ ಹಲವು ಎಚ್ಚರಿಕೆ ನೀಡಿದರೂ ಸಹ ಕಿಶೋರ್ ಉಪಾಧ್ಯಾಯ ಪಕ್ಷ ವಿರೋಧ ಚಟುವಟಿಕೆ ಮುಂದುವರಿಸಿದ್ದರಿಂದ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ.

ಉಚ್ಛಾಟನಾ ಪತ್ರದಲ್ಲಿ ದೇವೇಂದ್ರ ಯಾದವ್, 'ಭ್ರಷ್ಟ ಬಿಜೆಪಿ ಸರ್ಕಾರವನ್ನು ಕಿತ್ತೆಸೆಯಲು ಮತ್ತು ಬದಲಾವಣೆಗಾಗಿ ಉತ್ತರಾಖಂಡ ರಾಜ್ಯದ ಜನ ಹಂಬಲಿಸುತ್ತಿದ್ದಾರೆ. ಬಿಜೆಪಿ ನಾಯಕತ್ವದಲ್ಲಿ ನಡೆಯುತ್ತಿರುವ ಸರ್ಕಾರದಲ್ಲಿ ಎಲ್ಲ ಹಂತದಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ, ದುರಾಡಳಿತ ಹೆಚ್ಚಾಗಿದೆ. ಇಂತಹ ಕೆಟ್ಟ ಆಡಳಿತದ ಬಗ್ಗೆ ಜನರಲ್ಲಿ ಆಕ್ರೋಶ ಹೆಚ್ಚಾಗುತ್ತಿದೆ. ಇಂತಹ ಸಂದರ್ಭದಲ್ಲಿ ಸವಾಲನ್ನು ಸ್ವೀಕರಿಸಿ ಕೆಲಸ ಮಾಡುವುದು ' ಎಂದು ಹೇಳಿದ್ದಾರೆ.

'ದುರಂತ ಎಂದರೆ ನೀವು ಬಿಜೆಪಿ ಮತ್ತು ಇತರೆ ರಾಜಕೀಯ ಪಕ್ಷಗಳೊಂದಿಗೆ ಸ್ನೇಹ ಸಂಬಂಧ ಬೆಳೆಸಿ ಈ ಹೋರಾಟವನ್ನು ದುರ್ಬಲಗೊಳಿಸಲು ನೋಡುತ್ತಿದ್ದೀರಿ ಮತ್ತು ಜನರ ಉದ್ದೇಶವನ್ನೂ ದುರ್ಬಲಗೊಳಿಸುತ್ತಿದ್ದೀರಿ. ನಿಮಗೆ ಹಲವು ಬಾರಿ ಎಚ್ಚರಿಕೆಯನ್ನು ನೀಡಿದ್ದರೂ ಸಹ ಪಕ್ಷ ವಿರೋಧಿ ಚಟುವಟಿಕೆಗಳನ್ನು ಮಾಡುತ್ತಿದ್ದೀರಿ. ಹೀಗಾಗಿ ಪಕ್ಷದ ಎಲ್ಲ ಜವಾಬ್ದಾರಿಗಳಿಂದ ನಿಮ್ಮನ್ನು ಬಿಡುಗಡೆಗೊಳಿಸಲಾಗಿದೆ' ಎಂದು ದೇವೇಂದ್ರ ಯಾದವ್ ಬರೆದ ಪತ್ರದಲ್ಲಿ ಹೇಳಿದ್ದಾರೆ.

ರಾವತ್ ವಿರುದ್ಧ ಅಸಮಾಧಾನ ಹೊಂದಿದ್ದ ಕಿಶೋರ್ ಉಪಾಧ್ಯಾಯ

ಉತ್ತರಾಖಂಡ ವಿಧಾನಸಭಾ ಚುನಾವಣೆಯನ್ನು ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ನೇತೃತ್ವದಲ್ಲಿ ಕಾಂಗ್ರೆಸ್ ಎದುರಿಸುತ್ತಿದೆ. ರಾವತ್ ವಿರುದ್ಧ ಅಸಮಾಧಾನ ಹೊಂದಿದ್ದ ಕಿಶೋರ್ ಉಪಾಧ್ಯಾಯ ಕೆಲವು ನಿಲುವುಗಳನ್ನು ಕೆಲವೊಮ್ಮ ನೇರವಾಗಿ ವಿರೋಧಿಸಿದ್ದರು. ಅಲ್ಲದೆ, ಕಾಂಗ್ರೆಸ್‌ನಲ್ಲಿ ಇದ್ದುಕೊಂಡೇ ಇತರೆ ಪಕ್ಷಗಳ ಜೊತೆ ಸಂಪರ್ಕ ಹೊಂದಿದ್ದಕ್ಕಾಗಿ ಅವರನ್ನು ಪಕ್ಷದಿಂದ ಹೊರಹಾಕಲಾಗಿದೆ.

ಫೆ.14ರಂದು ಮತದಾನ
ಉತ್ತರಾಖಂಡದಲ್ಲಿ ಜನವರಿ 21ರಂದು ಅಧಿಸೂಚನೆ ಹೊರಬೀಳಲಿದ್ದು, ನಾಮಪತ್ರ ಸಲ್ಲಿಸಲು ಜನವರಿ 28 ಕೊನೆಯ ದಿನಾಂಕವಾಗಿರುತ್ತದೆ, ಜನವರಿ 29ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ, ನಾಮಪತ್ರ ಹಿಂಪಡೆಯಲು ಜನವರಿ 31 ಕೊನೆಯ ದಿನಾಂಕವಾಗಿದ್ದು, ಫೆ.14ರಂದು ಮತದಾನ ನಡೆಯಲಿದೆ.

Recommended Video

ಭಾರತೀಯ ಸೇನೆಯಿಂದ ಸ್ಪೆಷಲ್ ವಿಡಿಯೋ ಬಿಡುಗಡೆ | Oneindia Kannada

ಉತ್ತರಾಖಂಡ ರಾಜ್ಯದ ಒಟ್ಟು 70 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಫೆ.14ರಂದು ಮತದಾನ ನಡೆಯಲಿದೆ. ಮಾರ್ಚ್ 10ರಂದು ಚುನಾವಣಾ ಫಲಿತಾಂಶ ಪ್ರಕಟ ಆಗಲಿದೆ. ಉತ್ತರಾಖಂಡ ಅಭ್ಯರ್ಥಿಗಳ ವೆಚ್ಚದ ಮಿತಿ 40 ಲಕ್ಷ ರೂ. ಇರಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.

English summary
The Valley State is a major political development in the Congress of Uttarakhand. Former president of the Uttarakhand Congress unit, Kishore Upadhyay, who had Hobnobbing with BJP. Congress has been expelled from all party responsibilities.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X