Pahalgam Terror Attack: ಈ ಭಾಗದ ಸರ್ಕಾರಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ಸಿಬ್ಬಂದಿಗೆ ರಜೆ ರದ್ದು
Pahalgam Terror Attack: ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ಹಿನ್ನೆಲೆ ದೇಶದ ಹಲವೆಡೆ ಭಾರೀ ಭದ್ರತೆ ಕೈಗೊಳ್ಳಲಾಗಿದೆ. ಇನ್ನು ಭಾರತ-ಪಾಕ್ ಗಡಿಯಲ್ಲಿ ಕ್ಷಣ ಕ್ಷಣಕ್ಕೂ ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದೆ. ಈ ಹಿನ್ನೆಲೆ ಜಮ್ಮು ಸರ್ಕಾರ ಹೈ ಅಲರ್ಟ್ ಆಗಿದ್ದು, ಸರ್ಕಾರಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ಎಲ್ಲಾ ಸಿಬ್ಬಂದಿ ರಜೆ ರದ್ದುಗೊಳಿಸಿದೆ.
ಈ ರಜೆ ರದ್ದು ಜಮ್ಮುವಿನ ಸರ್ಕಾರಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸಿಬ್ಬಂದಿಗೆ ಅನ್ವಯವಾಗಲಿದೆ. ಎಲ್ಲಾ ವೈದ್ಯಕೀಯ ಸಿಬ್ಬಂದಿ ಎಚ್ಚರದಿಂದ ಇರಬೇಕು. ತುರ್ತು ಔಷಧಿಗಳು ಮತ್ತು ಉಪಕರಣಗಳು ಸಿದ್ಧವಾಗಿರಬೇಕು. ತುರ್ತು ಸೇವೆಗಾಗಿ ಕಂಟ್ರೋಲ್ ರೂಮ್ ಸ್ಥಾಪನೆ ಮಾಡಬೇಕೆಂದು ಸೂಚಿಸಲಾಗಿದೆ. ಅಲ್ಲದೆ, ತುರ್ತು ಸೇವೆಗಾಗಿ 0191-2582355 ಸಹಾಯವಾಣಿಯನ್ನು ನೀಡಲಾಗಿದೆ.

ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಭಾರತ ಸಿದ್ಧವಾಗಿದೆ. ಮೂರು ಹಂತದ ಕಾರ್ಯಾಚರಣೆ ನಡೆಲು ಭಾರತೀಯ ಸೇನೆ ಮುಂದಾಗಿದ್ದು, ದೇಶದ ಅಮಾಯಕ ಪ್ರವಾಸಿಗರ ಹತ್ಯೆ ಬಳಿಕವೂ ಪಾಕಿಸ್ತಾನ ತನ್ನ ನರಿ ಬುದ್ದಿಯನ್ನು ಬಿಟ್ಟಿಲ್ಲ. ಎಲ್‌ಒಸಿ ಗಡಿಯಲ್ಲಿ ಪಾಕಿಸ್ತಾನ ಪ್ರಚೋದನೆ ಮಾಡಿದ್ದು, ಗಡಿಯಲ್ಲಿ ಗುಂಡಿನ ಸದ್ದು ಕೇಳಿಬಂದಿದೆ. ಆದ್ದರಿಂದ ಜಮ್ಮು ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ತಿಳಿದುಬಂದಿದೆ.
ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ದಾಳಿಯಿಂದ 26 ಪ್ರವಾಸಿಗರು ಸಾವನ್ನಪ್ಪಿದ್ದು, ಹಲವು ಮಂದಿ ಗಾಯಗೊಂಡಿದ್ದರು. ಇದರ ಬೆನ್ನಲ್ಲಾ ಎಚ್ಚತ್ತ ಕೇಂದ್ರ ಸರ್ಕಾರ ಹೈ ಅಲರ್ಟ್ ಆಗಿದೆ. ಉಗ್ರರನ್ನ ಹತ್ತಿಕ್ಕಲು ಶೋಧಕಾರ್ಯ ಮುಂದುವರೆಸಿದೆ. ಅಲ್ಲದೆ, ಅವರಿದ್ದಲ್ಲಿಗೆ ಹೋಗಿ ಸಂಹಾರ ಮಾಡಲು ಎಲ್ಲಾ ಸಿದ್ಧತೆಗಳನ್ನು ಕೂಡ ಮಾಡಿಕೊಂಡಿದೆ.
ಗೌತಮ್ ಗಂಭೀರ್‌ಗೆ ಜೀವ ಬೆದರಿಕೆ: ಪೆಹಲ್ಗಾಮ್ ಮೇಲೆ ಉಗ್ರರ ದಾಳಿ ಬೆನ್ನಲ್ಲೇ ಇದೀಗ ಟೀಂ ಇಂಡಿಯಾ ಕ್ರಿಕೆಟ್ ಹೆಡ್ ಕೋಚ್ ಗೌತಮ್ ಗಂಭೀರ್‌ಗೆ ಐಸಿಸ್‌ನಿಂದ ಜೀವ ಬೆದರಿಕೆ ಸಂದೇಶ ಬಂದಿದೆ.
ಪೆಹಲ್ಗಾಮ್ ಮೇಲೆ ಉಗ್ರರ ದಾಳಿ ಬೆನ್ನಲ್ಲೇ ಎಚ್ಚತ್ತ ಭಾರತ ಸರ್ಕಾರವು ದೇಶದ ಪ್ರಮುಖ ಭಾಗಗಳಲ್ಲಿ ಭಾರೀ ಬಿಗಿ ಭದ್ರತೆಗಳನ್ನು ಕೈಗೊಂಡಿದೆ. ಈ ನಡುವೆಯೇ ಇಂದು (ಏಪ್ರಿಲ್ 24) ಟೀಂ ಇಂಡಿಯಾ ಕ್ರಿಕೆಟ್ ಹೆಡ್ ಕೋಚ್ ಗೌತಮ್ ಗಂಭೀರ್‌ಗೆ ಜೀವ ಬೆದರಿಕೆ ಬಂದಿದೆ.
ಗೌತಮ್ ಗಂಭೀರ್ ಅವರಿಗೆ ಐಸಿಸ್ ಸಂಘಟನೆಯಿಂದ ಕೊಲೆ ಬೆದರಿಕೆ ಬಂದಿದೆ. ಇ-ಮೇಲ್ ಸಂದೇಶದ ಮೂಲಕ ಜೀವ ಬೆದರಿಕೆ ಹಾಕಲಾಗಿದೆ. ಇನ್ನು ಈ ಸಂಬಂಧ ಗಂಭೀರ್ ಅವರು ದೆಹಲಿಯ ರಾಜೇಂದ್ರ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಜೊತೆಗೆ ತಮ್ಮ ಕುಟುಂಬಕ್ಕೆ ಭದ್ರತೆ ನೀಡುವಂತೆ ಪೊಲೀಸರಿಗೆ ಮನವಿ ಮಾಡಿಕೊಂಡಿದ್ದಾರೆ.
ಮಾಹಿತಿ ಪ್ರಕಾರ, ಏಪ್ರಿಲ್ 22ರಂದು ಗೌತಮ್ ಗಂಭೀರ್‌ಗೆ ಇ-ಮೇಲ್ ಮೂಲಕ ಕೊಲೆ ಬೆದರಿಕೆ ಬಂದಿದೆ. Islamic State ಕಾಶ್ಮೀರ ಘಟಕ ಎಂಬ ಹೆಸರಿನಡಿ ಮೇಲ್ ಬಂದಿವೆ. ಒಂದು ಇ ಮೇಲ್ ಮಧ್ಯಾಹ್ನ ಮತ್ತು ಮತ್ತೊಂದು ಸಂಜೆ ಬಂದಿದೆ. ಎರಡೂ ಸಂದೇಶಗಳಲ್ಲೂ ಮೂರು ಪದ ಬಳಕೆ ಮಾಡಲಾಗಿದೆ. ಐ ಕಿಲ್ ಯು ಅಂತಾ ಮೇಲ್ನಲ್ಲಿ ಬರೆಯಲಾಗಿದೆ ಎಂದು ತಿಳಿದುಬಂದಿದೆ.












Click it and Unblock the Notifications