School Holidays: ಜನವರಿ 17ರ ವರೆಗೆ ಶಾಲೆಗಳಿಗೆ ರಜೆ ಘೋಷಣೆ
School Holidays: ಸಾಮಾನ್ಯವಾಗಿ ಶಾಲಾ-ಕಾಲೇಜುಗಳಿಗೆ ಪ್ರಕೃತಿ ವಿಕೋಪಗಳಂತಹ ಸಂದರ್ಭದಲ್ಲಿ, ಹಬ್ಬಗಳ ವೇಳೆ ರಜೆ ನೀಡಲಾಗುತ್ತದೆ. ಅದರಲ್ಲೂ ಜನವರಿ 14ರಂದು ವರ್ಷದ ಮೊದಲ ಹಬ್ಬದ ಸಂಕ್ರಾಂತಿ ವೇಳೆ ಬಹುತೇಕ ರಾಜ್ಯಗಳಲ್ಲಿ ಒಂದು ದಿನ ಮಾತ್ರ ರಜೆ ನೀಡಲಾಗುತ್ತದೆ. ಆದರೆ, ಇದೀಗ ಕೆಲವು ಕಡೆಗಳಲ್ಲಿ ಇದನ್ನು ಜನವರಿ 17ರ ವರೆಗೂ ವಿಸ್ತರಣೆ ಮಾಡಲಾಗಿದೆ. ಮಾಹಿತಿ ಇಲ್ಲಿದೆ ತಿಳಿಯಿರಿ.
ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭಮೇಳ ಸಂಭ್ರಮ ಜೋರಾಗಿ ನಡೆಯುತ್ತಿದ್ದರೆ, ದಕ್ಷಿಣ ಭಾರತದ ಬಹುತೇಕ ರಾಜ್ಯಗಳಲ್ಲಿ ವರ್ಷದ ಮೊದಲ ಮಕರ ಸಂಕ್ರಾಂತಿ ಸಡಗರ ಕಳೆಗಟ್ಟಿದೆ. ತಮಿಳುನಾಡಿನಲ್ಲಿ ಪೊಂಗಲ್ ಹಬ್ಬ, ತೆಲಂಗಾಣದಲ್ಲಿ ಮಕರ ಸಂಕ್ರಾಂತಿಯನ್ನ ವಿಶೇಷವಾಗಿ ಆಚರಣೆ ಮಾಡಲಾಗುತ್ತದೆ. ಈಗಾಗಲೇ ಕರ್ನಾಟಕದಲ್ಲಿ ಜನವರಿ 14ರಂದು ಒಂದೇ ದಿನ ಈ ಹಬ್ಬವನ್ನು ಆಚರಣೆ ಮಾಡಲಾಗಿದ್ದು, ತಮಿಳುನಾಡು, ತೆಲಂಗಾಣದಲ್ಲಿ ಇನ್ನೂ ಕೂಡ ಹಬ್ಬವನ್ನು ಆಚರಣೆ ಮುಂದುವರೆದಿದೆ.

ಮಕರ ಸಂಕ್ರಾಂತಿ ಹಬ್ಬ ಹಿನ್ನೆಲೆ ತೆಲಂಗಾಣ ಶಿಕ್ಷಣ ಇಲಾಖೆ ಜನವರಿ 11ರಿಂದ 16ರವರೆಗೆ ರಾಜ್ಯದ ಎಲ್ಲಾ ಶಾಲೆಗಳು, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ. ಜನವರಿ 17ಕ್ಕೆ ಸರ್ಕಾರಿ ಹಾಗೂ ಖಾಸಗಿ ಶಾಲೆಗಳನ್ನ ಪುನರಾರಂಭ ಮಾಡುವಂತೆ ಆದೇಶ ಹೊರಡಿಸಿದೆ.
ತೆಲಂಗಾಣದಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡುತ್ತಿದ್ದಾರೆ. ಈ ಹಿನ್ನೆಲೆ ಶಾಲಾ ಮಕ್ಕಳು ಕೂಡ ಮನೆಯವರ ಜೊತೆ ಇದ್ದು ಸಂಕ್ರಾಂತಿ ಹಬ್ಬವನ್ನು ಆಚರಣೆ ಮಾಡಲಿ ಎಂದು ಆದೇಶ ಹೊರಡಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನೂ ತಮಿಳುನಾಡು ರಾಜ್ಯಾದ್ಯಂತ ಪೊಂಗಲ್ ಹಬ್ಬವನ್ನು ಸಂಪ್ರದಾಯಬದ್ಧವಾಗಿ ಆಚರಿಸಲಾಗುತ್ತದೆ. ಈ ಹಿನ್ನೆಲೆ ಇಲ್ಲಿನ ಸರ್ಕಾರ ಜನವರಿ 14ರಿಂದ 17ರವರೆಗೆ ಶಾಲಾ ಮಕ್ಕಳು ಪೊಂಗಲ್ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಿದೆ.
ಇನ್ನು ಕರ್ನಾಟಕ ಸೇರಿ ಇನ್ನುಳಿದ ರಾಜ್ಯಗಳು ಮಕರ ಸಂಕ್ರಾಂತಿ ಹಬ್ಬದ ದಿನ ಮಾತ್ರ ಶಾಲೆಗಳಿಗೆ ರಜೆ ಘೋಷಣೆ ಮಾಡಿವೆ. ಆದರೆ, ತಮಿಳುನಾಡು, ತೆಲಂಗಾಣ ಸೇರಿದಂತೆ ಕೆಲವೇ ಕಡೆಗಳಲ್ಲಿ ಮಾತ್ರ ಸಂಕ್ರಾಂತಿ ಹಬ್ಬವನ್ನು 3ಕ್ಕೂ ಹೆಚ್ಚು ದಿನ ಆಚರಿಸಲಾಗುತ್ತಿದೆ. ಆದ್ದರಿಂದ ಹೆಚ್ಚುವರಿಯಾಗಿ ಈ ಭಾಗದಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಮತ್ತೊಂದೆಡೆ ಉತ್ತರ ಭಾರತದ ಹಲವೆಡೆ ಈಗಾಗಲೇ ಭೀಕರ ಚಳಿ ಮುಂದುವರೆದ ಹಿನ್ನೆಲೆ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. 2024ರ ಡಿಸೆಂನಬರ್‌ನಿಂದಲೂ 2025ರ ಜನವರಿವರೆಗೂ ಉತ್ತರ ಭಾರತದ ಹಲವೆಡೆ ಭಾರೀ ಚಳಿ ಮುಂದುವರೆದ ಹಿನ್ನೆಲೆ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿತ್ತು.
-
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral












Click it and Unblock the Notifications